150 ಕೆರೆ ಯೋಜನೆ ಕಳಪೆ ಕಾಮಗಾರಿ ಆರೋಪ: ಕೆ.ಮಹದೇವ್ ವಿರುದ್ಧ ನಿತಿನ್ ವೆಂಕಟೇಶ್ ವಾಗ್ದಾಳಿ

Date:

ಪಿರಿಯಾಪಟ್ಟಣ ತಾಲ್ಲೂಕಿನ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿ ಪೈಪ್‌ಲೈನ್ ಕಾಮಗಾರಿ ಕಳಪೆಯಾಗಿ ನಡೆದಿರುವುದರಿಂದ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಆರೋಪಿಸಿದರು.

- Advertisement -

ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 150 ಕೆರೆ ನೀರು ತುಂಬಿಸುವ ಯೋಜನೆಯನ್ನು ತಮ್ಮ ತಂದೆ ಹಾಗೂ ಮಾಜಿ ಸಚಿವ ಕೆ.ವೆಂಕಟೇಶ್ ಅವರ ಅವಧಿಯಲ್ಲಿ ತರಲಾಗಿತ್ತು. 2018ರ ನಂತರ ಅಧಿಕಾರದಲ್ಲಿದ್ದ ಮಾಜಿ ಶಾಸಕ ಕೆ.ಮಹದೇವ್ ಅವರ ಅವಧಿಯಲ್ಲಿ ಯೋಜನೆಯ ಪೈಪ್‌ಲೈನ್ ಕಾಮಗಾರಿ ನಡೆದಿದ್ದು, ಕಾಮಗಾರಿ ಗುಣಮಟ್ಟದ ಬಗ್ಗೆ ಪ್ರಶ್ನೆಗಳಿವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಕೆರೆಗಳಿಗೆ ನೀರು ಹರಿಸಲು ಮುಂದಾದ ಸಂದರ್ಭದಲ್ಲಿ ಹಲವೆಡೆ ಪೈಪ್‌ಲೈನ್‌ಗಳು ಒಡೆದು ಹೋಗುತ್ತಿವೆ. ಇದರಿಂದ ಕಾಮಗಾರಿಯ ಗುಣಮಟ್ಟದ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಯೋಜನೆ ಸಮರ್ಪಕವಾಗಿ ಕಾರ್ಯಗತಗೊಳ್ಳದಿರುವುದಕ್ಕೆ ತಮ್ಮ ತಂದೆ ಕೆ.ವೆಂಕಟೇಶ್ ಅವರನ್ನು ಗುರಿಯಾಗಿಸಿಕೊಂಡು ಟೀಕೆ ಮಾಡುವುದು ಸರಿಯಲ್ಲ ಎಂದು ನಿತಿನ್ ವೆಂಕಟೇಶ್ ಹೇಳಿದರು.

ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಸುಮಾರು ₹1,200 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ತರಲಾಗಿದೆ. ₹200 ಕೋಟಿ ವೆಚ್ಚದಲ್ಲಿ ಕರಡಿಲಕ್ಕನ ಕೆರೆ ನಾಲೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಮಾಜಿ ಶಾಸಕ ಕೆ.ಮಹದೇವ್ ಹಾಗೂ ಅವರ ಪುತ್ರರು ಕೆ.ವೆಂಕಟೇಶ್ ಅವರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಬದಲು ತಮ್ಮ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಕುರಿತು ಜನರಿಗೆ ಮಾಹಿತಿ ನೀಡಲಿ ಎಂದು ಆಗ್ರಹಿಸಿದರು.

ಅಭಿವೃದ್ಧಿ ಕಾಮಗಾರಿಗಳ ‘ಶ್ವೇತಪತ್ರ’ ಪ್ರದರ್ಶನ

ಕಾಂಗ್ರೆಸ್ ರಾಜ್ಯ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ನಡೆದಿರುವ ಹಲವು ಶಾಶ್ವತ ಅಭಿವೃದ್ಧಿ ಕಾಮಗಾರಿಗಳು ಕೆ.ವೆಂಕಟೇಶ್ ಅವರ ಅಧಿಕಾರಾವಧಿಯಲ್ಲಿ ನಡೆದಿವೆ. ಅವರ ಅವಧಿಯಲ್ಲಿ ಕೈಗೊಂಡ ಕಾಮಗಾರಿಗಳ ವಿವರಗಳನ್ನು ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದ ಅವರು, ಮಾಜಿ ಶಾಸಕ ಕೆ.ಮಹದೇವ್ ಅವರು ತಮ್ಮ ಅವಧಿಯಲ್ಲಿ ತಂದಿರುವ ಶಾಶ್ವತ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಬೇಕು. ಆರೋಪ-ಪ್ರತ್ಯಾರೋಪಗಳ ಬದಲು ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆಯಾಗಬೇಕು. ಮಾಜಿ ಶಾಸಕ ಕೆ.ಮಹದೇವ್ ಅವರು ಇದೇ ರೀತಿ ಆರೋಪಗಳನ್ನು ಮುಂದುವರಿಸಿದರೆ ಅವರ ಮನೆ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮಸಣಿಕಮ್ಮ ದೇವಾಲಯದ ಅಭಿವೃದ್ಧಿ ಕುರಿತು ಆರೋಪ-ಪ್ರತ್ಯಾರೋಪ

ಮಸಣಿಕಮ್ಮ ದೇವಾಲಯದ ವಿಚಾರವಾಗಿಯೂ ಪತ್ರಿಕಾಗೋಷ್ಠಿಯಲ್ಲಿ ಆರೋಪಗಳನ್ನು ಮಾಡಲಾಯಿತು. ದೇವಾಲಯದ ಹೆಸರಿನಲ್ಲಿ ಈ ಹಿಂದೆ ನಕಲಿ ರಸೀದಿಗಳ ಮೂಲಕ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪದ ಕುರಿತು ಸಂಬಂಧಪಟ್ಟವರು ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು. ಪ್ರಸ್ತುತ ಕೆ.ವೆಂಕಟೇಶ್ ಅವರ ಅವಧಿಯಲ್ಲಿ ಸುಮಾರು ₹9 ಕೋಟಿ ವೆಚ್ಚದಲ್ಲಿ ಮಸಣಿಕಮ್ಮ ದೇವಾಲಯದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇದರಿಂದ ಯಾರು ಅಭಿವೃದ್ಧಿಯ ಪರವಾಗಿದ್ದಾರೆ ಎಂಬುದು ಜನರಿಗೆ ತಿಳಿಯಲಿದೆ ಎಂದು ಹೇಳಿದರು.

ಈ ವಿಶೇಷ ವರದಿ ಓದಿದ್ದೀರಾ? ಗ್ರೌಂಡ್ ರಿಪೋರ್ಟ್ | ‘ಕಟ್‌ ಅಂಡ್‌ ಪೇಸ್ಟ್‌’ ವೀಡಿಯೊಗಳ ಹಿಂದೆ ಸಮಾಜದ ನೆಮ್ಮದಿ ಕಳೆದುಕೊಳ್ಳಬಾರದು

ಮೂರನೇ ಪಟ್ಟಿಯಲ್ಲಿ ಪಿರಿಯಾಪಟ್ಟಣ ಬರಪೀಡಿತ ಪ್ರದೇಶ ಸೇರ್ಪಡೆ ನಿರೀಕ್ಷೆ

ಪಿರಿಯಾಪಟ್ಟಣ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವ ವಿಚಾರವಾಗಿಯೂ ನಿತಿನ್ ವೆಂಕಟೇಶ್ ಮಾತನಾಡಿದರು. ಪ್ರಸ್ತುತ ಪಟ್ಟಿಯಲ್ಲಿ ತಾಲ್ಲೂಕು ಸೇರ್ಪಡೆಯಾಗದಿರುವುದು ಕೇಂದ್ರದ ಎನ್‌ಡಿಎ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ಎಂದು ತಿಳಿಸಿದರು. ಮುಂದಿನ ಮೂರನೇ ಪಟ್ಟಿಯಲ್ಲಿ ಪಿರಿಯಾಪಟ್ಟಣವನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಈ ವಿಶೇಷ ವರದಿ ಓದಿದ್ದೀರಾ? ಗ್ರೌಂಡ್ ರಿಪೋರ್ಟ್ | ಪೊಲೀಸ್ ಸೂಚನೆ ಸುತ್ತ ವಿವಾದ: ಶಾಂತಿ ಕಾಪಾಡುವ ಕರ್ತವ್ಯಕ್ಕೆ ರಾಜಕೀಯ ಬಣ್ಣ ಬೇಡವೆಂದ ಸ್ಥಳೀಯರು

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಹಮತ್ ಜಾನ್ ಬಾಬು, ಡಿ.ಟಿ.ಸ್ವಾಮಿ, ಕೆಪಿಸಿಸಿ ಸದಸ್ಯ ಅನಿಲ್ ಕುಮಾರ್, ಟೌನ್ ಘಟಕದ ಅಧ್ಯಕ್ಷ ಎ.ಕೆ.ಗೌಡ, ಎಂಡಿಸಿಸಿ ಬ್ಯಾಂಕ್ ಸದಸ್ಯ ಲೋಕೇಶ್, ಯುವ ಘಟಕದ ಅಧ್ಯಕ್ಷ ರಘು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಕಾಪು : ಕೊಬ್ಬರಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಸಂಸ್ಕರಣಾ ಘಟಕವೊಂದರಲ್ಲಿ...