ಉಡುಪಿ | ನಮ್ಮ ಕ್ಲಿನಿಕ್ ನ ಸೇವೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ – ಗುರ್ಮೆ ಸುರೇಶ್ ಶೆಟ್ಟಿ

Date:

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಉಡುಪಿ ಇವರ ಸಹಯೋಗದಲ್ಲಿ ಕಾಪು ಪುರಸಭೆ ವ್ಯಾಪ್ತಿಯ ಕೊಂಬಗುಡ್ಡೆಯಲ್ಲಿ ನೂತನವಾಗಿ ಆರಂಭಿಸಲಾದ ನಮ್ಮ ಕ್ಲಿನಿಕ್ ಆರೋಗ್ಯ ಘಟಕವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಂಗಳವಾರ ಉದ್ಘಾಟಿಸಿದರು.

- Advertisement -

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ರೂಪದಲ್ಲಿ ನಮ್ಮ ಕ್ಲಿನಿಕ್ ಯೋಜನೆಯು ತಾಲೂಕಿನ ಜನತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಮೂಲಭೂತ ಸೌಲಭ್ಯಗಳನ್ನು ನೀಡಲಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ನಮ್ಮ ಕ್ಲಿನಿಕ್ ನಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಹಾಗೂ ಆಯುಷ್ಮಾನ್, ಆರೋಗ್ಯ ಶ್ರೀ ಸೇವೆಗಳ ಸದುಪಯೋಗ ಪಡೆದುಕೊಳ್ಳಲು ಜನರಿಗೆ ಹೆಚ್ಚು ಅರಿವು ಮೂಡಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ತಾಲೂಕು ಆರೋಗ್ಯ ಅಧಿಕಾರಿ ಡಾ. ವಾಸುದೇವ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಭಾಗದ ಜನರ ಉಪಯೋಗಕ್ಕಾಗಿ ಸರಕಾರ ನಮ್ಮ ಕ್ಲಿನಿಕ್ ಅನ್ನು ಆರಂಭಿಸಿದ್ದು ಇದರಲ್ಲಿ 12 ವಿಧದ ಆರೋಗ್ಯ ಸೇವೆಗಳ ಪ್ಯಾಕೇಜ್ ಸೌಲಭ್ಯವಿರುತ್ತದೆ. ಉಚಿತ ಆರೋಗ್ಯ ತಪಾಸಣೆ, ಔಷಧ, ಪ್ರಯೋಗಾ ಶಾಲಾ ಸೇವೆ, ಟೆಲಿ ಕನ್ಸಲ್ಟೇಶನ್ ಸೇವೆ, ಕ್ಷೇಮ ಚಟುವಟಿಕೆ, ಉಚಿತ ರೆಫರಲ್ ಸೇವೆ ಸಹಿತ ವಿವಿಧ ಸೇವೆಗಳನ್ನು ಒದಗಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ನಮ್ಮ ಕ್ಲಿನಿಕ್‌ಗೆ ಸ್ಥಳಾವಕಾಶವನ್ನು ನೀಡಿದ ಗೌಸಿಯ ಮಸೀದಿಯ ಅಧ್ಯಕ್ಷ ನಸಿರ್ ಅಹಮದ್ ಇವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಪುರಸಭೆಯ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಸ್ಥಳೀಯ ವಾರ್ಡ್ ಸದಸ್ಯೆ ವಿದ್ಯಾಲತಾ, ಮಲ್ಲಾರ್ ಗ್ರಾಮದ ಸದಸ್ಯರಾದ ಉಮೇಶ್ ಕರ್ಕೆರ, ನುರುದ್ದೀನ್, ರುಪೋಸ್, ಮೋಹಿನಿ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರದ ಸದಸ್ಯ ಮಹಮ್ಮದ್ ಸಾಧಿಕ್ ಕೊಂಬಗುಡ್ಡೆ, ಆಡಳಿತ ವೈದ್ಯಾಧಿಕಾರಿಯಾದ ಡಾ.ರಾಜಶ್ರೀ ಕಿಣಿ, ಡಾ. ಧೃತಿ ಆಳ್ವ, ಡಾ. ಪೂಜಿತ, ಆರೋಗ್ಯ ರಕ್ಷಾ ಸಮಿತಿಯ ವಿಜಯಲಕ್ಷ್ಮಿ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು. ಅಂಗನವಾಡಿ ಕಾರ್ಯಕರ್ತೆಯರು. ಸ್ಥಳೀಯರು ಉಪಸ್ಥಿತರಿದ್ದರು.

ಬಸವರಾಜ್ ಸ್ವಾಗತಿಸಿ, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರೆ, ರಂಜಿತ್ ಕುಮಾರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...