ಮಂಡ್ಯ | ನ್ಯಾಷನಲ್ ಹೆರಾಲ್ಡ್ ಪ್ರಕರಣ; ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್

Date:

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ವರಿಷ್ಟರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಸಿಲುಕಿಸಲು ಪಿತೂರಿ ನಡೆಸಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿ, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿತು.

- Advertisement -

ಕೇಂದ್ರ ಸರ್ಕಾರದ ಕಾರ್ಯವೈಖರಿ ಜನವಿರೋಧಿಯಾಗಿದ್ದು, ಸಂವಿಧಾನ ವಿರೋಧಿ ಧೋರಣೆಗೆ ಮುಂದಾಗಿರುವ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಪಕ್ಷದ ನಾಯಕರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸುಭಾಷ್ ನಗರದಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ ನಡೆಸಿದಾಗ ಪೊಲೀಸರು ಬಂದೋಬಸ್ತ್ ಮಾಡಿ, ಬ್ಯಾರಿಕೆಡ್ ಹಾಕಿ, ಪ್ರತಿಭಟನಾಕಾರರನ್ನು ತಡೆಯುವಲ್ಲಿ ಯಶಸ್ವಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರತಿಭಟನಕಾರರನ್ನು ಬಂಧಿಸಲು ಮುಂದಾದಾಗ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಕಾಂಗ್ರೆಸ್ ಮುಖಂಡರು ಪ್ರಧಾನಿ ನರೇಂದ್ರ ಮೋದಿ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮುತ್ತಿಗೆ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಹಣಿಯಲು ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇವರಿಗೆ ನ್ಯಾಯಾಲಯದ ಆದೇಶ ಹಿನ್ನಡೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ಮುಖಂಡರ ಮೇಲಿದ ಹಗೆತನವನ್ನು ಕೈಬಿಡಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್. ಚಿದಂಬರ್ ಮಾತನಾಡಿ, ಕಾಂಗ್ರೆಸ್ ನಾಯಕರ ವಿರುದ್ದ ಬಿಜೆಪಿ ಪಿತೂರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸಿಕ್ಕಿಸುವ ಪ್ರಯತ್ನ ಮಾಡಿದ್ರು ವಿಫಲವಾಗಿದೆ. ನಮ್ಮ ನಾಯಕರಿಗೆ ಜಯಸಿಕ್ಕಿದೆ. ಬಿಜೆಪಿ ಕುತಂತ್ರದಿಂದ ಕಾನೂನು ಬಾಹಿರ ಪ್ರಕರಣ ಎಂದು ಸಾಬೀತಾಗಿದೆ. ಬಿಜೆಪಿಯವರು ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ಆಗ್ರಹ ಪಡಿಸಿದರು.

ಈ ಸುದ್ದಿ ಓದಿದ್ದೀರಾ? ʼಈ ದಿನ ಸರಣಿʼ ಭಾಗ-1 | ಮಂಡ್ಯದ ಕಾಳಿಕಾಂಬ ಕೊಳಗೇರಿಯ ಕೋರ್ಟ್‌ ತೀರ್ಪು ಮೀರಿದ ಬಲಾಢ್ಯರು: ನ್ಯಾ. ಎಂ. ನಾಗಪ್ರಸನ್ನ ಕಳವಳ

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ. ದ್ಯಾವಪ್ಪ, ಕಿಶಾನ್ ಘಟಕ ಚಿನಕುರುಳಿ ರಮೇಶ್, ಕೃಷ್ಣೇಗೌಡ, ಎಸ್ಸಿ,ಎಸ್ಟಿ ಘಟಕ ಮಾಜಿ ಜಿಲ್ಲಾಧ್ಯಕ್ಷ ಶ್ರೀಧರ್, ಚಿಕ್ಕಬಳ್ಳಿ ಕೃಷ್ಣ, ಶಬರಿನ್ ತಾಜ್, ಪದ್ಮ ಮೋಹನ್, ಬಸರಾಳು ಕೃಷ್ಣೇಗೌಡ, ಅಭಿಲಾಶ್, ಕಿರಣ್ ಸೇರಿದಂತೆ ಇನ್ನಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...