ಮೈಸೂರು | ‘ಹಾಡುಪಾಡು’ ರಾಮು ಖ್ಯಾತಿಯ ಹಿರಿಯ ಪತ್ರಕರ್ತ ಟಿಎಸ್ ರಾಮಸ್ವಾಮಿ ನಿಧನ

Date:

ಮೈಸೂರಿನ ‘ಆಂದೋಲನ’ ದಿನಪತ್ರಿಕೆಯ ಹೃದಯದಂತಿರುವ ಹಾಡುಪಾಡು ಸಂಚಿಕೆಯ ಆರಂಭಕ್ಕೆ ಮೇಟಿಯಾಗಿದ್ದ ‘ಹಾಡುಪಾಡು ರಾಮು’ ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ ಎಸ್ ರಾಮಸ್ವಾಮಿ (69) ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.

ನಗರದ ಸರಸ್ವತಿಪುರಂನ 9ನೇ ಕ್ರಾಸ್‌ನಲ್ಲಿರುವ ಸ್ವಗೃಹದಲ್ಲಿ ಮುಂಜಾನೆ 3.20ರ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿದ್ದಾರೆ.

ಪತ್ರಕರ್ತ ಟಿ ಎಸ್ ರಾಮಸ್ವಾಮಿ ಅವರು ಸೋದರಿ ರಾಜಲಕ್ಷ್ಮಿ, ಸೋದರ ಟಿ ಎಸ್ ವೇಣುಗೋಪಾಲ್, ನಾದಿನಿ ಶೈಲಜಾ, ಸೋದರಿಯ ಪತಿ ಡಾ. ಎಸ್ ತುಕಾರಾಮ್, ಮತ್ತೊಬ್ಬ ಸೋದರಿ ದಿ. ಕುಮುದವಲ್ಲಿ ಅವರ ಪತಿ ರಾಘವೇಂದ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅವಿವಾಹಿತರಾಗಿದ್ದ ರಾಮು ಅವರು, ಪತ್ರಿಕಾರಂಗದಲ್ಲಿ ಪ್ರಾಮಾಣಿಕತೆಗೆ ಮಾದರಿಯಾಗಿದ್ದರು. ನೊಂದವರು, ಬಡವರ ಏಳಿಗೆಗೆ ಪತ್ರಿಕೆಗಳು ಸ್ಪಂದಿಸಬೇಕಾದ ಬಗೆಯನ್ನು ಪ್ರತಿಕ್ಷಣ ಚಿಂತಿಸುತ್ತಿದ್ದರು. ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುತ್ತಿದ್ದರು. ರಾಮು ಅವರ ಗರಡಿಯಲ್ಲಿ ಪಳಗಿದ ದೊಡ್ಡ ಸಂಖ್ಯೆಯ ಪತ್ರಕರ್ತರು ಮೈಸೂರು ಸೇರಿದಂತೆ ರಾಜ್ಯಾದ್ಯಂತ ಇದ್ದಾರೆ.

ಅಂತ್ಯಕ್ರಿಯೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾನೂ ಸೇರಿದಂತೆ ಎಲ್ಲರೂ ಸರ್ಕಾರಿ‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಹ ವ್ಯವಸ್ಥೆ ರೂಪಿಸಬೇಕಿದೆ: ಸಿದ್ದರಾಮಯ್ಯ

ರಾಮು ಅವರ ಕುರಿತು

ಅಗ್ನಿಸೂಕ್ತ, ವಿಷ್ಣುಕ್ರಾಂತಿ ಮತ್ತು ಇತರ ಪದ್ಯಗಳು, ರಾಮು ಕವಿತೆಗಳು ಅವರ ಪ್ರಕಟಿತ ಕವನ ಸಂಕಲನಗಳು, ರಾಮು ಕವಿತೆಗಳು ಕೃತಿಯನ್ನು ಋತುಮಾನ ಪ್ರಕಾಶನ ಸಂಸ್ಥೆಯು ಪ್ರಕಟಿಸಿದಾಗ ತಮ್ಮ ಹೆಸರನ್ನು ಉಲ್ಲೇಖಿಸದಂತೆ ಅವರು ಹೇಳಿದ್ದರು.

ಆಂದೋಲನ ಪತ್ರಿಕೆಯ ಹಾಡು ಪಾಡು ಪುರವಣಿ ಅವರ ನೇತೃತ್ವದಲ್ಲಿ ರೂಪುಗೊಳ್ಳುತ್ತಿತ್ತು. ಅದರಿಂದ ಆಂದೋಲನ ರಾಮು ಎಂದೇ ಅವರನ್ನು ಓದುಗರು ಕರೆಯುತ್ತಿದ್ದರು. ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು.

ರಾಮು ಅವರು ಕವಿ, ಲೇಖಕ. ಸಾಹಿತ್ಯ, ಸಾಂಸ್ಕೃತಿಕ ಲೋಕದ ಐತಿಹ್ಯ. ದೇವನೂರು ಮಹಾದೇವ, ಓ ಎಲ್ ನಾಗಭೂಷಣ ಸ್ವಾಮಿ ಅವರಂಥವರ ಅಂತರಂಗದ ಗೆಳೆಯರಾಗಿದ್ದರು. ಅಬ್ದುಲ್ ರಶೀದ್, ಸಿರಾಜ್ ಅಹಮದ್, ರಾಜೇಂದ್ರ ಚೆನ್ನಿ, ರಹಮತ್ ತರೀಕೆರೆ, ರಘುನಂದನ ಮುಂತಾದ ಅನೇಕಾನೇಕ ಹಿರಿಯ, ಕಿರಿಯ ಲೇಖಕರು, ಕಲಾವಿದರು ಮತ್ತು ಇತರರಿಗೂ ಪರಮ ಪ್ರೀತಿಯ ನೇಹಿಗ. ತಂಪು ಬೀರುತ್ತಿದ್ದ ದೊಡ್ಡ ದೀಪವೊಂದು ಇಂದು ನಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಹಿರಿಯ ಪತ್ರಕರ್ತ ರಾಮು ನಿಧನರಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

“ರಾಮು ಎಂದೇ ಜನಪ್ರಿಯರಾಗಿದ್ದ ಪತ್ರಕರ್ತ ಮತ್ತು ಕವಿ ಟಿ ಎಸ್ ರಾಮಸ್ವಾಮಿ ಅವರ ಅನಿರೀಕ್ಷಿತ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ. ಮೈಸೂರಿನ ಸಾಹಿತ್ಯ, ಸಾಂಸ್ಕೃತಿಕ ಮತ್ತು ಮಾಧ್ಯಮ ಕ್ಷೇತ್ರ ರಾಮು ಅವರ ಅಗಲಿಕೆಯಿಂದ ಬಡವಾಗಿದೆ. ಹಲವಾರು ಬರಹಗಾರರು ಮತ್ತು ಪತ್ರಕರ್ತರನ್ನು ಸಲಹಿ ಬೆಳೆಸಿದ್ದ ರಾಮು ನನಗೂ ಆತ್ಮೀಯ ಸ್ನೇಹಿತರಾಗಿದ್ದರು. ರಾಮು ಅವರ ಸಾವಿನಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಗೆಳೆಯರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಿದ್ದರಾಮಯ್ಯ ಸ್ವೀಟ್‌ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...