ಮೈಸೂರು | ಲಾರಿ-ಬೈಕ್ ನಡುವೆ ಭೀಕರ ಅಪಘಾತ; ಮೂವರ ಸಾವು

Date:

Advertisements

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಹಾಗೂ ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ನಂಜನಗೂಡು ತಾಲೂಕಿನ ಸಂಗಮ-ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಸಂಭವಿಸಿದೆ.

ಮೈಸೂರು ಜಿಲ್ಲೆಯ ಹಂಚೀಪುರ ಗ್ರಾಮದ ಚಿಕ್ಕಸ್ವಾಮಿ(45) ಅವರ ಪತ್ನಿ ರೂಪಾ(38), ಕಣೇನೂರು ಗ್ರಾಮದ ಚನ್ನಮಲ್ಲಮ್ಮ(55) ಮೃತ ದುರ್ದೈವಿಗಳು.

ಚಿಕ್ಕಸ್ವಾಮಿ, ಪತ್ನಿ ರೂಪಾ ಮತ್ತು ಚನ್ನಮಲ್ಲಮ್ಮ ಅವರಿದ್ದ ಬೈಕ್​​ಗೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರೂ ರಸ್ತೆ ಮೇಲೆ ಬಿದ್ದಿದ್ದಾರೆ. ಈ ವೇಳೆ, ಲಾರಿಯು ಅವರ ಮೇಲೆ ಹರಿದಿದೆ. ಚಕ್ರಕ್ಕೆ ಸಿಲುಕಿದ ಮೂವರು ನುಜ್ಜುಗುಜ್ಜಾಗಿ ಸ್ಥಳದಲ್ಲೇ ಉಸಿರು ಚಲ್ಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಐಪಿಎಲ್ ಸಂಭ್ರಮಾಚರಣೆ ವೇಳೆ ಗಲಾಟೆ; ಅಟ್ಟಾಡಿಸಿ ಯುವಕನ ಹತ್ಯೆ

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಡಿವೈಎಸ್​​ಪಿ ರಘು, ಪಿಎಸ್ಐ ಚೇತನ್ ಕುಮಾರ್, ಅಪರಾಧ ವಿಭಾಗದ ರಸೂಲ್ ಪಾಗವಾಲೆ, ಎಸ್​ಐ ಶಿವಣ್ಣ, ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತವಾದ ಲಾರಿಯು ತಮಿಳುನಾಡು ಮೂಲದ್ದಾಗಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು, ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X