ಉಡುಪಿ | ವಳಕಾಡು ಸರ್ಕಾರಿ ಪ್ರೌಢಶಾಲೆಯಲ್ಲಿ “ನಮ್ಮ ಶಾಲೆ ನಮ್ಮ ಜವಬ್ದಾರಿ” ಕಾರ್ಯಕ್ರಮ

Date:

Advertisements

ಉಡುಪಿಯ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮ ಬುಧವಾರದಂದು ಜರುಗಿತು.

ಸರಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳ ಹಾಗೂ ಪೌಷ್ಟಿಕ ಆಹಾರ ಪಿ ಎಂ ಪೋಷನ್ ಕಾರ್ಯಕ್ರಮದ ಬಗ್ಗೆ ಪೋಷಕರಿಗೆ ಅರಿವು ಮೂಡಿಸುವ ಸಲುವಾಗಿ ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿಯ ಕ್ಷೇತ್ರ ಶಿಕ್ಷಣಾಧಿಕಾರಿಯವರಾದ ಶ್ರೀಮತಿ ಯಲ್ಲಮ್ಮ, ಹಾಗೂ DIET ಉಪನ್ಯಾಸಕರಾದ ಶ್ರೀಯುತ ಯೋಗ ನರಸಿಂಹ ಸ್ವಾಮಿ ಸರಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಹಾಗೂ ಪಿಎಂ ಪೋಷನ್ ಕಾರ್ಯಕ್ರಮದ ಅಗತ್ಯ ಹಾಗೂ ಯಶಸ್ಸಿನ ಬಗ್ಗೆ ಉತ್ತಮ ಮಾಹಿತಿ ನೀಡಿದರು.

1005414202

ಸಭೆಯ ಅಧ್ಯಕ್ಷತೆಯನ್ನು ಪ್ರೌಢಶಾಲೆ ಎಸ್ ಡಿ ಎಂಸಿ ಅಧ್ಯಕ್ಷರಾದ ಶ್ರೀಯುತ ರಮೇಶ್ ಹೆಗಡೆ, ಪುರಸಭೆಯ ಉಪಾಧ್ಯಕ್ಷೆ ಶ್ರೀಮತಿ ರಜನಿ ಹೆಬ್ಬಾರ್ ಮತ್ತು ಪುರಸಭೆ ಸದಸ್ಯರಾದ ಶ್ರೀಮತಿ ಮಾನಸ ಪೈ, ಸಂಯುಕ್ತ ಪ್ರೌಢಶಾಲೆ ವಳಕಾಡು ಇಲ್ಲಿನ ಮುಖ್ಯ ಶಿಕ್ಷಕರಾದ ಶ್ರೀಮತಿ ಪೂರ್ಣಿಮಾ ಮತ್ತು ಶ್ರೀಮತಿ ಕುಸುಮ ರವರು, ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಡಾ. ವಿರೂಪಾಕ್ಷ ಹಾಗೂ ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಾಗೇಶ್ ಪ್ರಭು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisements

ಅಜಿಮ್ ಪ್ರೇಮ್‍ಜಿ ಫೌಂಡೇಷನ್ ನ ಯೋಗೀಶ್ ಹಾಗೂ ಕುಮಾರಿ ಪ್ರಕೃತಿ ಆಗಮಿಸಿದ್ದು, ಪೋಷಕರು ಹಾಗೂ SDMC ಸದಸ್ಯರಿಗೆ ಪೌಷ್ಟಿಕ ಆಹಾರದ ಬಗ್ಗೆ ಸಮೀಕ್ಷೆ ಕೈ ಗೊಂಡರು. ಬಿಆರ್ ಪಿ ಜಯಶೀಲ ಬಿ ರೋಟೆ ಕಾರ್ಯಕ್ರಮ ಸಂಘಟಿಸಿದರು. ಶ್ರೀಮತಿ ಪೂರ್ಣಿಮಾ ಸ್ವಾಗತಿಸಿ, ಸಿಆರ್ ಪಿ ಸರಿತಾ ರಾಣಿ ವಂದಿಸಿದರು. ಸಿ ಆರ್ ಪಿ ರಂಜಿತ ಕಾರ್ಯಕ್ರಮ ನಿರೂಪಿಸಿದರು. ಬಿಐಇಆರ್ ಟಿ ಆಶಾ ರವರು ಸಹಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X