ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Date:

  • ಸಾಲಿಯತ್ ಅವರು ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್‌ ಆಟಗಾರ್ತಿ
  • ಪದವಿ ಕಲಿಯುವ ವೇಳೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದ್ದ ಸಾಲಿಯತ್

ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆಟಗಾರ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಾಲಿಯತ್ (24) ಮೃತ ಆಟಗಾರ್ತಿ. ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಯತ್ ಅವರು ಕಳೆದ ಒಂದು ವರ್ಷದ ಹಿಂದೆ ವಿವಾಹವಾಗಿದ್ದರು. ಪತಿಯ ಮನೆ ಚಿಕ್ಕಮಗಳೂರಿನಲ್ಲಿದ್ದು, ಅಲ್ಲಿಯೇ ನೆಲೆಸಿದ್ದರು.

ಸಾಲಿಯತ್‌ ಅವರಿಗೆ ಹೃದಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ, ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ತಂದೆ, ತಾಯಿ ಹಾಗೂ ಪತಿಯನ್ನು ಸಾಲಿಯತ್ ಅವರು ಅಗಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕ್ರೀಡಾ ಸಾಧನೆ

ಸಾಲಿಯತ್ ಅವರು ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್‌ ಆಟಗಾರ್ತಿಯಾಗಿದ್ದರು. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪಡಂಗಡಿಯಲ್ಲಿ, ಉಜಿರೆಯ ಎಸ್.ಡಿ.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ 9 ತರಗತಿ ಹಾಗೂ 10ನೇ ತರಗತಿಯ ಶಿಕ್ಷಣವನ್ನು ಮುಂಡಾಜೆಯಲ್ಲಿ ಪೂರ್ಣಗೊಳಿಸಿದರು. ಉಜಿರೆ ಎಸ್.ಡಿ.ಎಂನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆದರು. ಪದವಿ ಶಿಕ್ಷಣ ಕಲಿಯುತ್ತಿರುವಾಗಲೇ ಸಾಲಿಯತ್ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದ್ದರು.

ಸಾಲಿಯತ್ ಅವರು ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿ ಪಡೆದಿದ್ದರು. ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢ ಶಿಕ್ಷಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿದ್ದರು.

ಈ ಸುದ್ದಿ ಓದಿದ್ದೀರಾ? ಸಚಿವರ ಆಪ್ತ ಎಂದು ಹೇಳಿ, ಜನರಿಂದ ಹಣ ಪಡೆದು ವಂಚಿಸುತ್ತಿದ್ದವನ ಬಂಧನ

ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿದ್ದರು. ರಾಷ್ಟ್ರದ ವಾಲಿಬಾಲ್‌ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಷನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....

ತುಮಕೂರು | ಕೇಂದ್ರದಲ್ಲಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ: ಗೃಹ ಸಚಿವ ಪರಮೇಶ್ವರ್

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...