ಮೈಸೂರು | ರಾಷ್ಟ್ರೀಯ ಅಂಚೆ ನೌಕರರ ದಿನಾಚರಣೆ: ಅಂಚೆ ಸಿಬ್ಬಂದಿಗೆ ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಗೌರವ ಸನ್ಮಾನ

Date:

ರಾಷ್ಟ್ರೀಯ ಅಂಚೆ ನೌಕರರ ದಿನಾಚರಣೆ ಅಂಗವಾಗಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸುತ್ತಿರುವ ಅಂಚೆ ನೌಕರರನ್ನು ಗುರುತಿಸಿ ಆತ್ಮೀಯವಾಗಿ ಅಭಿನಂದಿಸಿ ಗೌರವ ಸನ್ಮಾನ ಮಾಡಲಾಯಿತು.

- Advertisement -

ಕಾರ್ಯಕ್ರಮದಲ್ಲಿ ಮಾತನಾಡಿದ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರಾಜಶೇಖರ್, ಅಂಚೆ ಇಲಾಖೆ ದೇಶದ ಅತ್ಯಂತ ಹಳೆಯ ಹಾಗೂ ಜನವಿಶ್ವಾಸಗಳಿಸಿರುವ ಸೇವಾ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಹೇಳಿದರು. ಆಧುನಿಕ ತಂತ್ರಜ್ಞಾನ, ಮೊಬೈಲ್ ಮತ್ತು ಇಂಟರ್ನೆಟ್ ಯುಗದಲ್ಲಿಯೂ ಅಂಚೆ ನೌಕರರು ತಮ್ಮ ಸೇವಾ ಮನೋಭಾವವನ್ನು ಕಡಿಮೆ ಮಾಡದೆ, ದೇಶದ ಪ್ರತಿಯೊಬ್ಬ ನಾಗರಿಕರ ಮನೆಬಾಗಿಲಿಗೆ ಸರ್ಕಾರದ ಹಾಗೂ ಸಾರ್ವಜನಿಕ ಸೇವೆಗಳನ್ನು ತಲುಪಿಸುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹಿಂದಿನ ದಿನಗಳಲ್ಲಿ ಕುಟುಂಬಗಳ ಸುಖ-ದುಃಖದ ಸುದ್ದಿಗಳನ್ನು ಹೊತ್ತ ಪತ್ರಗಳು, ಹಣದ ಆರ್ಡರ್‌ಗಳು, ಪರೀಕ್ಷಾ ಫಲಿತಾಂಶಗಳು, ನೇಮಕಾತಿ ಆದೇಶಗಳು ಸೇರಿದಂತೆ ಅನೇಕ ಮಹತ್ವದ ದಾಖಲೆಗಳನ್ನು ಜನರ ಕೈಗೆ ತಲುಪಿಸಿದವರು ಅಂಚೆ ನೌಕರರು. ಇಂದಿಗೂ ಗ್ರಾಮೀಣ ಪ್ರದೇಶಗಳಿಂದ ನಗರಗಳವರೆಗೆ ಅಂಚೆ ಸೇವೆ, ಉಳಿತಾಯ ಯೋಜನೆಗಳು, ಪಿಂಚಣಿ, ಬ್ಯಾಂಕಿಂಗ್ ಸೇವೆಗಳು ಹಾಗೂ ವಿವಿಧ ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅಂಚೆ ಇಲಾಖೆಯ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಬಿರು ಬಿಸಿಲು, ಧಾರಾಕಾರ ಮಳೆ ಹಾಗೂ ಚಳಿಯಂತಹ ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸುವ ಅಂಚೆ ನೌಕರರ ಕಾರ್ಯ ನಿಜಕ್ಕೂ ಮಾದರಿಯಾಗಿದೆ. ಜನರ ಮನೆಬಾಗಿಲಿಗೆ ಆಶೆಯ ಸಂದೇಶ, ಸಂತಸದ ಸುದ್ದಿ ಹಾಗೂ ಅಗತ್ಯ ಸೇವೆಗಳನ್ನು ತಲುಪಿಸುವ ಅವರ ಪರಿಶ್ರಮವನ್ನು ಸಮಾಜ ಸದಾ ಸ್ಮರಿಸಬೇಕು ಎಂದು ಹೇಳಿದರು.

ರಾಜ್ಯ ಖಜಾಂಚಿ ನಂಜುಂಡ ಮಾತನಾಡಿ, “ಸಮಾಜದ ಅಭಿವೃದ್ಧಿಯಲ್ಲಿ ಅಂಚೆ ನೌಕರರ ಕೊಡುಗೆ ಅಮೂಲ್ಯವಾಗಿದೆ. ಅವರ ನಿಷ್ಠೆ, ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವ ಪ್ರತಿಯೊಬ್ಬರಿಗೂ ಆದರ್ಶವಾಗಿದ್ದು, ಇಂತಹ ಸೇವಕರನ್ನು ಗೌರವಿಸುವುದು ಪ್ರತಿಯೊಂದು ಸಂಘಟನೆ ಹಾಗೂ ಸಮಾಜದ ಕರ್ತವ್ಯವಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆಳವಾಡಿ ಅಂಚೆ ಕಚೇರಿಯ ಪೋಸ್ಟ್‌ಮಾಸ್ಟರ್ ಪುಟ್ಟರಾಜು ಕೆ.ಎಂ., ಪೋಸ್ಟ್‌ಮ್ಯಾನ್ ಕುಮಾರ್ ಹಾಗೂ ಸಿಬ್ಬಂದಿಗಳಾದ ರಮೇಶ್ ಬಿ. ಮತ್ತು ಸರಸ್ವತಿ ಎಸ್. ಅವರನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಚಂದ್ರಿಕಾ ಸುರೇಶ್ ಅವರು ಶಾಲು ಹೊದಿಸಿ, ಫಲಕ ನೀಡಿ ಗೌರವ ಸನ್ಮಾನ ಮಾಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೇ.64ರಷ್ಟು ಬೋಧಕ ಹುದ್ದೆ ಖಾಲಿ: ಉನ್ನತ ಶಿಕ್ಷಣದ ಗುಣಮಟ್ಟಕ್ಕೆ ಗಂಭೀರ ಸವಾಲು

ಕಾರ್ಯಕ್ರಮದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ತಾರಾ ಜಿ., ಮೈಸೂರು ಪ್ರಾಂತ್ಯ ಗೌರವಾಧ್ಯಕ್ಷ ರವಿಗೌಡ, ಮೈಸೂರು ಪ್ರಾಂತ್ಯ ಕಾರ್ಯದರ್ಶಿ ನಾಗರಾಜ್, ಮೈಸೂರು ಮಹಿಳಾ ಘಟಕದ ಅಧ್ಯಕ್ಷೆ ವತ್ಸಲ, ಪರ್ವೀನ್ ತಾಜ್, ಚನ್ನ ನಾಯಕ, ಜನಾರ್ದನ್, ರವಿ ಗೌಡ (ಬೆಳವಾಡಿ), ಕನ್ನಡಾಂಬೆ ರಕ್ಷಣಾ ವೇದಿಕೆಯ ಪದಾಧಿಕಾರಿಗಳು, ಅಂಚೆ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...