ಕಲಬುರಗಿ | ನೇತಾಜಿ ಜನ್ಮದಿನ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮ; ಬಹುಮಾನ ವಿತರಣೆ

Date:

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮ ವರ್ಷಾಚರಣೆ ಅಂಗವಾಗಿ ಎಐಡಿಎಸ್‌ಒ ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಇವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಸುಭಾಷ್ ಚಂದ್ರ ಬೋಸ್ ಹಾಗೂ ಮಹಾನ್ ಕ್ರಾಂತಿಕಾರಿಗಳ ಪಾತ್ರದ ಕುರಿತು ಪ್ರಬಂಧ, ರಸಪ್ರಶ್ನೆ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ನಡೆಸಿದೆ ಎಂದು ಸಂಘಟನೆಯ ಕಲಬುರಗಿ ಜಿಲ್ಲಾಧ್ಯಕ್ಷೆ ಸ್ನೇಹ ಕಟ್ಟಿಮನಿ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ನಡೆದಿದ್ದ ಸ್ಪರ್ಧೆಗಳಲ್ಲಿ ಭಾವಹಿಸಿ, ವಿಜೇತವಾಗಿದ್ದವರಿಗೆ ಕಲಬುರಗಿಯ ಬೆತನಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿ, ಅವರು ಮಾತನಾಡಿದರು.

“ಭಾರತೀಯರ ಪರವಾಗಿ ನಿಂತು ಸ್ವಾತಂತ್ರ್ಯದ ಧೈಯಕ್ಕಾಗಿ, ನನ್ನ ಜೀವನವನ್ನು ನೀಡಲು ಸಿದ್ದನಿದ್ದೇನೆ. ಸತ್ಯಕ್ಕೆ ಏನಾದರೂ ಮಹತ್ವವಿದ್ದಲ್ಲಿ, ದೇಶದ ಜನ ಮುಂದೊಂದು ದಿನ ನನ್ನ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಣಬುದು ಸುಭಾಷ್‌ ಚಂದ್ರ ಬೋಸರ ಹೇಳಿಕೆಯಾಗಿತ್ತು” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ದಿನೇ ದಿನೇ ಸಾಂಸ್ಕೃತಿಕವಾಗಿ, ನೈತಿಕವಾಗಿ ಸಮಾಜ ಅಧಃಪತನ ಹೊಂದುತ್ತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ಸ್ವಾತಂತ್ರ್ಯ ಹೋರಾಟದ ಮಹಾನ್ ಕ್ರಾಂತಿಕಾರಿ ನೇತಾಜಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಖುದಿರಾಮ್ ಬೋಸ್, ಅಶ್ವಾಖುಲ್ಲಾ ಖಾನ್ ಹಾಗೂ ಇನ್ನಿತರ ಉನ್ನತ ವಿಚಾರ, ಆದರ್ಶ ಹಾಗೂ ಮೌಲ್ಯಗಳನ್ನು ವಿದ್ಯಾರ್ಥಿಗಳ ನಡುವೆ ಕೊಂಡೊಯ್ಯುವುದು ಅತ್ಯವಶ್ಯಕವಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಯುವರಾಜ ತುಳಜರಾಮ  ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಬಿಸಿಲಿನ ತಾಪ ಹೆಚ್ಚಳ; ಮೃಗಾಲಯ ತಂಪಾಗಿಡಲು ವಿಶೇಷ ವ್ಯವಸ್ಥೆ

ಪ್ರಸ್ತುತ ವರ್ಷ ಮೈಸೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿರುವುದರಿಂದ ಮೃಗಾಲಯದ ಪ್ರಾಣಿಗಳು...

ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು,...

ಬೆಂಗಳೂರು | ಕನ್ನಡ ನಾಮಫಲಕ ಕಡ್ಡಾಯ; ತಪ್ಪಿದಲ್ಲಿ ‘ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ ಎಚ್ಚರಿಕೆ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ...

ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್...