ಉಡುಪಿ | ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ – ಸಂಸದ ಕೋಟಾ ಶ್ರೀನಿವಾಸ

Date:

Advertisements

ಉಡುಪಿ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟೀಯ ಹೆದ್ದಾರಿ ರಸ್ತೆಯ ಅಭಿವೃದ್ಧಿ ಕಾಮಗಾರಿಗಳು, ರಸ್ತೆ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟೀಯ ಹೆದ್ದಾರಿ ಅಭಿಯಂತರರಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ರಾಷ್ಟಿçÃಯ ಹೆದ್ದಾರಿ-66 ರಲ್ಲಿ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಜಂಕ್ಷನ್‌ನಿಂದ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಜಂಕ್ಷನ್ ವರೆಗೆ ಫ್ಲೈಓವರ್ ಅಥವಾ ಅಂಡರ್‌ಪಾಸ್ ನಿರ್ಮಿಸುವ ಕುರಿತು ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಕುಂದುಕೊರತೆಗಳ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ 100 ಕಿ.ಮೀ.ಗೂ ಹೆಚ್ಚು ಉದ್ದ ರಾಷ್ಟೀಯ ಹೆದ್ದಾರಿ 66 ಹಾದು ಹೋಗಿದ್ದು, ಪೂರ್ಣ ಪ್ರಮಾಣದಲ್ಲಿ ಸರ್ವಿಸ್ ರಸ್ತೆ, ಮೂಲಭೂತ ಸೌಕರ್ಯಗಳಾದ ಚರಂಡಿ, ದಾರಿದೀಪ, ಸೇರಿದಂತೆ ಮತ್ತಿತರ ನಿರ್ವಹಣೆ ಕೊರತೆಯಿಂದಾಗಿ ಹೆದ್ದಾರಿಯಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಗಳು ಉಂಟಾಗುತ್ತಿವೆ ಅಲ್ಲದೆ ಅಪಘಾತ ಪ್ರಕರಣಗಳು ಸಹ ಉಂಟಾಗುತ್ತಿವೆ. ಇವುಗಳನ್ನು ತಪ್ಪಿಸಲು ಅಗತ್ಯವಿರುವ ಎಲ್ಲಾ ರೀತಿಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಹೆದ್ದಾರಿ ಪ್ರಾಧಿಕಾರದ ಅಭಿಯಂತರರಿಗೆ ಸೂಚನೆ ನೀಡಿದರು.

Advertisements

ಹೆದ್ದಾರಿ ಟೋಲ್‌ಗಳಲ್ಲಿ ಶುಲ್ಕ ಪಾವತಿಯಾದ ಮೊತ್ತದ ಶೇ.1 ರಷ್ಟು ಹಣವನ್ನು ಗ್ರಾಮ ಪಂಚಾಯತಿಗಳಿಗೆ ನೀಡಬೇಕೆಂಬ ಆದೇಶವಿದೆ. ಆದರೆ, ಇದು ಕಾರ್ಯರೂಪಕ್ಕೆ ಬಂದಿಲ್ಲ. ಪಂಚಾಯತಿಗಳು ಈ ಹಣವನ್ನು ನೀಡಬೇಕೆಂದು ಕೇಳಿ ಪತ್ರ ಬರೆಯಲು ತಿಳಿಸಿದ ಅವರು, ಹೆದ್ದಾರಿ ಅಕ್ಕಪಕ್ಕದಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿದ್ದಲ್ಲಿ ಅದಕ್ಕೆ ಅನುಮತಿಯನ್ನು ನೀಡಲು ಗ್ರಾಮ ಪಂಚಾಯತಿಗೆ ಮಾತ್ರ ಅಧಿಕಾರವಿದೆ. ಇವುಗಳ ನಿರ್ವಹಣೆಯನ್ನು ಗ್ರಾಮ ಪಂಚಾಯತಿಗಳೇ ಮಾಡಬೇಕು ಎಂದರು.

1004963992

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯ ಹೆದ್ದಾರಿ ರಸ್ತೆಯಲ್ಲಿ ಜನರ ಅಜಾಗರೂಕತೆ ಅಥವಾ ವಾಹನ ಚಾಲಕರ ಅತೀ ವೇಗ ಹಾಗೂ ಅಜಾಗರೂಕತೆ ಚಾಲನೆಯಿಂದ ರಸ್ತೆ ಅಪಘಾತಗಳು ಉಂಟಾಗುತ್ತಿವೆ. ಹೆಚ್ಚು ಜನನಿಬಿಡ ವ್ಯಾಪ್ತಿಯಲ್ಲಿ ಮೇಲ್ಸೇತುವೆ ಅಥವಾ ಅಂಡರ್‌ಪಾಸ್ ಗಳ ನಿರ್ಮಾಣದ ಅವಶ್ಯಕತೆ ಇದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರರುಗಳು ಪರಿಶೀಲಿಸಿ, ಕ್ರಮ ಕೈಗೊಳ್ಳಬೇಕು ಎಂದರು.

ಬ್ರಹ್ಮಾವರ ಹಾಗೂ ತೆಕ್ಕಟ್ಟೆಯಲ್ಲಿ ಫ್ಲೈ ಓವರ್ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲು ಯೋಜನೆ ರೂಪಿಸಿ, ಕೇಂದ್ರ ಸರ್ಕಾರದ ಅನುಮತಿ ಪಡೆದು ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ ರಸ್ತೆಗಳ ನಿರ್ವಹಣೆಯನ್ನು ಸರಿಯಾಗಿ ನಿರ್ವಹಿಸದೇ ಮಳೆಯ ನೀರು ಎಲ್ಲೆಂದರಲ್ಲಿ ನುಗ್ಗಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದೆ. ಈ ಬಗ್ಗೆ ಅನೇಕ ಬಾರಿ ಗುತ್ತಿಗೆದಾರರುಗಳಿಗೆ ನಿರ್ವಹಿಸಲು ಪತ್ರದ ಮುಖೇನ ತಿಳಿಸಿದ್ದರೂ ಸಹ ಯಾವುದೇ ರೀತಿಯಲ್ಲಿ ಸೂಕ್ತ ಸ್ಪಂದಿಸಿರುವುದಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ತಾಲೂಕಿನ ತಹಶೀಲ್ದಾರುಗಳು ತಮ್ಮ ಮ್ಯಾಜಿಸ್ಟ್ರೇಟ್ ಅಧಿಕಾರವನ್ನು ಚಲಾಯಿಸಿ, ಕಾನೂನು ಅಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ತಾಲೂಕಿನ ತಹಶೀಲ್ದಾರರುಗಳು, ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಒಳಗೊಂಡAತೆ ರಾಷ್ಟಿçÃಯ ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ಅನುಗುಣವಾಗಿ ಕೈಗೊಳ್ಳಬೇಕಾಗಿರುವ ಕಾಮಗಾರಿಗಳ ವಿವರವಾದ ಮಾಹಿತಿಗಳನ್ನು ಕ್ರೂಢೀಕರಿಸಿ, ಶೀಘ್ರವಾಗಿ ನೀಡಬೇಕು ಎಂದರು.

ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕೆಲವು ಗ್ರಾಮ ಪಂಚಾಯತಿಯ ಅಧ್ಯಕ್ಷರುಗಳು ಸಭೆಯಲ್ಲಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿ ಸರ್ವೀಸ್ ರಸ್ತೆಯನ್ನು ನಿರ್ಮಿಸಬೇಕು. ಮಳೆಯ ನೀರು ಸರಾಗವಾಗಿ ಹೆದ್ದಾರಿ ರಸ್ತೆ ಬದಿಯ ಚರಂಡಿಗಳ ಮೂಲಕ ಹರಿದು ತೋಡುಗಳನ್ನು ಸೇರುವ ಹಾಗೆ ಸಂಪರ್ಕ ಕಲ್ಪಿಸಬೇಕು. ದಾರಿದೀಪ ಅಳವಡಿಕೆ, ಲಿಂಕ್ ರಸ್ತೆಗಳಿಗೆ ಡಾಂಬರೀಕರಣ, ಹೆದ್ದಾರಿ ನಿರ್ವಹಣೆಯ ಆಂಬುಲೆನ್ಸ್ಗಳು ಸಕಾಲದಲ್ಲಿ ಲಭ್ಯವಾಗಬೇಕು ಸೇರಿದಂತೆ ಮತ್ತಿತರ ಕಾಮಗಾರಿ ಕೈಗೊಳ್ಳುವ ಬಗ್ಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ತಾಲೂಕು ತಹಶೀಲ್ದಾರರುಗಳು, ಇ.ಓ ಗಳು, ಗ್ರಾಮ ಪಂಚಾಯತ್ ಅಧ್ಯಕ್ಷರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X