ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸಿ: ಕೆ.ವೆಂಕಟೇಶ್

Date:

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನೀಡಲು ಅವರ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ವೆಂಕಟೇಶ್ ಹೇಳಿದರು.

- Advertisement -

ಪಿರಿಯಾಪಟ್ಟಣದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವುದರ ಜೊತೆಗೆ ಆತ್ಮವಿಶ್ವಾಸ ತುಂಬಿ ಅವರನ್ನು ಗುರಿಯೆಡೆಗೆ ಕೊಂಡೊಯ್ಯುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಆಗ ಮಾತ್ರ ವಿದ್ಯಾರ್ಥಿಗಳು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇಂದು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಪೈಪೋಟಿ ನೀಡುತ್ತಿರುವುದಕ್ಕೆ ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ನೀಡುತ್ತಿರುವ ಆದ್ಯತೆಯೂ ಪ್ರಮುಖ ಕಾರಣವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ತಾಲ್ಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಸರ್ಕಾರಿ ಶಾಲೆಗಳಿದ್ದು, ಅವುಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ತಾಲೂಕಿನ 109 ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಸೌಲಭ್ಯವಿದೆ. ವಿದ್ಯಾರ್ಥಿಗಳು ತಾಂತ್ರಿಕವಾಗಿ ಬೆಳವಣಿಗೆ ಹೊಂದಲು ರೋಬೋಟ್ ಯಂತ್ರಗಳನ್ನು ಖರೀದಿಸುವಂತೆ ಸಲಹೆಗಳು ಬಂದಿದ್ದು, ಮುಂದಿನ ದಿನಗಳಲ್ಲಿ ಇದಕ್ಕೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ತಾಲ್ಲೂಕಿನಲ್ಲಿ ಎರಡು ಪದವಿ ಕಾಲೇಜುಗಳು, ಎರಡು ಐಟಿಐ ಕಾಲೇಜುಗಳು ಹಾಗೂ ಡಿಪ್ಲೊಮಾ ಕಾಲೇಜು ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿವೆ. ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಜವಾಬ್ದಾರಿಯನ್ನು ಅರಿತು ನಿರ್ವಂಚನೆಯಿಂದ ಕಾರ್ಯನಿರ್ವಹಿಸಬೇಕು. 1982ರಲ್ಲಿ ತಾಲ್ಲೂಕಿನಲ್ಲಿದ್ದ ಶಿಕ್ಷಣ ವ್ಯವಸ್ಥೆಗೂ ಇಂದಿನ ಪರಿಸ್ಥಿತಿಗೂ ಸಾಕಷ್ಟು ಬದಲಾವಣೆಯಾಗಿದೆ. ತಾಲ್ಲೂಕಿನ ಶೈಕ್ಷಣಿಕ ಬೆಳವಣಿಗೆಗೆ ಸಹಕರಿಸಿರುವುದು ಹಾಗೂ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಶ್ರಮಿಸಿರುವುದು ತೃಪ್ತಿ ತಂದಿದೆ ಎಂದರು.

ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಮಹಿಳೆಯರು ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಮುನ್ನಡೆಯುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿಯೂ ಮಹಿಳೆಯರು ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮುಂದಿದ್ದು, ಮುಂದಿನ ದಿನಗಳಲ್ಲಿ ಸಾಮಾಜಿಕ, ಶೈಕ್ಷಣಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಮುಂಚೂಣಿಯಲ್ಲಿರುವ ದಿನಗಳು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ಗ್ರೌಂಡ್ ರಿಪೋರ್ಟ್ | ‘ಕಟ್‌ ಅಂಡ್‌ ಪೇಸ್ಟ್‌’ ವೀಡಿಯೊಗಳ ಹಿಂದೆ ಸಮಾಜದ ನೆಮ್ಮದಿ ಕಳೆದುಕೊಳ್ಳಬಾರದು

ಮಹಿಳೆಯರ ಸಾಧನೆಯ ಹಿಂದೆ ತಂದೆಯಾಗಿ, ಅಣ್ಣನಾಗಿ, ಗಂಡನಾಗಿ ಪುರುಷರು ಬೆಂಬಲವಾಗಿ ನಿಂತಿರುವುದು ಭಾರತೀಯ ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಪ್ರತಿಯೊಬ್ಬ ಶಿಕ್ಷಕರಲ್ಲೂ ಸಮಯಪಾಲನೆ, ಉಪಯುಕ್ತತೆ, ದುಡಿಮೆ ಹಾಗೂ ಪರಿಶ್ರಮದ ಮನೋಭಾವ ಬೆಳೆಸಿಕೊಳ್ಳಬೇಕು. ಬಸವಣ್ಣನವರ ಸಪ್ತ ಸೂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಜ್ಞಾನ, ವಿಜ್ಞಾನ ಹಾಗೂ ಸುಜ್ಞಾನ ಎಂಬ ಮೂರು ಸೂತ್ರಗಳನ್ನು ಕಲಿಕೆಯಲ್ಲಿ ಅಳವಡಿಸಿಕೊಳ್ಳಬೇಕು. ಜ್ಞಾನಕ್ಕೂ ಅಂಕಕ್ಕೂ ನೇರ ಸಂಬಂಧವಿಲ್ಲ ಎಂದು ಹೇಳಿದರು.ಪೋಷಕರು ವಿನಾಕಾರಣ ಮಕ್ಕಳ ಮೇಲೆ ಕಲಿಕೆಯ ಒತ್ತಡ ಹೇರಬಾರದು. ಮೊಬೈಲ್ ಹಾಗೂ ಟಿವಿಯಿಂದ ಮಕ್ಕಳನ್ನು ದೂರವಿಡುವ ಜತೆಗೆ ಪೋಷಕರೂ ಅವುಗಳ ಬಳಕೆಯನ್ನು ಕಡಿಮೆ ಮಾಡಿ, ಮನೆಯಲ್ಲಿ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ಸಲಹೆ ನೀಡಿದರು.

ಈ ವಿಶೇಷ ವರದಿ ಓದಿದ್ದೀರಾ? ಗ್ರೌಂಡ್ ರಿಪೋರ್ಟ್ | ಪೊಲೀಸ್ ಸೂಚನೆ ಸುತ್ತ ವಿವಾದ: ಶಾಂತಿ ಕಾಪಾಡುವ ಕರ್ತವ್ಯಕ್ಕೆ ರಾಜಕೀಯ ಬಣ್ಣ ಬೇಡವೆಂದ ಸ್ಥಳೀಯರು

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಶಾಂತ್, ಮೈಸೂರು ಪೇಂಟ್ ಅಂಡ್ ವಾರ್ನಿಷ್ ನಿಗಮದ ಅಧ್ಯಕ್ಷ ಗಣೇಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಲೋಕೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ರಾಜಣ್ಣ, ಕೆಪಿಸಿಸಿ ಸದಸ್ಯ ಅನಿಲ್ ಕುಮಾರ್, ಕೆಡಿಪಿ ಸದಸ್ಯ ಆಯಿತನಹಳ್ಳಿ ಮಹಾದೇವ್ ಸೇರಿದಂತೆ ಶಿಕ್ಷಕರ ಸಂಘಟನೆಗಳ ವಿವಿಧ ಪದಾಧಿಕಾರಿಗಳು ಹಾಗೂ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಕಾಪು : ಕೊಬ್ಬರಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಸಂಸ್ಕರಣಾ ಘಟಕವೊಂದರಲ್ಲಿ...

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...