ದೊಡ್ಡಬಳ್ಳಾಪುರ | ಎಜಾಕ್ಸ್‌ ಸರಕಾರಿ ಹೊರರೋಗಿ ವಿಭಾಗಕ್ಕೆ ಸಚಿವ ಗುಂಡೂರಾವ್‌ ಚಾಲನೆ

Date:

Advertisements

ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ 4 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಒಪಿಡಿ ಬ್ಲಾಕ್, ಡಯಾಲಿಸಿಸ್ ಕೇಂದ್ರ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರಗಳನ್ನೊಳಗೊಂಡ ಕಟ್ಟಡವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಬುಧವಾರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಸಚಿವ ಗುಂಡೂರಾವ್‌, ಉತ್ಕ್ರಷ್ಟ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಎಲ್ಲಾ ವಿಧವಾದ ಚಿಕಿತ್ಸೆ ಹಾಗೂ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ದೊರೆಯುವಂತೆ ನೋಡಿಕೊಳ್ಳಲಾಗುವುದು. ಈ ಹಿಂದೆ 250 ರಿಂದ 300 ಅಗತ್ಯ ಔಷಧಿಗಳು ದೊರೆಯುತಿದ್ದು, ಅವುಗಳ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.

ದೊಡ್ಡಬಳ್ಳಾಪುರ ನೂತನ ಡಯಾಲಿಸಿಸ್ ಕೇಂದ್ರಕ್ಕೆ 1.5 ಕೋಟಿ ವೆಚ್ಚದ ಉಪಕರಣಗಳು ಹಾಗೂ ಪ್ರತಿ ವರ್ಷ ಮಾನವ ಸಂಪನ್ಮೂಲಗಳಿಗೆ 50 ಲಕ್ಷ ಒದಗಿಸಲಾಗುವುದೆಂದರು. ಈಗಾಗಲೇ ನೆಲಮಂಗಲ ತಾಲೂಕು ಕೇಂದ್ರಕ್ಕೆ ತಾಲೂಕು ಆಸ್ಪತ್ರೆ ಮಂಜೂರಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಪೂರ್ಣ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದೆಂದರು.

Advertisements
ಹೊರ ರೋಗಿ ವಿಭಾಗ

ಇತ್ತೀಚೆಗೆ ಬಿಪಿ, ಶುಗರ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮನೆ ಮನೆಗೆ ತೆರಳಿ ಪರೀಕ್ಷಿಸುವ ಯೋಜನೆ ಜಾರಿಗೆ‌ ತರಲಾಗುತ್ತಿದೆ. ಈ ಖಾಯಿಲೆಗಳು ಮುಂದಿನ ದಿನಗಳಲ್ಲಿ ಬೇರೆ ಬೇರೆ ಖಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ. ರಾಜ್ಯಾದ್ಯಂತ 8 ಸಾವಿರ ಡಯಾಲಿಸಿಸ್ ಯಂತ್ರಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಶೇ.80ರಷ್ಟು ಜನ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದು, ಸರ್ಕಾರ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಜಾಕ್ಸ್ ಸಂಸ್ಥೆಯು ಉತ್ತಮ ಕೆಲಸ ಮಾಡುತಿದ್ದು, ಶಿಕ್ಷಣ ಕ್ಷೇತ್ರಕ್ಕೂ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಜಿಲ್ಲೆಯ ಹಲವಾರು ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳು ಪಟ್ಟಿ ನೀಡಿದ್ದು ಅವುಗಳ ಮೇಲ್ದರ್ಜೆಗೆ ಸಚಿವರು ಸಮ್ಮತಿಸಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೀಸಲಾತಿಗೇ ಕುತ್ತು ಬಂದಿರುವಾಗ, ಒಳಮೀಸಲಿನ ನಿಜವನ್ನು ಇನ್ನೆಷ್ಟು ಕಾಲ ಮುಂದೂಡುತ್ತೀರಿ?

ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ, ನಗರಸಭೆಯ ಅಧ್ಯಕ್ಷೆ ಸುಮಿತ್ರಾ, ಉಪಾಧ್ಯಕ್ಷ ಮಲ್ಲೇಶ್, ಆರೋಗ್ಯ ಇಲಾಖೆಯ ನಿರ್ದೇಶಕರಾದ ತ್ರಿವೇಣಿ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಅಜಾಕ್ಸ್ ಸಂಸ್ಥೆಯ ಮುಖ್ಯಸ್ಥರಾದ ವಿಜಯ್,
ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X