ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

Date:

  • 1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ನೆರವು
  • ಕಾರ್ಮಿಕರ ನೆರವಿಗೆ ಶ್ರಮಿಸಿದ ಸಂಘ ಸಂಸ್ಥೆಗಳು, ಅಧಿಕಾರಿಗಳನ್ನು ಅಭಿನಂದಿಸಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯ ಒದಗಿಸಿದ್ದಾರೆ.

ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತದ ದುರಂತದ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದ್ದು, ಈಶಾನ್ಯ ರಾಜ್ಯಗಳು, ಕೋಲ್ಕತ್ತಾ ಮುಂತಾದ ರಾಜ್ಯಗಳಿಗೆ ತೆರಳಬೇಕಿದ್ದ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾನದಲ್ಲೇ ದಿನ ಕಳೆಯುವಂತಹ ಪರಿಸ್ಥಿತಿ ಒದಗಿದ್ದರಿಂದ, ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಬಿಬಿಎಂಪಿ ವಲಯ ಆಯುಕ್ತ ಪಿ.ಎನ್.ರವೀಂದ್ರ, ಜಂಟಿ ಆಯುಕ್ತರಾದ ಶ್ರೀಮತಿ ಪಲ್ಲವಿ ಮತ್ತು ತಂಡದವರ ಮಾರ್ಗದರ್ಶನದಲ್ಲಿ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ವಲಸೆ ಕಾರ್ಮಿಕರಿಗೆ ಊಟ, ತಿಂಡಿ, ನೀರು ಇತ್ಯಾದಿಗಳ ವ್ಯವಸ್ಥೆಯನ್ನು ಪೂರೈಸಲಾಗಿದೆ. ಬಿಬಿಎಂಪಿ ವತಿಯಿಂದ ಅವರಿಗೆ ವೈದ್ಯಕೀಯ ಸೌಲಭ್ಯ ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಒಡಿಶಾ ರೈಲು ಅಪಘಾತ; ಪರಿಹಾರಕ್ಕೆ ಪರಮ ಆದ್ಯತೆಯಿರಲಿ

ಪಾಟೀಲ್, ಕಾರ್ಮಿಕ ಇಲಾಖೆ ಆಯುಕ್ತರು, ಉಮೇಶ್, ಉಪ ಕಾರ್ಮಿಕ ಆಯುಕ್ತರು, ಸಂತೋಷ್ ಹಿಪ್ಪರಗಿ, ಸಹಾಯಕ ಕಾರ್ಮಿಕ ಆಯುಕ್ತರು ಇನ್ನಿತರ ಅಧಿಕಾರಿಗಳು ಪರಿಹಾರ ಕಾರ್ಯದ ನೇತೃತ್ವ ವಹಿಸಿದ್ದರು. ಈ ಪರಿಹಾರ ಕಾರ್ಯಕ್ಕೆ ಜೆಎಂಸಿ, ಕೆ2ಕೆ, ಐಡಿಸಿ, ಕೆಎಂಎಫ್ ಸೇರಿದಂತೆ ಹಲವು ಸಂಸ್ಥೆಗಳು ಬೆಂಬಲ ನೀಡುವ ಮೂಲಕ ಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚಿವೆ.

ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ತಂಗಿರುವ ಪ್ರಯಾಣಿಕರ ಕಷ್ಟಗಳಿಗೆ ಸ್ಪಂದಿಸಿ, ಮರ‍್ಸಿ ಫೌಂಡೇಷನ್ , ತೌಸೀಫ್ ಮತ್ತು ತನ್ವೀರ್, ಕ್ಲಿಫ್ಟಿನ್ ಹಾಗೂ ಮೈತ್ರಿ ಹಾಗೂ ತಂಡದವರ ಸ್ವಯಂ ಸೇವಕರು ಕೈ ಜೋಡಿಸಿದರು. ಮುಖ್ಯಮಂತ್ರಿಗಳು ಕಾರ್ಮಿಕರ ನೆರವಿಗೆ ಶ್ರಮಿಸಿದ ಸಂಘ ಸಂಸ್ಥೆಗಳು, ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ...

ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರುವುದಾಗಿ...

ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌...