ಉಡುಪಿ ಪ್ರಕರಣ | ಆರೋಪಿ ಪ್ರವೀಣ್ ಚೌಗಲೆಯನ್ನು 14 ದಿನ ಪೊಲೀಸ್ ಕಸ್ಟಡಿಗೊಪ್ಪಿಸಿದ ನ್ಯಾಯಾಲಯ

Date:

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ(39)ಯನ್ನು ಇಂದು ಸಂಜೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿಯ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

- Advertisement -

ವಿಚಾರಣೆ ನಡೆಸಿದ ಬಳಿಕ ಹದಿನಾಲ್ಕು ದಿನ ಅಂದರೆ ನ.28ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮುಂದಿನ ಹದಿನಾಲ್ಕು ದಿನಗಳಲ್ಲಿ ತನಿಖಾಧಿಕಾರಿಗಳ ತಂಡ ಆರೋಪಿಯು ನೀಡುವ ಎಲ್ಲ ಮಾಹಿತಿಗಳನ್ನು ಕಲೆ ಹಾಕಬೇಕಿದೆ. ಕೊಲೆ ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ಎಲ್ಲಿಟ್ಟಿದ್ದಾನೆ ಎಂಬ ಮಾಹಿತಿ ತನಿಖೆಯಿಂದ ತಿಳಿಯಲಿದೆ ಎಂದು ಉಡುಪಿ ಪೊಲೀಸರು ಬುಧವಾರ ಸಂಜೆ ಮಾಹಿತಿ ಹಂಚಿಕೊಂಡಿದ್ದರು.

ಆರೋಪಿಯು ಏರ್‌ ಇಂಡಿಯಾದಲ್ಲಿ ಗಗನಸಖಿಯಾಗಿದ್ದ ಆಯ್ನಾಝ್‌ಳನ್ನು ಕೊಲ್ಲಲು ಬಂದಾಗ ತಡೆಯಲು ಬಂದ ಇತರ ಮೂವರನ್ನು ಹತ್ಯೆಗೈದಿದ್ದ. ಕೊಲೆಯ ಮೂರು ಉದ್ದೇಶವನ್ನು ವಿಚಾರಣೆಯಲ್ಲಿ ಆರೋಪಿಯು ತಿಳಿಸಿದ್ದು, ಕುಟುಂಬಸ್ಥರೊಂದಿಗೆ ಈ ಕುರಿತು ವಿಚಾರಿಸಿ ಸ್ಪಷ್ಟ ಪಡಿಸಿಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ ಪ್ರಕರಣ | ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಬಂದಿದ್ದ: ಎಸ್‌ಪಿ

ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಮುನ್ನ ನ್ಯಾಯಾಲಯದ ಆವರಣದಲ್ಲಿ ಸೇರಿದಂತೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಮೂವರು ಡಿವೈಎಸ್ಪಿ, 25 ಎಎಸ್‌ಐ, ಐವರು ಪಿಎಸ್‌ಐ, ಮೂವರು ಇನ್‌ಸ್ಪೆಕ್ಟರ್‌ಗಳು, 150 ಕಾನ್‌ಸ್ಟೇಬಲ್‌ಗಳು, ಆರು ಡಿಎಆರ್ ಬೆಟಾಲಿಯನ್‌ಗಳು ಮತ್ತು ಮೂವರು ಕೆಎಸ್‌ಆರ್‌ಪಿ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...