ಮೈಸೂರು | ಮೂರು ತಿಂಗಳಿನಿಂದ ಆಹಾರ ಕಿಟ್ ಇಲ್ಲ: ಆದಿವಾಸಿಗಳ ಆಕ್ರೋಶ

Date:

ಆದಿವಾಸಿಗಳಿಗೆ ವಿತರಿಸಲಾಗುವ ವಿಶೇಷ ಪೌಷ್ಟಿಕ ಆಹಾರ ಸಾಮಗ್ರಿಗಳ ಕಿಟ್ ವಿತರಣೆಯಲ್ಲಿ ಉಂಟಾಗಿರುವ ನಿರಂತರ ವಿಳಂಬವನ್ನು ತಕ್ಷಣ ಬಗೆಹರಿಸಬೇಕು ಎಂದು ಒತ್ತಾಯಿಸಿ ಮೈಸೂರು ಜಿಲ್ಲೆಯ ವಿವಿಧ ಆದಿವಾಸಿ ಹಾಡಿಗಳ ನಿವಾಸಿಗಳು ಹಾಗೂ ಜನಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

- Advertisement -

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ, ಸರಗೂರು, ನಂಜನಗೂಡು, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲೂಕುಗಳಲ್ಲಿ ವಾಸಿಸುವ ಬಹುತೇಕ ಆದಿವಾಸಿಗಳು ಕೃಷಿ ಕೂಲಿಕಾರ್ಮಿಕರಾಗಿದ್ದು, ಬಡತನ ಮತ್ತು ಅಪೌಷ್ಟಿಕತೆಯ ನಡುವೆಯೇ ಜೀವನ ಸಾಗಿಸುತ್ತಿದ್ದಾರೆ. ಅವರ ಪೌಷ್ಟಿಕಾಂಶದ ಕೊರತೆಯನ್ನು ನಿವಾರಿಸಲು ಐಟಿಡಿಪಿ ಮೂಲಕ ಪ್ರತಿತಿಂಗಳು ವಿಶೇಷ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಗುತ್ತಿದೆ. ಆದರೆ ಟೆಂಡರ್ ಪ್ರಕ್ರಿಯೆಯ ವಿಳಂಬ ಸೇರಿದಂತೆ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ಕಳೆದ ಮೂರು ತಿಂಗಳುಗಳಿಂದ (ಏಪ್ರಿಲ್, ಮೇ ಹಾಗೂ ಜೂನ್) ಆಹಾರ ಕಿಟ್ ವಿತರಣೆ ಮಾಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪ್ರತಿ ವರ್ಷ ಟೆಂಡರ್ ವಿಳಂಬದ ನೆಪದಲ್ಲಿ ಒಂದು ಅಥವಾ ಎರಡು ತಿಂಗಳು ಆಹಾರ ಕಿಟ್ ವಿತರಣೆ ಸ್ಥಗಿತಗೊಳ್ಳುವುದು ಸಾಮಾನ್ಯವಾಗಿದ್ದು, ಇದರಿಂದ ಯೋಜನೆಯ ಮೂಲ ಉದ್ದೇಶವೇ ಹಾಳಾಗುತ್ತಿದೆ. ಜನವರಿ ಮತ್ತು ಫೆಬ್ರವರಿ ತಿಂಗಳ ಕಿಟ್‌ಗಳನ್ನೂ ವಿತರಿಸದೆ, ಮಾರ್ಚ್ ತಿಂಗಳಲ್ಲಿ ಕೇವಲ ಜನವರಿ ತಿಂಗಳ ಕಿಟ್ ಮಾತ್ರ ನೀಡಲಾಗಿದೆ ಎಂದು ದೂರಿದರು.

ಈ ಹಿಂದೆ 45 ದಿನಗಳಿಗೊಮ್ಮೆ ನೀಡಲಾಗುತ್ತಿದ್ದ ಆಹಾರ ಕಿಟ್‌ಗಳನ್ನು ಆದಿವಾಸಿಗಳ ಹೋರಾಟದ ಫಲವಾಗಿ ಮೂರು ವರ್ಷಗಳ ಹಿಂದೆ ಪ್ರತಿತಿಂಗಳು ವಿತರಿಸುವ ವ್ಯವಸ್ಥೆ ಜಾರಿಗೊಂಡಿತ್ತು. ಆದರೆ ಇದೀಗ ಟೆಂಡರ್ ಹಾಗೂ ಆಡಳಿತಾತ್ಮಕ ಕಾರಣಗಳಿಂದ ಆಗುತ್ತಿರುವ ವಿಳಂಬವು ಆದಿವಾಸಿಗಳ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಈ ಸಮಸ್ಯೆ ಕುರಿತು ಕಳೆದ ತಿಂಗಳು ಎಚ್.ಡಿ.ಕೋಟೆಯಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಸರ್ಕಾರಿ ಯೋಜನೆಗಳ ನಿಯಮಿತ ಅನುಷ್ಠಾನಕ್ಕಾಗಿ ಆದಿವಾಸಿಗಳು ಪದೇ ಪದೇ ಹೋರಾಟ ನಡೆಸಬೇಕಾಗಿರುವುದು ವಿಷಾದನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಏಪ್ರಿಲ್, ಮೇ ಹಾಗೂ ಜೂನ್ ತಿಂಗಳ ಪೌಷ್ಟಿಕ ಆಹಾರ ಕಿಟ್‌ಗಳನ್ನು ಕೂಡಲೇ ಒಟ್ಟಿಗೆ ವಿತರಿಸಬೇಕು, ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ ರಾಗಿಯನ್ನೂ ನೀಡಬೇಕು, ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ವಿತರಿಸಬೇಕು ಹಾಗೂ ಟೆಂಡರ್ ವಿಳಂಬದಿಂದ ಉಂಟಾಗುವ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಷ್ಕರಿಸಬೇಕು ಎಂದು ಒತ್ತಾಯಿಸಿದರು. ಜೊತೆಗೆ ಕಳೆದ ಆರ್ಥಿಕ ವರ್ಷದಲ್ಲಿ ಬಾಕಿ ಉಳಿದಿರುವ ಎರಡು ತಿಂಗಳ ಕಿಟ್‌ಗಳನ್ನು ಈ ವರ್ಷ ಹೆಚ್ಚುವರಿಯಾಗಿ ವಿತರಿಸಬೇಕು ಹಾಗೂ ಆದಿವಾಸಿ ಹಾಡಿಗಳಿಗೆ ಮನೆ, ರಸ್ತೆ, ಕುಡಿಯುವ ನೀರು, ಶೌಚಾಲಯ ಮತ್ತು ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?ಎಸ್‌ಐಆರ್ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನಾ ಜಾಥಾ: ಪ್ರಕ್ರಿಯೆ ತಕ್ಷಣ ಸ್ಥಗಿತಗೊಳಿಸಲು ಆಗ್ರಹ

ಪ್ರತಿಭಟನೆಯಲ್ಲಿ ಎಐಜೆಎಎಸ್ಸಿ ಜಿಲ್ಲಾ ಸಂಚಾಲಕ ಸುನಿಲ್, ಎಸ್‌ಯುಸಿಐ (ಕಮ್ಯುನಿಸ್ಟ್) ಜಿಲ್ಲಾ ಕಾರ್ಯದರ್ಶಿ ಬಿ. ರವಿ, ಮಹಿಳಾ ಸಂಘಟನೆಯ ಪದಾಧಿಕಾರಿಗಳಾದ ಸೀಮಾ, ಆಸಿಯಾ ಬೇಗಂ, ಪುಷ್ಪ, ಕಾರ್ಮಿಕ ಮುಖಂಡರಾದ ಎಂ. ಉಮಾದೇವಿ, ಶಿವಾನಂದ, ರೈತ ಮುಖಂಡ ಬಸವರಾಜ್, ಗಿರಿಜನ ಸಮಗ್ರ ಅಭಿವೃದ್ಧಿ ಯೋಜನೆ ಅಧಿಕಾರಿ ರಾಧ ಸೇರಿದಂತೆ ವಿವಿಧ ಹಾಡಿಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಸುಮಾರು 200ಕ್ಕೂ ಹೆಚ್ಚು ಆದಿವಾಸಿ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...