ಬಸವಕಲ್ಯಾಣಕ್ಕೆ ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು

Date:

ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರ ಪ್ರಯತ್ನದಿಂದಾಗಿ ಜಿಲ್ಲೆಯ ಬಸವಕಲ್ಯಾಣ ನಗರಕ್ಕೆ ನೂತನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿದೆ.

- Advertisement -

ಈ ಕುರಿತು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಎಜಾಸ್ ಪಾಷ ಬುಧವಾರ ಆದೇಶ ಹೊರಡಿಸಿದ್ದು, ರಾಜ್ಯದ 20 ಜಿಲ್ಲೆಗಳಲ್ಲಿ 2025-26ನೇ ಸಾಲಿನಲ್ಲಿ 50 ಸಂಖ್ಯೆಬಲವುಳ್ಳ 20 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರದ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬಸವಕಲ್ಯಾಣದಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸಲು ವಿಜಯಸಿಂಗ್ ಅವರು ಅಲ್ಪಸಂಖ್ಯಾತರ ಖಾತೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು.

ತಾಲ್ಲೂಕಿನಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಅಧಿಕ ಇದೆ. ಹೀಗಾಗಿ ವಸತಿ ಶಾಲೆ ಮಂಜೂರು ಮಾಡಿ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕೋರಿದ್ದರು. ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಬಸವಕಲ್ಯಾಣದಲ್ಲಿ ವಸತಿ ಶಾಲೆ ಪ್ರಾರಂಭಿಸಲು ಆಡಳಿತಾತ್ಮಕ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ.

ಸರ್ಕಾರ, ವಸತಿ ಶಾಲೆ ಮಂಜೂರು ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ವಿಜಯಸಿಂಗ್ ಅವರು ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಶಾಲೆಯ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೀದರ್‌ | ನಿರಂತರ ಮಳೆಗೆ ಬಾಯ್ತರೆದ ಗುಂಡಿಗಳು : ಸಂಚಾರಕ್ಕೆ ಸಂಕಷ್ಟ

ಬಸವಕಲ್ಯಾಣ ತಾಲೂಕಿಗೆ ಹೊಸದಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭ ಕುರಿತಾದ ಮನವಿಗೆ ಸ್ಪಂದಿಸಿ ತಾಲೂಕಿಗೆ ಹೊಸದಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆ ಪ್ರಾರಂಭಿಸಲು ಸರ್ಕಾರದ ಅಡಳಿತಾತ್ಮಕ ಮಂಜೂರಾತಿ ನೀಡಿದ ಪ್ರಯುಕ್ತ ಅಲ್ಪಸಂಖ್ಯಾತ ಕಲ್ಯಾಣ ಸಚಿವರು ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಬೆಂಗಳೂರಿನಲ್ಲಿ ಮಾಜಿ ಎಂಎಲ್ಸಿ ವಿಜಯ್‌ ಸಿಂಗ್‌ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...