ಕಳೆದ ಬಾರಿ ಸಂಪರ್ಕಕ್ಕೆ ಸಿಗದೆ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಹೋರಾಟಗಾರ ರವೀಂದ್ರ ಕೋಟೆಹೊಂಡ, ಈಗ ಸಂಪರ್ಕಕ್ಕೆ ಬಂದಿದ್ದಾರೆ. ಶನಿವಾರ ಮಧ್ಯಾಹ್ನ ಚಿಕ್ಕಮಗಳೂರಿನಲ್ಲಿ ನಕ್ಸಲ್ ಹೋರಾಟ ತ್ಯಜಿಸಿ ಮುಖ್ಯವಾಹಿನಿಗೆ ಮರಳಲಿದ್ದಾರೆ.
ಕಳೆದ ತಿಂಗಳು, ಜನವರಿ 8ರಂದು, ಆರು ಮಂದಿ ನಕ್ಸಲ್ ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮಖದಲ್ಲಿ ಮುಖ್ಯವಾಹಿನಿಗೆ ಬಂದಿದ್ದಾರೆ. ಆ ಸಮಯದಲ್ಲಿ ರವೀಂದ್ರ ಅವರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಕಾಡಿನಲ್ಲಿಯೇ ಉಳಿದಿದ್ದರು.
ಇದೀಗ ಅವರು ಸಂಪರ್ಕಕ್ಕೆ ಸಿಕ್ಕಿದ್ದಾರೆ. ನಕ್ಸಲ್ ಹೋರಾಟ ತ್ಯಜಿಸಿ ಮುಖ್ಯವಾಹಿನಿಗೆ ಮರಳುವುದಾಗಿ ತಿಳಿಸಿದ್ದಾರೆ. ಅವರು ಸಂಪರ್ಕಕ್ಕೆ ಸಿಕ್ಕ ಬಳಿಕ, ಅವರನ್ನು ಮುಖ್ಯವಾಹಿನಿಗೆ ಬರಮಾಡಿಕೊಳ್ಳಲು ಚಿಕ್ಕಮಗಳೂರು ಜಿಲ್ಲಾಡಳಿತ ಸಿದ್ದತೆ ಮಾಡಿಕೊಂಡಿದೆ.
ಶನಿವಾರ ಮಧ್ಯಾಹ್ನ ರವೀಂದ್ರ ಅವರು ಚಿಕ್ಕಮಗಳೂರಿನಲ್ಲಿ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಸದಸ್ಯರು ಹಾಗೂ ಶಾಂತಿಗಾಗಿ ನಾಗರಿಕರ ವೇದಿಕೆಯ ಸದಸ್ಯರ ಸಮ್ಮುಖದಲ್ಲಿ ಇಂದು 12 ಗಂಟೆಗೆ ಮುಖ್ಯವಾಹಿನಿಗೆ ಬರಲಿದ್ದಾರೆ ಎಂದು ಕೆ.ಎಲ್ ಅಶೋಕ್ ಹೇಳಿದ್ದಾರೆ.