ನಂಜನಗೂಡು | ಬಸ್-ಟಿಪ್ಪರ್ ನಡುವೆ ಓವರ್​​ಟೇಕ್‌, ಮಹಿಳೆಯೊಬ್ಬರ ಕುತ್ತಿಗೆ ಕತ್ತರಿಸಿ ದಾರುಣ ಸಾವು

Date:

ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್​​ಟೇಕ್​ ವೇಳೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕ ಮಹಿಳೆಯೊಬ್ಬರು ಕುತ್ತಿಗೆ ಮತ್ತು ಕೈ ಕತ್ತರಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ಶನಿವಾರ ಸಂಭವಿಸಿದೆ.

- Advertisement -

ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಅವರು ಮೈಸೂರಿನಿಂದ ಗುಂಡ್ಲುಪೇಟೆಗೆ ನಂಜನಗೂಡು ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸಂದರ್ಭದಲ್ಲಿ ಸಿಂಧುವಳ್ಳಿ ಗ್ರಾಮದ ಬಳಿ ಮಹಿಳೆಯು ಬಸ್​​ನ ಕಿಟಕಿಯಿಂದ ಕತ್ತನ್ನು ಹೊರಹಾಕಿದ್ದು, ಅದೇ ಸಮಯದಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಮತ್ತು ಸಾರಿಗೆ ಬಸ್ ನಡುವೆ ಕ್ಷಣಾರ್ಧದಲ್ಲಿ ಅಪಘಾತವಾಗಿದೆ. ಪರಿಣಾಮ ಶಿವಲಿಂಗಮ್ಮ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.

ನಂಜನಗೂಡು ಸಂಚಾರ ಪೊಲೀಸ್ ಠಾಣೆ ಪಿಎಸ್ಐ ಸಿದ್ದರಾಜು ಮತ್ತು ಸಿಬ್ಬಂದಿ ಮಹೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಾರಿಗೆ ಬಸ್ ವಶಕ್ಕೆ ಪಡೆದುಕೊಂಡಿದ್ದಾರೆ. ನಾಪತ್ತೆಯಾಗಿರುವ ಟಿಪ್ಪರ್ ವಾಹನವನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂಜನಗೂಡು | ರೈತ ಸಂಘಟನೆಯವರ ಮೇಲಿನ ಕೇಸು ವಾಪಸ್ ಪಡೆಯುವಂತೆ ದಸಂಸ ಮನವಿ

ಮೈಸೂರು ಜಿಲ್ಲೆ, ನಂಜನಗೂಡು ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ದಸಂಸ (ಅಂಬೇಡ್ಕರ್...

ಮೈಸೂರು | ಸಿಜೆಐ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಕರಣ; ಜಿಲ್ಲಾದ್ಯಂತ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ ವತಿಯಿಂದ ಸುಪ್ರೀಂಕೋರ್ಟ್...

ಮೈಸೂರು | ನಂಜನಗೂಡು ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು...

ಮೈಸೂರು | ಹಿಮ್ಮಾವು ಭೂ ಸ್ವಾಧೀನ; ಪರಿಹಾರ ಹಣ ದುರುಪಯೋಗ : ಬಡಗಲಪುರ ನಾಗೇಂದ್ರ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘದ...