ಉಡುಪಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆಗೈದಿದ್ದ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವುದಾಗಿ ವರದಿಯಾಗಿದೆ.
ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ಪೀಠ, ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಿದೆ.
ಉಡುಪಿ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ಎಂಬಲ್ಲಿ ಒಂದೇ ಕುಟುಂಬದ ಐನಾಝ್, ಹಸೀನಾ, ಅಫ್ಘಾನ್, ಅಸೀಮ್ ಎಂಬುವವರನ್ನು ಹತ್ಯೆ ನಡೆಸಿದ್ದ ಅರುಣ್ ಚೌಗುಲೆ, ಅಧೀನ ನ್ಯಾಯಾಲಯದಲ್ಲಿ ಈ ಹಿಂದೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ಆದರೆ ವಿಚಾರಣೆ ನಡೆಸಿದ್ದ ಅಧೀನ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿತ್ತು. ಹೀಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನು ಓದಿದ್ದೀರಾ? ಸಿಎಂ ಸ್ಥಾನ ನಿರ್ಧಾರ ಮಾಡುವುದು ಹೈಕಮಾಂಡ್, ಸ್ವಾಮೀಜಿಯವರಲ್ಲ: ಸಿದ್ದರಾಮಯ್ಯ
ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆರೋಪಿಯ ವಿರುದ್ಧದ ಸಾಂದರ್ಭಿಕ ಸಾಕ್ಷಿಗಳ ಜೊತೆಗೆ ಸಿಸಿಟಿವಿ ದೃಶ್ಯಾವಳಿಗಳು ಇವೆ. ಅಲ್ಲದೆ, ಆರೋಪಿಯ ಕೂದಲಿನ ಡಿಎನ್‌ಎ ಆಧರಿಸಿ, ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.
