ಹುಲಿ ದಾಳಿಗೆ ಆದಿವಾಸಿ ಮಹಿಳೆ ಬಲಿ: ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರ ಆಕ್ರೋಶ

Date:

ಜಮೀನಿನ ಪಕ್ಕದಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ಆದಿವಾಸಿ ಮಹಿಳೆಯೊಬ್ಬರ ಮೇಲೆ ಹುಲಿ ದಾಳಿ ನಡೆಸಿ ಕೊಂದು, ಮೃತದೇಹವನ್ನು ಬಂಡೀಪುರ ಅರಣ್ಯದೊಳಗೆ ಎಳೆದೊಯ್ದಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡೋರನಕಟ್ಟೆ ಕಾಲೋನಿಯಲ್ಲಿ ನಡೆದಿದೆ.

- Advertisement -

ಗ್ರಾಮದ ಮಾಚಮ್ಮ (45) ಎಂಬುವವರು ಗುರುವಾರ ಮಧ್ಯಾಹ್ನ ಹಾದನೂರು ನಂಜದೇವರ ಬೆಟ್ಟದ ಸಮೀಪ ಮೇಕೆಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದೆ. ಬಳಿಕ ಅವರನ್ನು ಬಂಡೀಪುರ ಅರಣ್ಯದೊಳಗೆ ಎಳೆದೊಯ್ದಿದೆ. ವಿಷಯ ತಿಳಿದ ಅರಣ್ಯಾಧಿಕಾರಿಗಳು ಡ್ರೋನ್ ತಂತ್ರಜ್ಞಾನದ ಮೂಲಕ ಶೋಧ ನಡೆಸಿ ಮೃತದೇಹವನ್ನು ಪತ್ತೆಹಚ್ಚಿ ಕಾಡಿನಿಂದ ಹೊರತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಧರಣಿ ನಡೆಸಿದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸಂಬಂಧಪಟ್ಟ ಸಂಘಟನೆಗಳು, ಆದಿವಾಸಿಗಳ ಹೆಸರಿನಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಗಳು, ರಾಜಕಾರಣಿಗಳು ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.

ಮೃತರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಬೇಕು, ಕುಟುಂಬದ ಒಬ್ಬರಿಗೆ ಕಾಯಂ ಉದ್ಯೋಗ ಕಲ್ಪಿಸಬೇಕು, ಕಾಡುಪ್ರಾಣಿಗಳು ಗ್ರಾಮಗಳಿಗೆ ಪ್ರವೇಶಿಸದಂತೆ ಚೈನ್‌ಲಿಂಕ್ ಬೇಲಿ ಅಳವಡಿಸಬೇಕು ಹಾಗೂ ಶಾಶ್ವತ ಪರಿಹಾರ ರೂಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಅರಣ್ಯ ಇಲಾಖೆಯ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಆದಿವಾಸಿ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಹಾಗೂ ಜೀವ ವಿಮೆ ಒದಗಿಸಬೇಕು. ದಿನಗೂಲಿ ಹಣವನ್ನು ಪ್ರತಿದಿನ ಅಥವಾ ಕನಿಷ್ಠ ಮೂರು ದಿನಗಳಿಗೊಮ್ಮೆ ಪಾವತಿಸಬೇಕು. ಕೆಲಸ ಮಾಡಿದ ದಿನವೇ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು. ಅರಣ್ಯ ಇಲಾಖೆಗೆ ಅಗತ್ಯವಿರುವ ವಾಹನಗಳು, ಶಸ್ತ್ರಾಸ್ತ್ರಗಳು ಮತ್ತು ಸಿಬ್ಬಂದಿಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಕ್ಷೇತ್ರದ ಹೊರಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಡಿಸಿಎಫ್ ನಂದೀಶ್ ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.

ಹುಲಿ ದಾಳಿಯಿಂದ ಮಹಿಳೆ ಮೃತಪಟ್ಟಿರುವುದು ನೋವಿನ ಸಂಗತಿ. ಘಟನೆಗೆ ಕಾರಣವಾದ ಹುಲಿಯನ್ನು ತುರ್ತು ಕಾರ್ಯಾಚರಣೆ ನಡೆಸಿ ಸೆರೆಹಿಡಿಯಲಾಗುವುದು ಎಂದು ತಿಳಿಸಿದರು. ಮೃತರ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವುದರ ಜೊತೆಗೆ ಅರಣ್ಯ ಇಲಾಖೆ ಹಾಗೂ ಸರ್ಕಾರದಿಂದ 20 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದರು. ಹೆಚ್ಚುವರಿ ಪರಿಹಾರದ ಬೇಡಿಕೆಯನ್ನು ಪತ್ರ ವ್ಯವಹಾರದ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಮುಂದಿನ ಎರಡು ತಿಂಗಳೊಳಗೆ ಎರಡು ಕಿ.ಮೀ. ಉದ್ದದ ಚೈನ್‌ಲಿಂಕ್ ಬೇಲಿ ಅಳವಡಿಸಲಾಗುವುದು. ಅರಣ್ಯ ಇಲಾಖೆಯ ದಿನಗೂಲಿ ಕಾರ್ಮಿಕರಿಗೆ ಜೀವ ವಿಮೆ ಮಾಡಿಸಲಾಗುತ್ತಿದ್ದು, ಅವರ ಬ್ಯಾಂಕ್ ಖಾತೆಗಳಿಗೆ ದಿನಗೂಲಿ ಹಣ ಜಮೆ ಮಾಡಲಾಗುತ್ತಿದೆ. ಕಾರ್ಮಿಕರಿಗೆ ಇಲಾಖೆಯಿಂದ ದೊರೆಯಬೇಕಾದ ಸೌಲಭ್ಯಗಳನ್ನು ಒದಗಿಸಲಾಗುವುದು. ವಾಹನ, ಶಸ್ತ್ರಾಸ್ತ್ರ ಮತ್ತು ಸಿಬ್ಬಂದಿ ಹೆಚ್ಚಿಸುವ ಕುರಿತು ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ವಿಶೇಷ ವರದಿ ಓದಿದ್ದೀರಾ? ಕಬ್ಬು ಬೆಳೆಗಾರರ ಬದುಕಿಗೆ ಸಿಹಿಯಾಗದ ಕಬ್ಬಿನ ಬೆಲೆ!

ಮೈಸೂರು ಡಿಸಿಎಫ್ ರವಿಶಂಕರ್, ಎಸಿಎಫ್ ಪರಮೇಶ್, ಆರ್‌ಎಫ್‌ಒಗಳಾದ ಕೃಷ್ಣ, ಹೇಮಂತ್ ಕುಮಾರ್, ಅನಿತ್ ರಾಜ್, ಪ್ರದೀಪ್, ಹುಲ್ಲಹಳ್ಳಿ ಪೊಲೀಸ್ ನಿರೀಕ್ಷಕ ಕರಿಬಸಪ್ಪ, ಮುಖಂಡರಾದ ಶಿವಲಿಂಗಯ್ಯ, ಯಶವಂತಪುರ, ಹಾದನೂರು ಪ್ರಕಾಶ್, ಪುಟ್ಟಸ್ವಾಮಿ, ಲೋಕೇಶ್, ಮಹೇಂದ್ರ, ನಾಗೇಶ್, ಹೆಚ್.ಕೆ. ನಾಗಮಲ್ಲು, ಹಾಲೇಗೌಡ, ಅಕ್ಬರ್, ರಾಜು, ವಿಜಯ್, ಸಂಜಯ್ ಸೇರಿದಂತೆ ಹಲವರು ಪ್ರತಿಭಟನೆ ಸ್ಥಳದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕುಮ್ಕಿ, ಗೇರು ಲೀಸ್ ಭೂಮಿಗೆ ಹಕ್ಕುಪತ್ರ ನೀಡಿ; ಕಾಡುಪ್ರಾಣಿಗಳ ಹಾವಳಿ ನಿಯಂತ್ರಿಸಿ

ಪಶ್ಚಿಮ ಘಟ್ಟ ಹಾಗೂ ಕರಾವಳಿ ಭಾಗದ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ....

ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಕಾಂಗ್ರೆಸ್ಸಿಗರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯಬೇಕು ಎಂಬ ಹೇಳಿಕೆ...

ಹಾಲಿನ ದರ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಬೃಹತ್ ಪ್ರತಿಭಟನೆ

ಹಾಲಿನ ದರ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ...

ದೀಪಾವಳಿ; ಯಶವಂತಪುರ-ಮಡಗಾಂವ್-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು...