ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

Date:

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ ಹಾಗೂ ನಟ ಪ್ರಭುದೇವ್ ಉದ್ಘಾಟಿಸಲಿದ್ದಾರೆ. ನಗರಾಭಿವೃದ್ಧಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

- Advertisement -

13ರಿಂದ 17ರವರೆಗೆ ಒಟ್ಟು ಐದು ದಿನಗಳ ಕಾಲ ಮೈಸೂರು ರಿಂಗ್ ರೋಡ್‌ನ ಜ್ವಾಲಾಮುಖಿ ತ್ರಿಪುರಸುಂದರಿ ದೇವಸ್ಥಾನದ ಸಮೀಪದ ವಿಶಾಲ ಮೈದಾನದಲ್ಲಿ ನಡೆಯಲಿದೆ. ಪ್ರತಿದಿನ ಸಂಜೆ 5:30ರಿಂದ ರಾತ್ರಿ 10:30ರವರೆಗೆ ಕಾರ್ಯಕ್ರಮಗಳು ಜರುಗಲಿವೆ.

ಈ ಬಾರಿ “ಹೊಸತನ ಸಂಗೀತದ ರಸದೌತಣ” ಎಂಬ ಧೇಯವಾಕ್ಯದೊಂದಿಗೆ ನಡೆಯುವ ಯುವ ದಸರಾವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ ಹಾಗೂ ನಟ ಪ್ರಭುದೇವ್ ಉದ್ಘಾಟಿಸಲಿದ್ದಾರೆ. ನಗರಾಭಿವೃದ್ಧಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಖ್ಯಾತ ಕಲಾವಿದರ ಮುಖ್ಯ ಕಾರ್ಯಕ್ರಮಗಳು ಪ್ರತಿದಿನ ರಾತ್ರಿ 7:30ರಿಂದ 10:30ರವರೆಗೆ ನಡೆಯಲಿವೆ.

ಅಕ್ಟೋಬರ್ 13ರಂದು ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ತಂಡದಿಂದ ಸಂಗೀತ ರಸಸಂಜೆ ಇದ್ದು, ಆರ್.ಜೆ. ಆಂಡಿ, ನಕಾಶ್ ಅಜೀಜ್, ವಾಸುಕಿ ವೈಭವ್, ಸಾಯಿ ವಿಘ್ನೇಶ್, ಅನನ್ಯಾ ಭಟ್, ಮಂಗ್ಲಿ, ಜಸ್ಕರನ್ ಸಿಂಗ್, ಐಶ್ವರ್ಯ ರಂಗರಾಜನ್ ಸೇರಿದಂತೆ ಹಲವು ಗಾಯಕರು ಪಾಲ್ಗೊಳ್ಳಲಿದ್ದಾರೆ.

ಅಕ್ಟೋಬರ್ 14ರಂದು ಶಂಕರ್-ಎಹ್ಸಾನ್-ಲಾಯ್ ತಂಡದಿಂದ ಹೈ-ವೋಲ್ಟೇಜ್ ಮ್ಯೂಸಿಕಲ್ ನೈಟ್, ಅಕ್ಟೋಬರ್ 15ರಂದು ಬಹುಭಾಷಾ ಪ್ರಸಿದ್ಧ ಗಾಯಕ ಸಿದ್ ಶ್ರೀರಾಮ್ ಅವರಿಂದ ರಸಸಂಜೆ, ಅಕ್ಟೋಬರ್ 16ರಂದು ಸ್ಯಾಂಡಲ್‌ವುಡ್ ನೈಟ್ಸ್ ಅಡಿಯಲ್ಲಿ ನಟ ಶಿವರಾಜ್‌ಕುಮಾರ್, ನಟಿ ರಚಿತಾ ರಾಮ್ ಹಾಗೂ ಗಾಯಕರಾದ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ಚಂದನ್ ಶೆಟ್ಟಿ, All Ok, ಅನುರಾಧಾ ಭಟ್ ಅವರಿಂದ ಕಾರ್ಯಕ್ರಮ ಮತ್ತು ಅಕ್ಟೋಬರ್ 17ರಂದು ಅಂತಾರಾಷ್ಟ್ರೀಯ ಗಾಯಕಿ ಜಾಸ್ಮಿನ್ ಸ್ಯಾಂಡ್ಲಾಸ್ ಅವರಿಂದ ಸಮಾರೋಪದ ರಸಸಂಜೆ ನಡೆಯಲಿದೆ. ಸಂಜೆ 5:30ರಿಂದ 7:30ರವರೆಗೆ ಸ್ಥಳೀಯ ಹಾಗೂ ವಿವಿಧ ಭಾಗಗಳ ಕಲಾವಿದರ ಫಿಲ್ಲರ್ ಕಾರ್ಯಕ್ರಮಗಳೂ ಪ್ರದರ್ಶನಗೊಳ್ಳಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ...

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...