ಮೈಸೂರು | ಅಧಿಕಾರಿಗಳ ಯಡವಟ್ಟು; ಬದುಕಿರುವ ವೃದ್ಧೆಗೆ ಮರಣ ಪ್ರಮಾಣ ಪತ್ರ

Date:

  • ಆಸ್ತಿ ಕಬಳಿಸಲು ವಿದೇಶದಲ್ಲಿರುವ ವ್ಯಕ್ತಿಗೂ ಡೆತ್ ಸರ್ಟಿಫಿಕೇಟ್
  • ಕಂದಾಯ ಇಲಾಖೆ ಅಧಿಕಾರಿಗಳಿಂದ ಯಡವಟ್ಟು ಆರೋಪ

ಜೀವಂತ ಇರುವಾಗಲೇ ಅಜ್ಜಿ ಮತ್ತು ಮತ್ತೊಬ್ಬ ವ್ಯಕ್ತಿಯ ಹೆಸರಿನಲ್ಲಿ ಮರಣ ಪತ್ರ ನೀಡಿರುವ ಪ್ರಕರಣ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.

- Advertisement -

ನಂಜನಗೂಡು ತಾಲೂಕಿನ ಗೀಕಹಳ್ಳಿ ಗ್ರಾಮದ ಬಸಮ್ಮ ಎಂಬ ಅಜ್ಜಿಗೆ ಜೀವಂತವಿದ್ದರೂ ಮರಣ ದೃಢೀಕರಣ ಪತ್ರವನ್ನು ಸೃಷ್ಟಿ ಮಾಡಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಬಸಮ್ಮ 1981ರ ಮಾರ್ಚ್‌ 15ರಲ್ಲೇ ಮರಣ ಹೊಂದಿದ್ದಾರೆ ಎಂದು ಮರಣ ಪ್ರಮಾಣ ಪತ್ರವನ್ನು ಕಂದಾಯ ಇಲಾಖೆಯಿಂದ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಮತ್ತೊಂದು ಪ್ರಕರಣದಲ್ಲಿ ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಚಂದ್ರಶೇಖರ್ ಎಂಬ ವ್ಯಕ್ತಿಯ ಪಿತ್ರಾರ್ಜಿತ ಆಸ್ತಿಯನ್ನು ಕಬಳಿಕೆ ಮಾಡಲು ವಿದೇಶದಲ್ಲಿರುವ ಚಂದ್ರಶೇಖರ್ ಅವರು ಬದುಕಿದ್ದರೂ ಡೆತ್ ಸರ್ಟಿಫಿಕೇಟ್ ಮಾಡಿ ಪೌತಿ ಖಾತೆ ಸೃಷ್ಟಿ ಮಾಡಿದ್ದಾರೆ ಎಂದು ದೂರಲಾಗಿದೆ.

ಮುಳ್ಳೂರು ಗ್ರಾಮದ ಸರ್ವೇ ನಂ. 442 ರಲ್ಲಿ 01.26 ಹಾಗೂ 444 ರಲ್ಲಿ 01.30 ಗುಂಟೆ ಜಮೀನನ್ನು ಕೃಷ್ಣೇಗೌಡ, ಶಿವಮಲ್ಲೇಗೌಡ ಎಂಬುವರಿಗೆ ಅಕ್ರಮವಾಗಿ ಪೌತಿ ಖಾತೆ ಬದಲಾವಣೆ ಮಾಡಿಕೊಡಲಾಗಿದೆ. 2022ನೇ ಸಾಲಿನಲ್ಲಿ ಖಾತೆ ಬದಲಾಯಿಸಿರುವ ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್, ಕಸಭಾ ಹೋಬಳಿ ರಾಜಸ್ವ ನಿರೀಕ್ಷಕ ಪ್ರಕಾಶ್, ತಹಶೀಲ್ದಾರ್‌ ಶಿವಮೂರ್ತಿ ಹಾಗೂ ಶಿರಸ್ತೇದಾರ್ ಶ್ರೀನಾಥ್ ವಿರುದ್ಧ ಆರೋಪ ಕೇಳಿಬಂದಿದೆ.

ಇನ್ನೂ ಬಸಮ್ಮನ ಹೆಸರಲ್ಲಿ ಸರ್ವೇ ನಂ. 140/2 ರಲ್ಲಿ 01 ಎಕರೆ ಜಮೀನು ಪೌತಿ ಖಾತೆ ಮಾಡಲಾಗಿದ್ದು, 2022ರ ಜು.19 ರಂದು ಎರಡು ಪ್ರಕರಣಗಳಲ್ಲಿ ನಕಲಿ ವಂಶ ವೃಕ್ಷ ದೃಢೀಕರಣ ಪತ್ರ ಸೃಷ್ಟಿಸಿ, ಮತ್ತೊಬ್ಬರಿಂದ ನಾವೇ ಬಸಮ್ಮನ ಹೆಣ್ಣು ಮಕ್ಕಳು ಎಂದು ಪೌತಿ ಖಾತೆಗೆ ಅರ್ಜಿಯನ್ನು ಹಾಕಿಸಿದ್ದಾರೆ.‌ ಆದರೆ, ಶಿವಮ್ಮ, ರತ್ನಮ್ಮ ಎಂಬುವರು ಬಸಮ್ಮನ ಹೆಣ್ಣು ಮಕ್ಕಳೇ ಅಲ್ಲ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ಎಸ್‌ಎಫ್‌ಐ ಆಗ್ರಹ

ಶಿವಮ್ಮ, ಮತ್ತು ರತ್ನಮ್ಮ ಎಂಬ ಮಹಿಳೆಯರು ಬೇರೆ ಜನಾಂಗದವರಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿಲ್ಲ. ಗ್ರಾಮಸ್ಥರನ್ನು ಕೇಳಿಲ್ಲ ಜಮೀನಿನ ಸ್ಥಳ ಪರಿಶೀಲನೆ ಮಾಡಿಲ್ಲ. ಹಣದಾಸೆಗೆ ದಾಖಲೆಗಳನ್ನು ಸೃಷ್ಟಿಸಿ, ಪರಿಶೀಲಿಸದೆ ಅಂದಿನ ತಹಶೀಲ್ದಾರ್ ಶಿವಮೂರ್ತಿ ಸಹಿ ಹಾಕಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ತಹಶೀಲ್ದಾರ್ ಶಿವಮೂರ್ತಿ, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್, ಕಸಬಾ ರಾಜಸ್ವ ನಿರೀಕ್ಷಕ ಪ್ರಕಾಶ್ ಹಾಗೂ ಶಿರಸ್ತೇದಾರ್ ಶ್ರೀನಾಥ್ ಅವರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು. ಇಂತಹ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು ಎಂದು ಜನಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ಎಂ ವಿಜಯಕುಮಾರ್ ಒತ್ತಾಯಿಸಿದ್ದಾರೆ.

ನಗರ್ಲೆ ಎಂ ವಿಜಯಕುಮಾರ್ ನೀಡಿದ ದೂರಿನಂತೆ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...