ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ವರ್ಗಾವಣೆ ಮಾಡಿದ್ದು, ನೂತನ ಸಿಇಒ ಎನ್ ಹೇಮಂತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ.
ಎನ್ ಹೇಮಂತ್ ಅವರು ಐಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಬಳ್ಳಾರಿ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗದಗ | ಜಿಲ್ಲಾಧಿಕಾರಿ ಎಂ ಎಲ್ ವೈಶಾಲಿ ವರ್ಗಾವಣೆ; ನೂತನ ಡಿಸಿಯಾಗಿ ಗೋವಿಂದ ರೆಡ್ಡಿ
ಲೋಖಂಡೆಯವರನ್ನು ಬೆಂಗಳೂರಿನ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಿಸಿ ಸರ್ಕಾರ ಆದೇಶಿಸಿದೆ.

