ಉಡುಪಿ | ಜುಬಿಲಿ 2025 ವಿಶೇಷ ಯೋಜನೆ: ತೊಟ್ಟಂ ಚರ್ಚಿನಲ್ಲಿ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

Date:

Advertisements

ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ ನಿರ್ಮಿಸಲಾದ ‘ಆರ್ಕ್ ಆಫ್ ಹೋಪ್’ ಮನೆಯನ್ನು ಭಾನುವಾರ ಹಸ್ತಾಂತರಿಸಲಾಯಿತು.

ತೊಟ್ಟಂ ಚರ್ಚಿನ ವಿನೋದ್ ಮತ್ತು ಅಂಜೆಲಿನ್ ಪಿಂಟೊ ಕುಟುಂಬ ಸ್ವಂತ ಸೂರನ್ನು ಕಾಣಬೇಕು ಎಂಬ ಹಂಬಲವಿದ್ದರೂ ಕೂಡ ಆರ್ಥಿಕ ಸಮಸ್ಯೆಯಿಂದ ಅದು ಸಾಧ್ಯವಾಗಿರಲಿಲ್ಲ. ಈ ವೇಳೆ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ಅವರ ನೇತೃತ್ವದಲ್ಲಿ ಪಾಲನಾ ಮಂಡಳಿ ಹಾಗೂ ದಾನಿಗಳ ನೆರವಿನೊಂದಿಗೆ ರೂ. 13 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಮನೆಯನ್ನು ನಿರ್ಮಿಸಲಾಗಿದೆ.
ಭಾನುವಾರ ಚರ್ಚಿನ ಧರ್ಮಗುರುಳಾದ ವಂ|ಡೆನಿಸ್ ಡೆಸಾ ಅವರು ನೂತನ ಮನೆಯನ್ನು ಆಶೀರ್ವಚನ ನೆರವೇರಿಸಿ ವಿನೋದ್ ಮತ್ತು ಅಂಜೆಲಿನ್ ಪಿಂಟೊ ಕುಟುಂಬಕ್ಕೆ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಅವರು ಮಾನವನಿಗೆ ಒಂದು ಸ್ವಂತ ಮನೆಯಿದ್ದರೆ ನೆಮ್ಮದಿಯ ನಿದ್ದೆಯನ್ನು ಮಾಡಲು ಸಾಧ್ಯವಿದೆ. ಆದರೆ ಇಂದು ಎಷ್ಟೋ ಮಂದಿಗೆ ಜೀವಿಸಲು ಸ್ವಂತ ಮನೆ ಇಲ್ಲದೆ ಪರದಾಡುತ್ತಾರೆ. ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಜುಬಿಲಿ ವರ್ಷವಾಗಿ ಆಚರಿಸಲ್ಪಡುತ್ತಿದ್ದು ಈ ನಿಟ್ಟಿನಲ್ಲಿ ಧರ್ಮಾಧ್ಯಕ್ಷರು ಒಂದು ಹೊಸ ಯೋಜನೆ ಯನ್ನು ನೀಡಿದ್ದರು. ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ 52 ಚರ್ಚುಗಳಿದ್ದು ಪ್ರತಿಯೊಂದು ಚರ್ಚಿನಲ್ಲಿ ಮನೆ ಇಲ್ಲದ ಒಬ್ಬರಿಗೆ ಮನೆ ನಿರ್ಮಿಸಿಕೊಡುವ ಯೋಜನೆ ಹಮ್ಮಿಕೊಳ್ಳಲಾಗಿದೆ.
ಅದರಂತೆ ತೊಟ್ಟಂ ಚರ್ಚಿನಲ್ಲಿ ಕೂಡ ಮನೆ ಇಲ್ಲದ ಒಂದು ನಿರ್ಗತಿಕ ಕುಟುಂಬಕ್ಕೆ 13 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸುವ ಯೋಜನೆ ಹಮ್ಮಿಕೊಂಡು ಚರ್ಚಿನ ಭಕ್ತಾದಿಗಳು, ಮೈಕಲ್ ಡಿಸೋಜಾ ಚಾರಿಟಿ ಟ್ರಸ್ಟ್, ಹಾಗೂ ಇತರ ದಾನಿಗಳ ನೆರವಿನಿಂದ ಯೋಜನೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಚರ್ಚಿನ ತೋಮಸ್ ಮತ್ತು ವಲೇರಿಯಾನ ನೊರೊನ್ಹಾ ದಂಪತಿ ಮನೆ ನಿರ್ಮಾಣಕ್ಕೆ ತಮ್ಮ ಜಮೀನಲ್ಲಿ 5 ಸೆಂಟ್ಸ್ ಜಾಗವನ್ನು ಉಚಿತವಾಗಿ ನೀಡಿದ್ದು, ಬಡತನದಿಂದಾಗಿ ಸ್ವಂತ ಮನೆಯಿಲ್ಲದೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವಿನೋದ್ ಮತ್ತು ಅಂಜೆಲಿನ್ ಪಿಂಟೊ ಕುಟುಂಬಕ್ಕೆ ಮನೆ ನಿರ್ಮಿಸಲಾಗಿದ್ದು, ಐದು ತಿಂಗಳ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಿ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ ಎಂದರು.

Advertisements

ಕಾರ್ಯಕ್ರಮದಲ್ಲಿ ಮನೆ ನಿರ್ಮಾಣಕ್ಕೆ 5 ಸೆಂಟ್ಸ್ ಜಾಗವನ್ನು ಉಚಿತವಾಗಿ ನೀಡಿರುವ ತೋಮಸ್ ಮತ್ತು ವಲೇರಿಯಾನ ನೊರೊನ್ಹಾ ದಂಪತಿಯನ್ನು, ಮನೆಯನ್ನು ನಿರ್ಮಿಸಿದ ಎಂಜಿನಿಯರ್ ಎರೋಲ್, ಯೋಜನೆ ಸಾಕಾರಾಗೊಳ್ಳಲು ನೇತೃತ್ವ ವಹಿಸಿದ ಧರ್ಮಗುರುಗಳನ್ನು ಸನ್ಮಾನಿಸಲಾಯಿತು.
ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷ ಸುನೀಲ್ ಫೆರ್ನಾಂಡಿಸ್, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, 20 ಆಯೋಗಗಳ ಸಂಯೋಜಕಿ ವನಿತಾ ಫೆರ್ನಾಂಡಿಸ್, ಕಾನ್ವೆಂಟಿನ ಮುಖ್ಯಸ್ಥರಾದ ಸಿಸ್ಟರ್ ಸುಷ್ಮಾ, ಮೈಕಲ್ ಡಿಸೋಜಾ ಚಾರಿಟಿ ಟ್ರಸ್ಟ್ ನ ಸದಸ್ಯರಾದ ಸ್ಟೀಫನ್ ಪಿಂಟೊ, ಓಸ್ವಲ್ಡ್ ರೊಡ್ರಿಗಸ್, ಸಂತ ವಿನ್ಸೆಂಟ್ ದಿ ಪಾವ್ಲ್ ಸೊಸೈಟಿ ಉಡುಪಿ –ಕಲ್ಯಾಣಪುರ ವಲಯ ಪದಾಧಿಕಾರಿಗಳಾದ ವಿನ್ಸೆಂಟ್ ಕ್ವಾಡ್ರಸ್, ರಿಚ್ಚಾರ್ಡ್ ಡಿಸೋಜಾ, ತೊಟ್ಟಂ ಘಟಕದ ಅಧ್ಯಕ್ಷರಾದ ಸುಸಾನ್ನಾ ವಾಸ್, ಸಂತ ಸೆಬೆಸ್ಟಿಯನ್ ವಾರ್ಡ್ ನ ಗುರಿಕಾರರಾದ ರೊನಾಲ್ಡ್ ಫೆರ್ನಾಂಡಿಸ್, ಬಡಾನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಜೊಸೇಫ್ ಪಿಂಟೊ ಹಾಗೂ ಇತರರು ಉಪಸ್ಥಿತರಿದ್ದರು. ವಿನೋದ್ ಪಿಂಟೊ ಸ್ವಾಗತಿಸಿ, ವೆನಿಸ್ಸಾ ಪಿಂಟೊ ವಂದಿಸಿದರು ಲೆಸ್ಲಿ ಆರೋಜಾ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X