ಗದಗ | ದೇಶದ ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ಆಹಾರ ಒದಗಿಸಬೇಕು: ಡಾ. ಎಚ್.ಕೃಷ್ಣ

Date:

“ದೇಶದ ಪ್ರತಿಯೊಬ್ಬ ನಾಗರೀಕನಿಗೂ ಗೌರವಯುತವಾಗಿ ಬದುಕಲು ಗುಣಮಟ್ಟದ ಮತ್ತು ಪೌಷ್ಟಿಕಾಂಶಯುಕ್ತ ಆಹಾರ ದೊರಕುವಂತೆ ನೋಡಿಕೊಳ್ಳುವುದು ಕರ್ನಾಟಕ ರಾಜ್ಯ ಆಹಾರ ಆಯೋಗದ ಪ್ರಮುಖ ಉದ್ದೇಶವಾಗಿದೆ” ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ಹೇಳಿದರು.

- Advertisement -

ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಗುರುವಾರ ರಾಷ್ಟ್ರೀಯ ಆಹಾರ ಆಯೋಗದಿಂದ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಪ.ಬಂಗಾಳ- SIR ಮೇಲ್ಮನವಿ | 19 ನ್ಯಾಯಾಧಿಕರಣಗಳ ದುರ್ಗತಿ-...

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ (ಎಸ್‌ಐಆರ್‌) ಮೇಲ್ಮನವಿಗಳ ಇತ್ಯರ್ಥಕ್ಕೆ ಸ್ಥಾಪಿಸಲಾದ 19 ನ್ಯಾಯಾಧಿಕರಣಗಳು ಸಾಲುಸಾಲು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿವೆ. ಕಾರ್ಯಭಾರ, ಕೆಂಪುಪಟ್ಟಿ ಆಡಳಿತದಿಂದ ನಿವೃತ್ತ ನ್ಯಾಯಮೂರ್ತಿಗಳ ರಾಜೀನಾಮೆ, ಸಿಬ್ಬಂದಿಯ ವೇತನ ವಿಳಂಬದ...

ಕೃಷಿಮೇಳ | ‘ಪ್ರಕೃತಿ ಕೊಡಾದೆಲ್ಲ ಒಳ್ಳೀದೆ ಇರ್ತೈತಿ, ಮನ್ಷಾನೇ...

"ಪ್ರಕೃತಿ ಮನುಷ್ಯನಿಗೆ ಕೊಡುವುದೆಲ್ಲವೂ ಒಳ್ಳೆಯದೇ ಇರುತ್ತದೆ, ಆದರೆ ಮನುಷ್ಯ ಪ್ರಕೃತಿಯನ್ನು ಮರೆತು ಏನೇನೋ ಹುಡುಕಿಕೊಂಡು ಹೊರಟಿದ್ದಾನೆ" ಇದು ತಲೆಮಾರುಗಳಿಂದ ಕಂಬಳಿ ನೇಯ್ದು ಬದುಕು ಕಟ್ಟಿಕೊಂಡಿರುವ ಕಂಬಳಿ ನೇಕಾರರ ಮನದಾಳ. ಅಜ್ಜ-ಮುತ್ತಜ್ಜರ ಕಾಲದಿಂದಲೂ ನಡೆದುಕೊಂಡು...

ಕರ್ನಾಟಕ ರಾಜ್ಯ ಆಹಾರ ಆಯೋಗದಿಂದ ನವೆಂಬರ್ 18 ರಿಂದ 20 ರವರೆಗೆ ಗದಗ ಜಿಲ್ಲಾ ಪ್ರವಾಸ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಂಗನವಾಡಿ ಕೇಂದ್ರ, ಆಸ್ಪತ್ರೆ, ಎಫ್.ಸಿ.ಐ ಗೋಡೌನ್, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್, ನ್ಯಾಯ ಬೆಲೆ ಅಂಗಡಿ, ಆಹಾರ ಧಾನ್ಯ ಸಗಟು ಮಳಿಗೆ, ಕೃಷಿ ಉತ್ಪನ್ನ ಮಾರುಕಟ್ಟೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಲಾಯಿತು.

ಈ ವೇಳೆ ಗೋಡೌನ್‌ಗಳಲ್ಲಿದ್ದ ಅಕ್ಕಿ ದಾಸ್ತಾನಿನಲ್ಲಿ ವ್ಯತ್ಯಾಸ ಕಂಡು ಬಂದಿದೆ. ಸಾರ್ವಜನಿಕ ವಿತರಣಾ ಪದ್ಧತಿಯಲ್ಲಿ ಇಲಾಖೆಯಿಂದ ಗೋಡೌನ್‌ಗೆ ಬಂದಿರುವ ಅಕ್ಕಿಯ ಪ್ರಮಾಣ ಹಾಗೂ ಫಲಾನುಭವಿಗಳಿಗೆ ವಿತರಣೆ ಮಾಡಿದ ಅಕ್ಕಿ ಪ್ರಮಾಣ, ನಂತರ ಬಾಕಿ ಉಳಿದ ಅಕ್ಕಿಯ ಪ್ರಮಾಣದಲ್ಲಿ ತಾಳೆ ಹೊಂದದೇ ವ್ಯತ್ಯಾಸ ಬಂದಿತು. ಕೆಲವೊಂದು ಎಪಿಎಂಸಿ ಗೋಡೌನ್‌ಗಳಲ್ಲಿ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣ ಅಕ್ಕಿ ದಾಸ್ತಾನು ಇದ್ದದ್ದು ಕಂಡು ಬಂದಿದೆ. ಅನಧಿಕೃತ ಬಿಪಿಎಲ್‌ ಕಾರ್ಡ್‌ ರದ್ದು ಮಾಡುವ ಸಂದರ್ಭದಲ್ಲಿ ನಿಜವಾದ ಫಲಾನುಭವಿಗಳ ಕಾರ್ಡನ್ನೇ ರದ್ದು ಮಾಡಿರುವ ಪ್ರಕರಣಗಳು ಕಂಡು ಬಂದಿವೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ತಪ್ಪಿತಸ್ಥರ ಮೇಲೆ ಕಾನೂನಿನ ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

“ಅನ್ನಭಾಗ್ಯ ಯೋಜನೆಯ ಸೌಲಭ್ಯ ಅರ್ಹ ಫಲಾನುಭವಿಗೆ ತಲುಪಬೇಕು. ಅನ್ನಭಾಗ್ಯ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು. ಸೌಲಭ್ಯದ ವಿತರಣೆಯಲ್ಲಿ ವಿಳಂಬ ಹಾಗೂ ದುರುಪಯೋಗವಾಗಿರುವುದು ಕಂಡು ಬಂದರೆ ಆಯೋಗವು ಶಿಸ್ತು ಕ್ರಮ ಕೈಗೊಳ್ಳುತ್ತದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕುಂದುಕೊರತೆ ಕೋಶ ಇದ್ದು ಜಿಲ್ಲಾಧಿಕಾರಿಗಳೇ ಆ ಕೋಶದ ಅಧ್ಯಕ್ಷರಾಗಿರುತ್ತಾರೆ” ಎಂದು ತಿಳಿಸಿದರು.

ಮುಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಐಸಿಡಿಎಸ್ ಯೋಜನೆಯಡಿ 6 ತಿಂಗಳಿನಿಂದ 3 ವರ್ಷದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳ ಮೂಲಕ ಉಚಿತ ಪೌಷ್ಟಿಕ ಅಹಾರವನ್ನು ವಿತರಿಸಲಾಗುತ್ತಿದೆ. ತೀವ್ರ ಅಥವಾ ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಹೆಚ್ಚಿನ ಪೋಷಣೆಯ ಅಗತ್ಯವಿರುವುದರಿಂದ ಹೆಚ್ಚಿನ ಆಹಾರ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ವಿತರಣೆಯಲ್ಲಿ ಕಳಪೆ ಗುಣಮಟ್ಟ ಹಾಗೂ ವಿತರಣೆಯಲ್ಲಿ ವಿನಾಕಾರಣ ವಿಳಂಬವಾದರೆ ಆಯೋಗಕ್ಕೆ ದೂರು ಸಲ್ಲಿಸಬಹುದಾಗಿದೆ. ಕೃಷಿಗೆ ಸಂಬಧಿತ ಕೃಷಿ ಉಪಕರಣಗಳನ್ನು ಸಬ್ಸಿಡಿ ದರದಲ್ಲಿ ಒದಗಿಸುವುದು ಹಾಗೂ ರಿಯಾಯತಿ ದರದಲ್ಲಿ ಕೀಟನಾಶಕಗಳ ವಿತರಣೆ ಕಾರ್ಯದಲ್ಲಿ ಏನಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಆಯೋಗದ ಗಮನಕ್ಕೆ ತರಬಹುದಾಗಿದೆ. ರೆಸ್ಟೋರೆಂಟ್, ಹೋಟೆಲ್ , ಹಾಸ್ಟೆಲ್ ಗಳಲ್ಲಿ ಆಹಾರ ಪೂರೈಕೆಯಲ್ಲಿ ದೋಷ ಕಂಡು ಬಂದರೆ ಆಯೋಗಕ್ಕೆ ದೂರು ನೀಡಬಹುದಾಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ರಾಜ್ಯ ಆಹಾರ ಆಯೋಗದ ಸದಸ್ಯರುಗಳಾದ ಲಿಂಗರಾಜ ಕೋಟೆ, ಸುಮಂತರಾವ್, ಮಾರುತಿ ಎಂ. ದೊಡ್ಡಲಿಂಗಣ್ಣವರ, ಶ್ರೀಮತಿ ಎ. ರೋಹಿಣಿ ಪ್ರಿಯ, ಶ್ರೀಮತಿ ಕೆ.ಎಸ್.ವಿಜಯಲಕ್ಷ್ಮೀ ಆಹಾರ ಇಲಾಖೆಯ (ಪ್ರಭಾರ) ಸಹಾಯಕ ನಿರ್ದೇಶಕರಾದ ದೊಡ್ಡಮನಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬೈಪಾಸ್‌ ರಸ್ತೆ ಅಕ್ರಮ ಒತ್ತುವರಿ ತೆರವು: ಪೊಲೀಸರ ಕಾರ್ಯಕ್ಕೆ ಜನರ ಮೆಚ್ಚುಗೆ

ಶಿವಮೊಗ್ಗ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗಿದ್ದ ಅಂಗಡಿಗಳನ್ನು,...

ಹಾಸನ | ವಾಹನ ಅಪಘಾತ: ಸ್ಥಳದಲ್ಲೇ ಓರ್ವ ಸಾವು 

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ವೈಭವ್‌ ಲೇಔಟ್ ಸಮೀಪದಲ್ಲಿ ಬೈಕ್ ಗೆ ಕೆಎಸ್‌ಆರ್‌ಟಿಸಿ...

ಚಿಕ್ಕಮಗಳೂರು | ಕಾಡಾನೆ ದಾಳಿ: ಕುಟುಂಬಕ್ಕೆ 25 ಲಕ್ಷ ಪರಿಹಾರ 

ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಹಿನ್ನಂಗಿ ಗ್ರಾಮದ ರೈತ ಕೃಷ್ಣಮೂರ್ತಿ ಕಾಡಾನೆ ದಾಳಿಗೆ...

ಕೊಡವ ಸಂಸ್ಕೃತಿ ಉಳಿವಿಗೆ ದುಡಿ, ತಾಳ, ಒಡಿಕತ್ತಿ ವಿತರಣೆ

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡವ ಸಂಸ್ಕೃತಿ, ಸಂಪ್ರದಾಯ ಹಾಗೂ...