ಲಂಚ ಪಡೆವಾಗ ‘ರೆಡ್‌ಹ್ಯಾಂಡ್‌’ಆಗಿ ಸಿಕ್ಕಿಬಿದ್ದ PDO; ಕೈ ಕೊಯ್ದುಕೊಂಡು ರಂಪಾಟ

Date:

ಪಿಡಿಒವೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ‘ರೆಡ್‌ಹ್ಯಾಂಡ್’ಆಗಿ ಸಿಕ್ಕಿಬಿದ್ದಿದ್ದು, ತಪ್ಪಿಸಿಕೊಳ್ಳಲು ಕಚೇರಿಯಲ್ಲೇ ಕೈ ಕೊಯ್ದುಕೊಂಡು ರಂಪಾಟ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

- Advertisement -

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿ ಪಿಡಿಒ ಮಂಜುಳಾ ಬಂಧಿತ ಅಧಿಕಾರಿ. ಅವರು, ಪಂಚಾಯತಿ ಸಿಬ್ಬಂದಿಯೊಬ್ಬರ ಬಾಕಿ ವೇತನ ಬಿಡುಗಡೆ ಮಾಡಲು ಲಂಚ ಕೇಳಿದ್ದರು. ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮುಳ್ಳೂರು ಗ್ರಾಮದಲ್ಲಿ ನೀರುಗಂಟಿಯಾಗಿದ್ದ ಸ್ವಾಮಿ ಎಂಬುವವರು ಇತ್ತೀಚೆಗೆ ಮೃತಪಟ್ಟಿದ್ದರು. ಉದ್ಯೋಗದಲ್ಲಿದ್ದಾಗಲೇ ಮೃತಪಟ್ಟಿದ್ದರಿಂದ ಪುತ್ರ ಮಹದೇವ್ ಅವರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗಿತ್ತು. ಅಲ್ಲದೆ, ಮಹದೇವ್ ಅವರು ತಮ್ಮ ತಂದೆಯ ಎರಡು ವರ್ಷಗಳ ಬಾಕಿ ವೇತನ ಸುಮಾರು 4 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಪಿಡಿಒಗೆ ಮನವಿ ಮಾಡಿದ್ದರು. ಆ ಬಾಕಿ ವೇತನವನ್ನು ಬಿಡುಗಡೆ ಮಾಡಲು ಪಿಡಿಒ ಮಂಜುಳಾ ಅವರು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲಂಚ ನೀಡಲು ನಿರಾಕರಿಸಿದ ಮಹದೇವ್, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳ ಯೋಜನೆಯಂತೆ, ಕಚೇರಿಯಲ್ಲಿ ಮಂಜುಳಾ ಅವರು ಮುಂಗಡವಾಗಿ 25 ಸಾವಿರ ರೂ. ಹಣವನ್ನು ಲಂಚವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಡಿಒ ಮಂಜುಳಾ ಅವರನ್ನು ವಶಕ್ಕೆ ಪಡೆದಿದ್ದಾರೆ.

ಈ ಲೇಖನ ಓದಿದ್ದೀರಾ?: ಇರಾನ್ ಯುದ್ಧ: ಭಾರತ ಕಲಿಯಬೇಕಿರುವ ಪಾಠವೇನು?

ರೆಡ್‌ಹ್ಯಾಂಡ್‌ಆಗಿ ಸಿಕ್ಕಿಬಿದ್ದ ಮಂಜುಳಾ ಅವರು ಕಂಗಾಲಾಗಿದ್ದಾರೆ. ಬಂಧನದಿಂದ ತಪ್ಪಿಸಿಕೊಳ್ಳಲು ಚಾಕುವಿನಿಂದ ತಮ್ಮ ಕೈಯನ್ನು ತಾವೇ ಕೊಯ್ದುಕೊಂಡು ರಾದ್ಧಾಂತ ಮಾಡಿದ್ದಾರೆ. ರಕ್ತಸಿಕ್ತ ಸ್ಥಿತಿಯಲ್ಲಿದ್ದ ಮಂಜುಳಾ ಅವರನ್ನು ತಕ್ಷಣವೇ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಜುಳಾ ವಿರುದ್ಧ ಲಂಚ ಪ್ರಕರಣದ ಜೊತೆಗೆ, ತನಿಖೆಗೆ ಅಡ್ಡಿಪಡಿಸಿದ ಪ್ರಕರಣವನ್ನೂ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದಾರೆ. ಅವರು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ವಿಚಾರಣೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...