ಮೈಸೂರು | ಡಿ.23ರಂದು ಬೆಂಗಳೂರಿನಲ್ಲಿ ‘ರೈತ ಮಹಾ ಅಧಿವೇಶನ’

Date:

ಕೃಷಿ ಸಾಲ ಮನ್ನಾ, ಬರ ಪರಿಹಾರ, ಕೃಷಿ ಉತ್ಪನ್ನಗಳ ಸಬ್ಸಿಡಿ ಸೇರಿದಂತೆ ನಾನಾ ಹಕ್ಕೊತ್ತಾಯಗಳನ್ನು ಸರ್ಕಾರಗಳ ಮುಂದಿಟ್ಟು, ದೇಶದ ನಾನಾ ಭಾಗಗಳಲ್ಲಿ ‘ರೈತ ಮಹಾ ಅಧಿವೇಶನ’ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಮುಂದಾಗಿದೆ, ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ಮಹಾ ಅಧಿವೇಶನ ನಡೆಯಲಿದೆ ಎಂದು ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

- Advertisement -

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಡಿಸೆಂಬರ್ 20ರಿಂದ ಮಹಾ ಅಧಿವೇಶನಗಳು ಆರಂಭವಾಗಲಿವೆ. ಡಿ.20ರಂದು ಕೇರಳದ ಪಾಲಕ್ಕಾಡ್‌ನಲ್ಲಿ ರೈತರ ಮಹಾ ಅಧಿವೇಶನ ನಡೆಯಲಿದೆ. 21ರಂದು ತಮಿಳುನಾಡಿನ ಚೆನ್ನೈ, 23ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ ಹಾಗೂ 26ರಂದು ಹೈದರಾಬಾದ್‌ನಲ್ಲಿ ಮಹಾ ಆಧಿವೇಶನಗಳು ನಡೆಯಲಿವೆ. ರೈತರ ಶಕ್ತಿ ಪ್ರದರ್ಶಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಲಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರೈತರಿಗೆ ಸಾಲ ನೀಡಿರುವ ಬ್ಯಾಂಕ್‌ಗಳು ಬಡ್ಡಿ ಬಡ್ಡಿ ದುಪ್ಪಟ್ಟಾಗುತ್ತದೆ ಎಂದು ರೈತರನ್ನು ಹೆದರಿಸುತ್ತಿವೆ. ಇಂಗ್ಲಿಷ್ ಪತ್ರಗಳಿಗೆ ಸಹಿ ಹಾಕಿಸಿಕೊಂಡು ಸಾಲ ನವೀಕರಿಸುತ್ತಿವೆ. ಹೀಗಾಗಿ, ರೈತರು ಸಾಲ ಮನ್ನಾದಿಂದ ವಂಚಿತರಾಗುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಇತ್ತೀಚಿನ ವರ್ಷಗಳಲ್ಲಿ ರೈತರು ಅತಿವೃಷ್ಠಿ, ಬರಗಾಲದಿಂದ ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಈ ವರ್ಷ ಬರ ಎದುರಾಗಿದೆ. ಆದರೆ, ರಾಜ್ಯ ಸರ್ಕಾರ ರೈತರಿಗೆ ಭಿಕ್ಷೆಯ ರೂಪದಲ್ಲಿ 2,000 ರೂ. ಪರಿಹಾರ ನೀಡಿದೆ. ಬರದಿಂದ ತತ್ತರಿಸಿರುವ ರೈತರಿಗೆ ಪ್ರತಿ ಎಕರೆಗೆ 25,000 ರೂ. ಪರಿಹಾರ ನೀಡಬೇಕು. ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಕೇಂದ್ರ ಸರ್ಕಾರ ಸಕ್ಕರೆ ರಫ್ತು ನಿಷೇಧ, ಎಥೆನಾಲ್‌ ಉತ್ಪಾದನೆಗೆ ತಡೆ ಹಾಕಿರುವುದು ಕಬ್ಬು ಬೆಳೆಗಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ತನ್ನ ನಿರ್ಧಾರವನ್ನು ಮರು ಪರಿಶೀಲನೆ ಮಾಡಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಜಾರಿಗೆ ತರಬೇಕು” ಎಂದು ಆಗ್ರಹಿಸಿದ್ದಾರೆ.

“60 ವರ್ಷ ದಾಟಿರುವ ರೈತರಿಗೆ ಪಿಂಚಣಿ ವ್ಯವಸ್ಥೆ ನೀಡಬೇಕು. ತಿಂಗಳಿಗೆ ಕನಿಷ್ಠ 5,000 ರೂ. ಪಂಚಣಿ ಒದಗಿಸಬೇಕು. ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಹಕ್ಕುಪತ್ರಗಳನ್ನು ಕೂಡಲೇ ವಿತರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ವೆಂಕಟೇಶ್, ಹೆಗ್ಗೂರು ರಂಗರಾಜು, ನೀಲಕಂಠಪ್ಪ ಮತ್ತು ವಾಜಮಂಗಲ ಮಾದೇವ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...