ತೆನೆ ಹೊತ್ತ ಮಹಿಳೆಗೆ ‘ಕಮಲ’ ಎಂಬ ಹೊಸ ನಾಮಕರಣ: ಪ್ರಜ್ವಲ್‌ ರೇವಣ್ಣ

Date:

“ಬಿಜೆಪಿ-ಜೆಡಿಎಸ್‌ ಮೈತ್ರಿಯಾದ ಬಳಿಕ ತೆನೆಹೊತ್ತ ಮಹಿಳೆ ಚಿಹ್ನೆ ಇರುತ್ತಾ ಅಥವಾ ಕಮಲದ ಚಿಹ್ನೆ ಇರುತ್ತಾ ಎಂದು ಕೇಳುತ್ತಿದ್ದಾರೆ. ಈ ಬಗ್ಗೆ ಜನರಿಗೆ ಅನುಮಾನ ಗೊಂದಲ ಬೇಡ. ತೆನೆಹೊತ್ತ ಮಹಿಳೆ ನಮ್ಮ ಚಿಹ್ನೆಗೆ ಕಮಲ ಎಂದು ಹೊಸದಾಗಿ ನಾಮಕರಣ ಮಾಡಿದ್ದೇವೆ” ಎಂದು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ತಿಳಿಸಿದ್ದಾರೆ.

- Advertisement -

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಂಚಿಗನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, “ದೇಶಕ್ಕಾಗಿ ನಡೆಯುತ್ತಿರುವ ಚುನಾವಣೆ ಲೋಕಸಭಾ ಚುನಾವಣೆ. ಅಭಿವೃದ್ಧಿ ವಿಚಾರದಲ್ಲಿ ನಮಗೆ ಯಾರೂ ಸರಿಸಾಟಿಯೇ ಇಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಕಾಂಗ್ರೆಸ್‌ ನಾಯಕರು ಮಾತು ಎತ್ತಿದರೇ, ಎಚ್‌.ಡಿ.ರೇವಣ್ಣ ದುರಹಂಕಾರಿ ಎಂದೆನ್ನುತ್ತಾರೆ. ಆದರೆ, ರೇವಣ್ಣನವರಿಗೆ ಸ್ವಲ್ಪ ಸಿಟ್ಟು ಜಾಸ್ತಿ ಇದೆ. ಆದರೆ, ಅವರ ಹೃದಯದಲ್ಲಿ ಪ್ರೀತಿ ಇದೆ. ರೇವಣ್ಣನವರು ಸ್ವಂತ ಕುಟುಂಬವನ್ನೂ ಮರೆತು ಜನರಿಗಾಗಿ ದುಡಿಯುತ್ತಾರೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಬಕಾರಿ ಪ್ರಕರಣ | ಇಡಿ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ; ಏ.15ರಂದು ವಿಚಾರಣೆ

“ನನ್ನ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಎಚ್‌.ಡಿ ರೇವಣ್ಣ ಅವರ ಕಣ್ಣೀರು ಒರೆಸುವ ಕೆಲಸ ಮಾಡಿ. ರೇವಣ್ಣ ಅವರಿಗೆ ಬಲತುಂಬುವ ಕೆಲಸ ಮಾಡಿ. ನಾನು ಗೆದ್ದ ಬಳಿಕ ಈ ಭಾಗದಲ್ಲಿ ಇಲ್ಲಿಯವರೆಗೂ ಏನೇನೂ ಕೆಲಸ ಮಾಡಿದ್ದೇನೆಂದು ಅರ್ಧ ಗಂಟೆವರೆಗೂ ಹೇಳಬಲ್ಲೇ, ಮನೆ ಮನೆಗೆ ನೀರು ತರಿಸುವ ಕೆಲಸ ಮಾಡಿದ್ದೇನೆ. ₹4907 ಕೋಟಿ ರೂಪಾಯಿ ಅನುದಾನ ತಂದಿದ್ದೇನೆ. ರಸ್ತೆಗಳನ್ನ ಮಾಡಿಸಿದ್ದೀನಿ” ಎಂದಿದ್ದಾರೆ.

“ಆರ್‌ಎಸ್‌ಎಸ್‌ ಸ್ವಯಂ ಸೇವಕ ವಿಜಯಕುಮಾರ್ ಮೇಲೆ ಹಲ್ಲೆ ಪ್ರಕರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಮೀಲಾಗಿದ್ದಾರೆ. ಪೊಲೀಸರು ಒತ್ತಡಕ್ಕಡ ಸಿಲುಕಿದ್ದಾರೆ. ವಿಜಯಕುಮಾರ್‌ಗೆ ನ್ಯಾಯ ಸಿಗುವ‌ವರೆಗೂ ಹೋರಾಡುತ್ತೇನೆ” ಎಂದು ಹೇಳಿದರು.

“ವಿಜಿಯವರ ಮೇಲೆ ಮಾರಕಾಸ್ತ್ರ ಬಳಸಿ ಹಲ್ಲೆ ಮಾಡಿದ್ದಾರೆ. ತಲೆಗೆ ಕಲ್ಲಿನಿಂದ ಹೊಡೆದಿದ್ದಾರೆ. ಅಂಗಡಿ ನಾಶಪಡಿಸಿದ್ದಾರೆ. ವಿಜಿಯವರು ಹಿಂದುತ್ವಕ್ಕಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅವರಿಗಿನ್ನೂ ಮದುವೆಯಾಗಿಲ್ಲ. ಅವರ ಬಳಿ ಆಸ್ಪತ್ರೆಗೆ ಕಟ್ಟಲು ಹಣ ಸಹ ಇಲ್ಲ. ಅವರ ತುಂಬಾ ಒಳ್ಳೆಯ ವ್ಯಕ್ತಿ. ಅವರ ಮೇಲೆ ಹಲ್ಲೆ ಮಾಡುವಂತಹವರ ಮನಸ್ಥಿತಿ ಹೇಗಿರಬೇಕು. ವಿಜಿಯವರಿಗೆ ಏನಾದರೂ ಆಗಿದ್ದರೇ, ಅವರ ತಂದೆ-ತಾಯಿಯನ್ನ ಯಾರು ನೋಡಿಕೊಳ್ಳುತ್ತಿದ್ದರು” ಎಂದು ಹೇಳಿದರು.

“ವಿಜಿಯವರ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ಸಬ್‌ಕಾನ್ಷಿಯಸ್ ಲೆವೆಲ್‌ನಲ್ಲಿ ಇರಲಿಲ್ಲ. ರಾತ್ರಿ ಸ್ವಲ್ಪ ಚೇತರಿಸಿಕೊಂಡ ಮೇಲೆ ಹೇಳಿಕೆ ಕೊಟ್ಟಿದ್ದಾರೆ. ಈ ಪ್ರಕರಣದಲ್ಲಿ ಕೆಲವರು ರಾತ್ರೋರಾತ್ರಿ ಹಾಸನದಿಂದ ಪೊಲೀಸರಿಗೆ ಫೋನ್ ಮಾಡಿಸಿದ್ದಾರೆ. ಕಿಡಿಗೇಡಿಗಳ ಮೇಲೆ ಪೊಲೀಸರು ಕಠಿಣವಾದ ಕ್ರಮ ಜರುಗಿಸಬೇಕಿತ್ತು. ಆದರೆ ವಿಫಲರಾಗಿದ್ದಾರೆ. ರಾಜಕೀಯ ಒತ್ತಡಕ್ಕೆ ಮಣಿದು ರೌಡಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ಈ ಬಗ್ಗೆ ಸೂಕ್ತವಾದ ತನಿಖೆಯಾಗಬೇಕು. ಸಂತ್ರಸ್ತರಿಗೆ ನ್ಯಾಯ ಕೊಡಿಸುವುದು ಪೊಲೀಸರ ಜವಾಬ್ದಾರಿಯಾಗಿದೆ. ಜನಪರ ಕೆಲಸ ಮಾಡುವ ಖಾಕಿ ಯಾರೋ ಒಬ್ಬರ ಗುಲಾಮರಾಗಬಾರದು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...