ದಕ್ಷಿಣ ಕನ್ನಡ | ಹೊಸ ಕಾರ್ಮಿಕ ಸಂಹಿತೆಗಳು ಕಟ್ಟಡ ಕಾರ್ಮಿಕರ ಹಕ್ಕುಗಳಿಗೆ ಮಾರಕ: ಯೋಗೀಶ್ ಜಪ್ಪಿನಮೊಗರು

Date:

ಕೇಂದ್ರ ಸರ್ಕಾರದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕರು ದಶಕಗಳ ಹೋರಾಟದ ಮೂಲಕ ಗಳಿಸಿಕೊಂಡಿರುವ ಹಕ್ಕುಗಳು ಮತ್ತು ಸಾಮಾಜಿಕ ಭದ್ರತೆಯನ್ನು ದುರ್ಬಲಗೊಳಿಸಲಿವೆ ಎಂದು ಕಟ್ಟಡ ಕಾರ್ಮಿಕರ ದಕ್ಷಿಣ ಕನ್ನಡ ಜಿಲ್ಲಾ ಕೋಶಾಧಿಕಾರಿ ಯೋಗೀಶ್ ಜಪ್ಪಿನಮೊಗರು ಹೇಳಿದರು.

- Advertisement -

ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಕಟ್ಟಡ ಕಾರ್ಮಿಕರ ಮೇಲಿನ ಪರಿಣಾಮಗಳ ಕುರಿತು ಸಮಾವೇಶದಲ್ಲಿ ಮಾತನಾಡಿದ ಅವರು, “₹50 ಲಕ್ಷಕ್ಕಿಂತ ಕಡಿಮೆ ವೆಚ್ಚದ ಖಾಸಗಿ ನಿರ್ಮಾಣ ಕಾಮಗಾರಿಗಳನ್ನು ಕಾನೂನಿನ ವ್ಯಾಪ್ತಿಯಿಂದ ಹೊರಗಿಡುವುದು, ಕಲ್ಯಾಣ ಮಂಡಳಿಗಳ ಸ್ವಾಯತ್ತತೆ ಕುಗ್ಗಿಸುವುದು, ಅಪಘಾತ ಪರಿಹಾರ, ವಸತಿ ಮತ್ತು ಮಕ್ಕಳ ಶಿಕ್ಷಣ ನೆರವು ದುರ್ಬಲಗೊಳಿಸುವುದು ಕಾರ್ಮಿಕರಿಗೆ ದೊಡ್ಡ ಹಿನ್ನಡೆಯಾಗಲಿದೆ. ವಲಸೆ ಕಾರ್ಮಿಕರ ಹಕ್ಕುಗಳು, ಕೆಲಸದ ಸ್ಥಳದ ಸುರಕ್ಷತೆ ಮತ್ತು ಹೆಚ್ಚುವರಿ ಕೆಲಸದ ದ್ವಿಗುಣ ವೇತನದ ಹಕ್ಕುಗಳಿಗೂ ಧಕ್ಕೆಯಾಗಲಿದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಗಲಕೋಟೆ | ಉತ್ಪಾದನೆ ಕುಸಿತ, ಭರ್ಜರಿ ಬೇಡಿಕೆ: ದಾಖಲೆ...

ಮುಂಗಾರು ಮಳೆಯ ಕೊರತೆ, ಭೀಕರ ಬರದ ಪರಿಣಾಮ ಹೊಲಗಳಲ್ಲಿ ಮೆಕ್ಕೆಜೋಳದ ಇಳುವರಿ ಕುಸಿದಿದೆ. ಆದರೆ, ಮಾರುಕಟ್ಟೆಯಲ್ಲಿ ಮಾತ್ರ ಮೆಕ್ಕೆಜೋಳಕ್ಕೆ ಚಿನ್ನದ ಬೆಲೆ ಬಂದಿದೆ! ಕಡಿಮೆ ಬೆಲೆಯಿಂದ ವರ್ಷಗಟ್ಟಲೆ ನಷ್ಟ ಅನುಭವಿಸಿದ್ದ ಬೆಳೆಗಾರರಿಗೆ ಈ...

ಏಳು ಕೊಲೆಗಳು ಮತ್ತು ಮನುಷ್ಯ ಮೃಗ!: ಕ್ರೋಧ, ಕ್ರೌರ್ಯ,...

ಮನುಷ್ಯತ್ವದ ಮುಖವಾಡ ಕಳಚಿದಾಗಒಳಗಿನ ಮೃಗ ಎಚ್ಚರಗೊಳ್ಳುತ್ತದೆ…ವಿವೇಕದ ಬೆಳಕು ಆರಿದಾಗಕ್ರೋಧವೇ ದಾರಿದೀಪವಾಗುತ್ತದೆ… ಬುದ್ಧಿಯೇ ಅದರ ಆಯುಧವಾದಾಗಸೇಡಿನ ಯೋಚನೆ ಸಂಚಾಗುತ್ತದೆ…ಪರರ ನೋವಿನಲ್ಲಿ ಸುಖ ಕಾಣುವ ಮನಸ್ಸುಕ್ರೌರ್ಯದ ಪರಮಾವಧಿ ತಲುಪುತ್ತದೆ… ಸುತ್ತಲಿನವರ ಮೌನ, ನಿರ್ಲಕ್ಷ್ಯಕೆಲವೊಮ್ಮೆ ಅಪಾಯಕ್ಕೆ ಆಹ್ವಾನವಾಗುತ್ತದೆ…ಕಾಲ ಮಿಂಚುವ ಮುನ್ನ...

ಮೀಸಲಾತಿ ಬಗ್ಗೆ ಮಾತನಾಡುವ ಮೊದಲು ತಮ್ಮ ಕುಟುಂಬದ ರಾಜಕೀಯ...

ಮೂರು ತಲೆಮಾರುಗಳಿಂದ ರಾಜಕೀಯ ಅಧಿಕಾರ ಅನುಭವಿಸುತ್ತಿರುವ ದೇವೇಗೌಡರ ಕುಟುಂಬಕ್ಕೆ ಇತರರ ಮೀಸಲಾತಿಯ ಬಗ್ಗೆ ಮಾತನಾಡುವ ನೈತಿಕ ಅರ್ಹತೆ ಇದೆಯೇ? “ಮೀಸಲು ಅನುಕೂಲ ಪಡೆದವರೇ ಮತ್ತೆ ಮತ್ತೆ ಪಡೆಯುತ್ತಿದ್ದಾರೆ, ನನ್ನ ಜನ ಅನಾಥರಾಗಿದ್ದಾರೆ” ಎಂಬ ಕೇಂದ್ರ...

ಜಿಲ್ಲೆಯ ಕಾರ್ಮಿಕ ಮುಖಂಡರಾದ ಸದಾಶಿವದಾಸ್ ಅವರು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಕಾರ್ಮಿಕರ ಹಕ್ಕುಗಳನ್ನು ಒಂದೊಂದಾಗಿ ಮೊಟಕುಗೊಳಿಸುವ ನೀತಿಗಳನ್ನು ಕೈಬಿಡಬೇಕು. ಕಾರ್ಮಿಕರ ಹಿತಾಸಕ್ತಿ ಮತ್ತು ಸಾಮಾಜಿಕ ಭದ್ರತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಮಿಕ ಸಂಘಟನೆಗಳು ಒಗ್ಗಟ್ಟಿನ ಹೋರಾಟ ನಡೆಸಬೇಕು” ಎಂದು ಆಗ್ರಹಿಸಿದರು.

IMG 20261108 WA0162

ನಾಲ್ಕೂ ಕಾರ್ಮಿಕ ಸಂಹಿತೆಗಳನ್ನು ಸಂಪೂರ್ಣವಾಗಿ ಹಿಂಪಡೆಯಬೇಕೆಂದು ಆಗ್ರಹಿಸಿ ಡಿಸೆಂಬರ್ 1, 2 ಮತ್ತು 3ರಂದು ದೆಹಲಿಯಲ್ಲಿ ದೇಶವ್ಯಾಪಿ ಹೋರಾಟ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ನವೆಂಬರ್ 16ರಂದು ದೇಶಾದ್ಯಂತ ಪ್ರತಿಭಟನೆಗಳು ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹಾಗೂ ಕಾರ್ಮಿಕ ಇಲಾಖೆಯ ಕಚೇರಿಗಳ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಈ ಹೋರಾಟದಲ್ಲಿ ಕಟ್ಟಡ ಕಾರ್ಮಿಕರು ಸೇರಿದಂತೆ ಎಲ್ಲಾ ವಿಭಾಗದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಲಾಯಿತು.

ಸಭೆಯ ಅಧ್ಯಕ್ಷತೆಯನ್ನು ದಿನೇಶ್ ಇರುವೈಲ್ ವಹಿಸಿದ್ದರು. ಕಾರ್ಯದರ್ಶಿ ವಸಂತಿ ಕುಪ್ಪೆಪದವು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರ್ವಹಿಸಿದರು. ಆನಂದ ಇರುವೈಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina 6
ಈದಿನ NRI ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಂದಾಪುರ–ಹೊಸಂಗಡಿ ರಸ್ತೆಯಲ್ಲಿ ಸಾವಿನ ಭೀತಿ: ಭಾರೀ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕಿ

ಕುಂದಾಪುರದಿಂದ ಹೊಸಂಗಡಿಯವರೆಗಿನ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಅಗಲೀಕರಣ ಕಾಮಗಾರಿಯನ್ನು...

ಚಿಕ್ಕಮಗಳೂರು | ಅಕ್ರಮ ಮಾದಕ ವಸ್ತು ಸೇವನೆ:  ಪ್ರಕರಣ ದಾಖಲು 

ನಗರದ ಐ.ಜಿ ರಸ್ತೆಯಲ್ಲಿ ಗಸ್ತಿನಲ್ಲಿರುವಾಗ ಮಧುವನ ಲೇ ಔಟ್ ನ ಪಾರ್ಕ್...

ಚಿಕ್ಕಮಗಳೂರು | ಅರಣ್ಯ ಸಿಬ್ಬಂದಿಗೆ ಹಲ್ಲೆ, ಕೊಲೆ ಬೆದರಿಕೆ 

ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಅರಣ್ಯ ಶೆಡ್ ಬಳಿ ವಾಚರ್ ಗೆ...

ಚಿಕ್ಕಮಗಳೂರು | ದೇವಿರಮ್ಮ ಬೆಟ್ಟ: ಕಾಲು ಜಾರಿ ಬಿದ್ದ ಯುವಕ

ಜಿಲ್ಲೆಯಲ್ಲಿರುವ ಪ್ರತಿ ವರ್ಷ ದೇವಿರಮ್ಮ ಜಾತ್ರಮಹೋತ್ಸವ ನಡೆಯುತ್ತದೆ. ದೇವಿರಮ್ಮ ಬೆಟ್ಟದಲ್ಲಿ ದರ್ಶನ...