ಟಿ ನರಸೀಪುರ | ಸೌಹಾರ್ದತೆ ಕಾಯಲು ಇನ್ಸ್‌ಪೆಕ್ಟರ್‌ ಕ್ರಮ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಬಿಜೆಪಿಗರ ದಾಂಧಲೆ

Date:

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲೆಯ ಟಿ ನರಸೀಪುರ ಪೊಲೀಸ್‌ ಇನ್ಸ್‌ಪೆಕ್ಟರ್‌ ಧನಂಜಯ್ ಅವರು ಹಿಂದುತ್ವವಾದಿ ಗುಂಪುಗಳನ್ನು ಕರೆದು ಶಾಂತಿ ಸಭೆ ನಡೆಸಿ ಸೌಹಾರ್ದತೆಯ ಮಾರ್ಗದರ್ಶನ್ ನೀಡಿ, ರಂಪಾಟ ನಡೆಸದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆದರೆ, ಪೊಲೀಸರ ಕ್ರಮವನ್ನೂ ಸಹಿಸದ ವಿಪಕ್ಷ ನಾಯಕ ಆರ್. ಅಶೋಕ್, ಮೈಸೂರು ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರ ಬಿಜೆಪಿಗರು ಟಿ. ನರಸೀಪುರ ಪೊಲೀಸ್ ಠಾಣೆ ಬಳಿ ಜಮಾಯಿಸಿ ದಾಂಧಲೆ ನಡೆಸಿದ್ದಾರೆ. ಆಡಳಿತ ಯಂತ್ರಕ್ಕೇ ಬೆದರಿಕೆ ಒಡ್ಡಿದ್ದಾರೆ.

- Advertisement -

ಟಿ ನರಸೀಪುರ ಠಾಣೆ ವ್ಯಾಪ್ತಿಯಲ್ಲಿ ಗಣೇಶೋತ್ಸವ ಮತ್ತು ಮೂರ್ತಿ ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಶಾಂತಿ ಕಾಯ್ದುಕೊಳ್ಳಲು ಇನ್‌ಸ್ಪೆಕ್ಟರ್ ಧನಂಜಯ್ ಅವರು ಆಯೋಜಕರು ಮತ್ತು ಯುವಕರ ಸಭೆ ಕರೆದಿದ್ದರು. ಈ ವೇಳೆ ಮಾತನಾಡಿದ್ದ ಅವರು, “ಮೆರವಣಿಗೆಯನ್ನು ಪೊಲೀಸರು ನಿಗದಿಪಡಿಸಿದ ಮಾರ್ಗದಲ್ಲೇ ನಡೆಸಬೇಕು. ಟಿ. ನರಸೀಪುರ ಲಿಂಕ್ ರಸ್ತೆಯಲ್ಲಿ ಮೆರವಣಿಗೆಗೆ ಅವಕಾಶವಿಲ್ಲ. ಮಸೀದಿಗಳ ಮುಂಭಾಗದಲ್ಲಿ ಅನಗತ್ಯವಾಗಿ ಮೆರವಣಿಗೆ ತಡೆದು ನಿಲ್ಲಿಸುವುದು, ಪಟಾಕಿ ಸಿಡಿಸಿ ಪ್ರಚೋದನಕಾರಿ ಘೋಷಣೆ ಕೂಗುವುದನ್ನು ಸಹಿಸುವುದಿಲ್ಲ. ನಿಯಮ ಉಲ್ಲಂಘಿಸಿ ವಾತಾವರಣ ಕೆಡಿಸಿದರೆ ಗ್ರಹಚಾರ ಬಿಡಿಸುತ್ತೇನೆ” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಯಾವುದೇ ಕೋಮು ಗಲಭೆಗೆ ಆಸ್ಪದ ನೀಡಬಾರದೆಂಬ ಉದ್ದೇಶದಿಂದ ಪೊಲೀಸ್ ಅಧಿಕಾರಿ ನೀಡಿದ ಈ ಸ್ಪಷ್ಟ ಮತ್ತು ಕರ್ತವ್ಯನಿಷ್ಠ ಎಚ್ಚರಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪ್ರಚೋದನಕಾರಿ ಸನ್ನಿವೇಶಗಳನ್ನು ಸೃಷ್ಟಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಯುತ್ತಿದ್ದ ಹಿಂದುತ್ವವಾದಿ ಗುಂಪುಗಳಿಗೆ ಅಧಿಕಾರಿಯ ಈ ನಡೆಯು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಖಡಕ್ ಅಧಿಕಾರಿಯ ಕ್ರಮದಿಂದ ಕಂಗಾಲಾದ ಬಿಜೆಪಿ ನಾಯಕರು, ವಿಷಯವನ್ನು ‘ಹಿಂದು ವಿರೋಧಿ’ ಎಂದು ಬಿಂಬಿಸಲು ತಕ್ಷಣವೇ ರಂಗಕ್ಕಿಳಿದಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, ಮೈಸೂರು ಸಂಸದ ಯದುವೀರ್ ಒಡೆಯರ್ ಹಾಗೂ ಪ್ರತಾಪ್ ಸಿಂಹ ಬೆಂಬಲಿಗರೊಂದಿಗೆ ಟಿ. ನರಸೀಪುರ ಪೊಲೀಸ್ ಠಾಣೆಗೆ ಧಾವಿಸಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಧಿಕಾರಿಯ ಕ್ರಮವನ್ನು ಪ್ರಶ್ನಿಸಿದ ವಿಪಕ್ಷ ನಾಯಕ ಆರ್. ಅಶೋಕ್, “ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನೆಮ್ಮದಿಯಿಂದ ಗಣೇಶೋತ್ಸವ ಮಾಡಲೂ ಬಿಡುತ್ತಿಲ್ಲ, ಇಡೀ ರಾಜ್ಯಾದ್ಯಂತ ಸರ್ಕಾರದಿಂದ ಕಿರುಕುಳ ನಡೆಯುತ್ತಿದೆ. ಇನ್ಸ್‌ಪೆಕ್ಟರ್ ಧನಂಜಯ್ ಹೀಗೆ ಮಾತನಾಡಿದ್ದಾರೆ ಎಂದರೆ ಇದರ ಹಿಂದೆ ದೊಡ್ಡ ಷಡ್ಯಂತ್ರ ಮತ್ತು ಸರ್ಕಾರದ ಕುಮ್ಮಕ್ಕಿದೆ. ಹಿಂದುಗಳ ತಂಟೆಗೆ ಬಂದರೆ ಹುಷಾರ್, ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆಯಾದರೂ ನಾನು ಬರುತ್ತೇನೆ. ನೀವೇನು ರೌಡಿನಾ ಗ್ರಹಚಾರ ಬಿಡಿಸೋಕೆ ಅಥವಾ ಮೆರವಣಿಗೆ ಮಾಡುವವರು ರೌಡಿಗಳಾ” ಎಂದು ಬೆದರಿಕೆ ಹಾಕಿದ್ದಾರೆ.

ಇತ್ತ ಮೈಸೂರು ಸಂಸದ ಯದುವೀರ್ ಒಡೆಯರ್ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, “ಹಿಂದು ಹಬ್ಬಗಳ ಆಚರಣೆಗೆ ಮತ್ತು ಮೆರವಣಿಗೆಗಳಿಗೆ ಕಠಿಣ ಷರತ್ತುಗಳನ್ನು ವಿಧಿಸುವುದು ಈ ಸರ್ಕಾರದ ಅಭ್ಯಾಸವಾಗಿದೆ. ಮಸೀದಿ ಅಥವಾ ದೇವಸ್ಥಾನಗಳಿರುವ ರಸ್ತೆಗಳಲ್ಲಿ ಮೆರವಣಿಗೆ ಹೋಗಬಾರದು ಎಂದು ತಡೆಯುವುದು ಸೂಕ್ತವಲ್ಲ. ಸಾರ್ವಜನಿಕರಿಗೆ ಸೇರಿದ ಎಲ್ಲಾ ರಸ್ತೆಗಳಲ್ಲೂ ಮೆರವಣಿಗೆ ನಡೆಸುವ ಹಕ್ಕು ಪ್ರಜೆಗಳಿಗಿದೆ. ಧಾರ್ಮಿಕ ಚೌಕಟ್ಟಿನ ಆಚರಣೆಗಳಿಗೆ ಜಾತ್ಯತೀತತೆಯ ನೆಪದಲ್ಲಿ ಅಡೆತಡೆ ಉಂಟುಮಾಡಲಾಗುತ್ತಿದೆ” ಎಂದು ವಾದಿಸಿದ್ದಾರೆ.

ಗಲಭೆ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಕೈಗೊಳ್ಳುವ ಭದ್ರತಾ ನಿಯಮಗಳನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ನಾಯಕರ ನಡೆ, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...