ಬೀದರ್‌ | ಸ್ನೇಹಿತರೊಂದಿಗೆ ಈಜಲು ಹೋದ ಬಾಲಕ ನೀರುಪಾಲು

Date:

ಸ್ನೇಹಿತರೊಂದಿಗೆ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಬಸವಕಲ್ಯಾಣ ತಾಲೂಕಿನ ಖೇರ್ಡಾ(ಬಿ) ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.

- Advertisement -

ಬಸವಕಲ್ಯಾಣ ತಾಲೂಕಿನ ಸಸ್ತಾಪುರ ಗ್ರಾಮದ ಮುಜಾಮಿಲ್‌ ಖಾಜಾಮಿಯ್ಯ (15) ಮೃತ ಬಾಲಕ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೃತ ಬಾಲಕ ಕೆಲ ದಿನಗಳಿಂದ ತಾಯಿಯ ತವರೂರು ತಡೋಳಾ ಗ್ರಾಮದಲ್ಲಿ ನೆಲೆಸಿದ್ದನು. ಮಂಗಳವಾರ ಸಂಜೆ ಸ್ನೇಹಿತರೊಂದಿಗೆ ಪಕ್ಕದ ಖೇರ್ಡಾ(ಬಿ) ಗ್ರಾಮದ ಬಳಿಯಿರುವ ಮುಲ್ಲಾಮರಿ ಜಲಾಶಯದ ಹಿನ್ನೀರಿನಲ್ಲಿ ಮೂವರು ಈಜಾಡಲು ತೆರಳಿದ್ದರು. ಬಾಲಕ ನೀರಿಗೆ ಇಳಿದಾಗ ಕಾಲು ಜಾರಿ ಬಿದ್ದು ಮೇಲೆ ಬರಲಾಗದೇ ಕೊನೆಯುಸಿರೆಳಿದ್ದಾನೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಬೈಕ್‌ಗೆ ಟಿಪ್ಪರ್‌ ಲಾರಿ ಢಿಕ್ಕಿ: ದಂಪತಿ ಸಾವು; 8 ವರ್ಷದ ಮಗು ಪಾರು

ಈ ಕುರಿತು ಮುಡುಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಪಿಎಸ್‌ಐ ರೇಣುಕಾ ಹುಡುಗಿ ನೇತ್ರತ್ವದ ಪೊಲೀಸ್‌ ತಂಡ  ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದರು. ಸ್ಥಳೀಯರ ಸಹಕಾರದೊಂದಿಗೆ ಬಾಲಕನ ಮೃತದೇಹ ಹೊರ ತೆಗೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರು, ಕ್ಲಿನಿಕ್‌ಗಳ ವಿರುದ್ಧ ಕ್ರಮಕ್ಕೆ ಕರವೇ ಕಾವಲುಪಡೆ ಆಗ್ರಹ

ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರೆಂದು ಹೇಳಿಕೊಂಡು ನಕಲಿ...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಬೀದರ್‌ | ಭಗತ್‌ ಸಿಂಗ್‌ ಜಯಂತಿ : ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್ ವಿತರಣೆ

ಭಗತ್‌ ಸಿಂಗ್‌ ಅವರು ಕೇವಲ 23ನೇ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ...