ಗದಗ | ನೀಟ್ ಪರೀಕ್ಷೆಯ ಅವ್ಯವಹಾರ; ಪಾರದರ್ಶಕ ತನಿಖೆಗೆ ಎಸ್‌ಎಫ್‌ಐ ಆಗ್ರಹ

Date:

ವೈದ್ಯಕೀಯ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿರುವ ನೀಟ್‌ (ಯುಜಿ) ಪರೀಕ್ಷೆಯ ಫಲಿತಾಂಶದಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಕುರಿತು ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಸ್‌ಎಫ್‌ಐ) ಜಿಲ್ಲಾ ಘಟಕದ ಮುಖಂಡ ಗಣೇಶ ರಾಠೋಡ್ ಆಗ್ರಹಿಸಿದರು.

- Advertisement -

ಜೂನ್ 4ರಂದು ನೀಟ್‌ -ಯುಜಿ ಪರೀಕ್ಷೆಯ ಫಲಿತಾಂಶಗಳು ಪ್ರಕಟವಾದ ನಂತರ, ಎನ್‌ಟಿಎ ನಡವಳಿಕೆಯ ಬಗ್ಗೆ ದೇಶಾದ್ಯಂತ ಸಾಕಷ್ಟು ದೂರುಗಳು ಬರುತ್ತಿವೆ. ಎನ್‌ಟಿಎ ಜಾರಿಗೆ ಬಂದಾಗಿನಿಂದ ಪ್ರಮುಖ ಪರೀಕ್ಷೆಗಳ ಗಂಭೀರ ಅವ್ಯವಹಾರಗಳ ಮುಂದುವರಿಕೆಯಾಗಿದೆ.ಎನ್‌ಟಿಎ ಸಂಸ್ಥೆಯು ಪ್ರವೇಶವನ್ನು ನಡೆಸಲು ಅಸಮರ್ಥ ಮತ್ತು ಅನರ್ಹವಾಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಗಜೇಂದ್ರಗಡದಲ್ಲಿ ನಡೆಸಿದ  ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಎಂಬಿಬಿಎಸ್‌ -ಬಿಡಿಎಸ್ ಪದವಿ ಹಂತದ ಪ್ರವೇಶ ಪರೀಕ್ಷೆಯಲ್ಲಿ ಒಟ್ಟು ಅಂಕಗಳು 720. ಪ್ರತಿ ಸರಿಯಾದ ಉತ್ತರಕ್ಕೆ 4 ಅಂಕಗಳನ್ನು ನೀಡಲಾಗುತ್ತದೆ. ಆದರೆ ಪ್ರತಿ ತಪ್ಪು ಉತ್ತರಕ್ಕೆ 1 ಅಂಕ ಕಡಿತಗೊಳಿಸಲಾಗುತ್ತದೆ. ಆದರೆ, ಉತ್ತರಿಸದ ಪ್ರಶ್ನೆಗಳನ್ನು ಗುರುತಿಸಿಲ್ಲ. ಆ ಸಂದರ್ಭದಲ್ಲಿ, ಗಣಿತದ ಪ್ರಕಾರ 719 ಮತ್ತು 718 ನಂತಹ ಅಂಕಗಳನ್ನು ಪಡೆಯಲು ಸಾಧ್ಯವಿಲ್ಲ. ಆದರೆ ಅಂತಹ ಪ್ರಕರಣಗಳು ಬಂದಿರುವ ಫಲಿತಾಂಶಗಳಲ್ಲಿ ಕಂಡುಬರುತ್ತಿದೆ. ಈ ವರ್ಷದ ಫಲಿತಾಂಶವು ಗ್ರೇಸ್ ಮಾರ್ಕಿಂಗ್‌ಗಾಗಿ ಎಂದು ಎನ್‌ಟಿಎ ಪ್ರಾಸಂಗಿಕವಾಗಿ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಈ ವರ್ಷ ಪರೀಕ್ಷೆಗೆ ಮುನ್ನ ಎನ್‌ಟಿಎ ಪ್ರಕಟಿಸಿದ ಮಾರ್ಗಸೂಚಿಗಳಲ್ಲಿ ಎಲ್ಲಿಯೂ ಈ ಗ್ರೇಸ್ ಮಾರ್ಕಿಂಗ್ ಯೋಜನೆಯ ಬಗ್ಗೆ ಉಲ್ಲೇಖಸಿಲ್ಲ” ಎಂದು ದೂರಿದರು.

“ಒಂದೇ ಕೇಂದ್ರದ ಸತತ ರೋಲ್ ಸಂಖ್ಯೆ ಹೊಂದಿರುವ ಹಲವು ವಿದ್ಯಾರ್ಥಿಗಳು 720ಕ್ಕೆ 720 ಅಂಕಗಳನ್ನು ಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿವೆ. ಆ ವಿದ್ಯಾರ್ಥಿಗಳು ಖಾಸಗಿ ಕೋಚಿಂಗ್ ಕೇಂದ್ರಗಳಿಗೆ ಸೇರಿದ ವಿದ್ಯಾರ್ಥಿಗಳಾಗಿದ್ದಾರೆ. ಕೇಂದ್ರದ ಸರ್ಕಾರ ವೈದ್ಯಕೀಯ ಶಿಕ್ಷಣದ ಪಠ್ಯಕ್ರಮದಲ್ಲಿ ಗಮನಾರ್ಹವಾದ ಕಡಿತಗೊಳಿಸಿ ಕಾಲೇಜು ಶುಲ್ಕಗಳನ್ನು ಹೆಚ್ಚಿಸಿ ಶ್ರೀಮಂತರ ಮಕ್ಕಳಿಗೆ ಮಾತ್ರ ವೈದ್ಯಕೀಯ ಶಿಕ್ಷಣ ಎಂಬ ಖಾಸಗೀಕರಣ ನೀತಿಗಳನ್ನು ಎನ್‌ಎಂಸಿ ಮತ್ತು ಎನ್‌ಟಿಎ ಸಂಸ್ಥೆಗಳು ಜಂಟಿಯಾಗಿ ಪ್ರೋತ್ಸಾಹಿಸುತ್ತಿವೆ ಇದು ದೇಶದ ಭವಿಷ್ಯಕ್ಕೆ ತುಂಬಾ ಅಪಾಯಕಾರಿ. ವೈದ್ಯಕೀಯ ಕ್ಷೇತ್ರದಲ್ಲಿ ರಾಜ್ಯ ಆಧಾರಿತ ಪ್ರವೇಶ ಪರೀಕ್ಷೆ ಪದ್ಧತಿಯನ್ನು ಬದಲಾಯಿಸಲು ಭ್ರಷ್ಟಾಚಾರ ನಡೆಯುತ್ತಿದೆ. ಈಗ ನೀಟ್-ಯುಜಿಗೆ ಸಂಬಂಧಿಸಿದಂತಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್ | ಅಲ್ಪಮೊತ್ತದ ಕಾಳಗದಲ್ಲಿ ರೋಚಕ ಜಯ ಗಳಿಸಿದ ಟೀಮ್ ಇಂಡಿಯಾ; ಪಾಕ್‌ಗೆ ಭಾರೀ ಮುಖಭಂಗ

ಈ ಬಗ್ಗೆ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಎನ್‌ಟಿಎ ರದ್ದುಪಡಿಸಿ ಮತ್ತು ಇಲ್ಲಿಯವರೆಗಿನ ಅದರ ಎಲ್ಲ ಹಗರಣಗಳನ್ನು ತನಿಖೆ ನಡೆಸಬೇಕು. ರಾಜ್ಯದಲ್ಲಿ ಎನ್‌ಟಿಎ ಮೂಲಕ ಶಿಕ್ಷಣದ ಕೇಂದ್ರೀಕರಣ ನಡೆಸುವವರ ವಿರುದ್ಧ ಹೋರಾಟ ರೂಪಿಸಿ ವಿದ್ಯಾರ್ಥಿಗಳ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಎಸ್‌ಎಫ್‌ಐ ಬೆಂಬಲಿಸುತ್ತದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...