ಟಿ ನರಸೀಪುರದಲ್ಲಿ ಪ್ರಚೋದನಕಾರಿ ಭಾಷಣ; ಪ್ರತಾಪ್ ಸಿಂಹ ವಿರುದ್ಧ FIR ದಾಖಲು

Date:

ಟಿ ನರಸೀಪುರದಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಾಜಿ ಸಂಸದ, ಬಿಜೆಪಿಗ ಪ್ರತಾಪ್ ಸಿಂಹ ವಿರುದ್ಧ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ FIRನಲ್ಲಿ ಪ್ರತಾಪ್ ಸಿಂಹ ಹಾಗೂ ಇತರರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.

- Advertisement -

ಗಣೇಶೋತ್ಸವದ ಮೆರವಣಿಗೆಯಲ್ಲಿ ಪ್ರತಾಪ್ ಸಿಂಹ ಹಾಗೂ ಇತರರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಮಾತ್ರವಲ್ಲದೆ, ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರ ನಿಯೋಗವು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ದೂರು ಸಲ್ಲಿಸಿತ್ತು. ಕ್ರಮಕ್ಕೆ ಪಟ್ಟು ಹಿಡಿದಿತ್ತು. ಇದಲ್ಲದೆ, ಪ್ರತಾಪ್ ಸಿಂಹ ಪ್ರಚೋದನಾಕಾರಿ ಭಾಷಣ ಮಾಡಿದಾಗ ಸ್ಥಳದಲ್ಲಿದ್ದ ಟಿ. ನರಸೀಪುರ ಠಾಣೆಯ ಪಿಎಸ್‌ಐ ಮಲ್ಲೇಶ್ ಅವರೂ ಕೂಡ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಪಿಎಸ್‌ಐ ಮಲ್ಲೇಶ್ ನೀಡಿದ ದೂರಿನ ಆಧಾರದ ಮೇಲೆ ಪ್ರತಾಪ್ ಸಿಂಹ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್‌ 132, 191, 194, 196(1)(a)(b), 299, 353(1)(b)(c) ಹಾಗೂ ಸೆಕ್ಷನ್ 190ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ; ಸಾರ್ವಜನಿಕ ಸೇವಕರು ಮತ್ತು ಪೊಲೀಸರ ಅಧಿಕೃತ ಕರ್ತವ್ಯ ನಿರ್ವಹಣೆಗೆ ಅಡ್ಡಿ,  ವಿವಿಧ ಸಮುದಾಯ ಮತ್ತು ಜಾತಿಗಳ ನಡುವೆ ದ್ವೇಷ-ವೈಷಮ್ಯ ಉತ್ತೇಜನ, ಧಾರ್ಮಿಕ ನಂಬಿಕೆಗಳಿಗೆ ಅವಮಾನ ಉಂಟುಮಾಡುವಂತಹ ಪ್ರಚೋದನಕಾರಿ ಭಾಷಣ ಹಾಗೂ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪಗಳನ್ನು ಉಲ್ಲೇಖಿಸಲಾಗಿದೆ.

Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

E-KYC: ಸರ್ವರ್‌ಗಿಂತ ದೊಡ್ಡ ಸಮಸ್ಯೆ: ಜನರ ಬದುಕು

ಇ-ಕೆವೈಸಿ ಗಡುವು ವಿಸ್ತರಿಸಿದರೂ ಬದಲಾಗಬೇಕಿರುವುದು ವ್ಯವಸ್ಥೆ; ಕೊಡಗು-ಚಿಕ್ಕಮಗಳೂರು-ಚಾಮರಾಜನಗರದ ಗಡಿ ಹಳ್ಳಿಗಳವರೆಗೆ ತಲುಪಬೇಕಿದೆ...