ಬೀದರ್‌ ವಿಶ್ವವಿದ್ಯಾಲಯ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸಲಾಗುವುದು : ಸಚಿವ ಈಶ್ವರ ಖಂಡ್ರೆ

Date:

ಬೀದರ್‌ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಲು ₹300 ಕೋಟಿ ಅನುದಾನ ಅಗತ್ಯವಿದ್ದು, ಪ್ರತಿ ವರ್ಷ ₹100 ಕೋಟಿಯಂತೆ ಯೋಜನೆ ವರದಿ ಸಿದ್ಧಪಡಿಸಿ ನೀಡಿದ್ದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅನುದಾನ ಒದಗಿಸಲಾಗುವುದುʼ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭರವಸೆ ನೀಡಿದರು.

- Advertisement -

ಶನಿವಾರದಂದು ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿಯಲ್ಲಿರುವ ಬೀದರ ವಿಶ್ವವಿದ್ಯಾಲಯದ ದ್ವಿತೀಯ ಸಂಸ್ಥಾಪನಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ʼಪರಿಶ್ರಮ ಮತ್ತು ಬದ್ಧತೆಯಿಂದ ಅಭ್ಯಾಸ ನಡೆಸಿದ್ದಲ್ಲಿ ಮಾತ್ರ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗುರಿ ಸಾಧಿಸಲು ಸಾಧ್ಯʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼನಾವು ಅಂಗನವಾಡಿಯಿಂದ ಹಿಡಿದು ಪದವಿವರೆಗೆ ಶಿಕ್ಷಣ ಹಕ್ಕು ಕಾಯ್ದೆಯಡಿ ನೂರಾರು ಕೋಟಿ ಅನುದಾನ ನೀಡಿ ಶಿಕ್ಷಣಕ್ಕೆ ಒತ್ತು ಕೊಡುತ್ತಿದ್ದು, ಆದರೆ ಪದವಿ ಪೂರ್ವ ಶಿಕ್ಷಣ, ಸ್ನಾತಕೋತ್ತರ ವಿಶ್ವವಿದ್ಯಾಲಯಗಳಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ವಿಶ್ವವಿದ್ಯಾಲಯಗಳು ವಿಭಾಗಗಳಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪದವಿಗಳಿಗೆ ಮಾನ್ಯತೆ ಸಿಗುವಂತಾಗಬೇಕು. ವಿಶ್ವವಿದ್ಯಾಲಯ ಅಭಿವೃದ್ಧಿ ಆದರೆ ಮಾತ್ರ ಸಾರ್ಥಕವಾಗುತ್ತದೆʼ ಎಂದರು.

ʼಬೀದರ ವಿಶ್ವವಿದ್ಯಾಲಯಕ್ಕೆ 124 ಕಾಲೇಜು ಸಂಯೋಜಿತವಿದ್ದು, ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಮಹಾವಿದ್ಯಾಲಯಗಳ 30 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಜಗತ್ತನ್ನು ನಿರ್ಮಾಣ ಮಾಡುವಲ್ಲಿ ನಮ್ಮ ವಿದ್ಯಾರ್ಥಿಗಳು ಪಾಲು ಇದೆ. ಇದೇ ಕಾರಣಕ್ಕೆ ದೇಶಗಳು ನಮ್ಮ ದೇಶದ ಕಡೆ ಮುಖ ಮಾಡುತ್ತಿವೆ. ನಮ್ಮ ವಿದ್ಯಾರ್ಥಿಗಳಲ್ಲಿ ಯಾವುದೇ ಕೊರತೆ ಇಲ್ಲ. ಎಲ್ಲ ಗುರಿ ಮುಟ್ಟಿ ಪರಿಶ್ರಮ ಮಾಡಬೇಕುʼ ಎಂದು ಸಲಹೆ ನೀಡಿದರು.

ʼಮಹಿಳಾ ಸಬಲೀಕರಣಕ್ಕೆ ನಮ್ಮ ಸರ್ಕಾರ ಒತ್ತು ನೀಡಿ ಮೀಸಲಾತಿ ನೀಡಿ ಶಕ್ತಿ ನೀಡುತ್ತಿದೆ. ಅನೇಕ ವಿಷಯಗಳಲ್ಲಿ ಬೇಡಿಕೆಯಿದ್ದು, ಆ ವಿಷಯಗಳನ್ನು ಅರಿತು ವಿದ್ಯಾಭ್ಯಾಸ ಮಾಡಿದರೆ ಎಲ್ಲಾ ಕಂಪನಿಗಳು ನಮ್ಮನ್ನು ಉದ್ಯೋಗ ಹುಡುಕಿಕೊಂಡು ಬರುತ್ತವೆ. ನಮ್ಮ ಕೈಗಾರಿಕೆಗಳನ್ನು ಏನು ಬೇಡಿಕೆ ಇದೆ ಅದನ್ನು ಕಲಿಯಬೇಕಾಗಿದೆ. ಕೌಶಲ್ಯ ತರಬೇತಿ ಅವಶ್ಯಕತೆ ಇದೆ.ಬೀದರ ವಿಶ್ವವಿದ್ಯಾಲಯಕ್ಕೆ 312 ಎಕರೆ ಜಮಿನು ಇದ್ದು, ಶೀಘ್ರದಲ್ಲಿ ಅನುದಾನ ಒದಗಿಸಲಾಗುವುದು. ಹತ್ತು ಹಲವಾರು ಬೇಡಿಕೆಗಳು ಇವೆ. ಮೂಲಸೌಕರ್ಯಗಳು ಒದಗಿಸಲಾಗುವುದುʼ ಎಂದರು.

WhatsApp Image 2025 04 06 at 7.50.46 AM

ʼಬೀದರ್ ವಿಶ್ವವಿದ್ಯಾಲಯಕ್ಕೆ ಈಗಾಗಲೇ 29 ಉಪನ್ಯಾಸಕರ ಹುದ್ದೆಗಳು ಮಂಜೂರು ಆಗಿದ್ದು, ಮೆರಿಟ್‌ ಹಾಗೂ ರೋಸ್ಟರ್ ಆಧಾರ ಮೇಲೆ ಯಾವುದೇ ದೂರು ಬಾರದಂತೆ ನೇಮಕಾತಿ ಮಾಡಿಕೊಳ್ಳಬೇಕು. 109 ಬೋಧಕೇತರ ಸಿಬ್ಬಂದಿ, ಇದೇ ಮಾನದಂಡದ ಪ್ರಕಾರ 371(ಜೆ) ಅಡಿ ನೇಮಕಾತಿ ಮಾಡಿಕೊಳ್ಳಬೇಕು. ಯಾರದು ಹಸ್ತಕ್ಷೇಪ ಇರುವುದಿಲ್ಲ. ಪ್ರತಿಭಾವಂತ ಪ್ರಾಧ್ಯಾಪಕರು, ಶಿಕ್ಷಕರು ಸಿಗಲಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತದೆʼ ಎಂದರು.

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಮಾತನಾಡಿ, ʼಬೀದರ ವಿಶ್ವವಿದ್ಯಾಲಯಕ್ಕೆ ಮೂಲಭೂತ ಸೌಕರ್ಯಗಳ ಕೊರತೆಯಿದ್ದು, ನಾನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಕೂಡಿ ಕೆಕೆಆರ್‌ಡಿಬಿಯಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಗೆ ಒತ್ತು ನೀಡುತ್ತೇವೆʼ ಎಂದರು.

ಬೀದರ ಜಿಲ್ಲೆಗೆ 500 ವರ್ಷಗಳ ಇತಿಹಾಸ ಹೊಂದಿದೆ. ಈ ಹಿಂದೆ ಮಹಮ್ಮದ್ ಗವಾನ್‌ ವಿಶ್ವವಿದ್ಯಾಲಯ ಮೂಲಕ ವಿವಿಧ ದೇಶಗಳಿಂದ ಬಂದು ನಮ್ಮಲ್ಲಿ ಶಿಕ್ಷಣ ಪಡೆದಿದ್ದಾರೆ ಎಂಬುವುದು ಹೆಮ್ಮೆಯ ವಿಷಯʼ ಎಂದರು.

ಬೀದರ್‌ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಏ.16ರಂದು ಸಿಎಂ ಸಿದ್ದರಾಮಯ್ಯ ಬೀದರ್ ಜಿಲ್ಲೆ ಪ್ರವಾಸ

ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಎಂ.ಜಿ.ಮುಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ, ಬಿದರ ನಗರಸಭೆ ಅಧ್ಯಕ್ಷ ಮಹ್ಮದ್ ಗೌಸ್, ಬ್ಯಾಲಹಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷ ಅಶೋಕ ಮೋತಿರಾಮ, ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಮುಡೆಪ್ಪಾ ಕಮಠಾಣಿ, ಬಿಸಿ. ಶಾಂತಲಿಂಗ ಸಾವಳಗಿ, ಶಿವನಾಥ ಎಂ.ಪಾಟೀಲ, ಸಚಿನ ಶಿವರಾಜ, ವಿಠಲದಾಸ ಪ್ಯಾಗೆ, ಅರ್ಜುನ ಮರೆಪ್ಪಾ ಕನಕ, ಡಾ.ಮಲ್ಲಿಕಾರ್ಜುನ ಕನಕಟ್ಟೆ, ಅಬ್ದುಲ್ ಸತ್ತಾರ ಚಾಂದಸಾಬ್, ವೈಷ್ಣವಿ ಪಾಟೀಲ, ಬೀದರ ವಿಶ್ವವಿದ್ಯಾಲಯದ ಕುಲಸಚಿವೆ ಸುರೇಖಾ, ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯಕ, ಶಿಕ್ಷಣ ನಿಕಾಯ ಡೀನರು, ನಿವೃತ್ತ ಪ್ರಾಧ್ಯಾಪಕರು, ಬೋಧಕ-ಬೋಧಕೇತರು ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...