ಮಂಡ್ಯ | ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು: ನಿಖಿಲ್ ಕುಮಾರಸ್ವಾಮಿ

Date:

ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಸ್ವಾಭಿಮಾನ ಉಳ್ಳವರಾಗಿದ್ದಾರೆ. ಯಾರೇ ಕಿಡಿಗೇಡಿಗಳು ನೋವು ಕೊಟ್ಟರು ಅದಕ್ಕೆ ಪ್ರತಿಕ್ರಿಯೆ ಮಾಡಬೇಡಿ. ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್‌ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

- Advertisement -

ಮೈಸೂರು ಚಲೋ ಪಾದಯಾತ್ರೆಯು ಮಂಡ್ಯಕ್ಕೆ ಆಗಮನಿಸಿದಾಗ ಜನರನ್ನುದ್ದೇಶಿಸಿ ಮಾತನಾಡಿದ ಅವರು, “ಮಂಡ್ಯದಲ್ಲಿ ನಿನ್ನೆಯ ದಿನ ನಡೆದ ಸಂಗತಿ ಬೇಸರ ತರಿಸಿದೆ. ಯಾರೇ ಕಿಡಿಗೇಡಿಗಳು ಬಂದು ಏನೇ ಕುಚೇಷ್ಟೆ ಮಾಡಿದರೂ ಕಾರ್ಯಕರ್ತರು ತಾಳ್ಮೆ ಕಳೆದುಕೊಳ್ಳದೆ ಸಹನೆಯಿಂದ ಇರಬೇಕು. ನಮ್ಮ ಉದ್ದೇಶ ಪಾದಯಾತ್ರೆ, ನಮ್ಮ ಹೋರಾಟ ಮೂಡಾ ಹಾಗೂ ವಾಲ್ಮೀಕಿ ಹಗರಣಗಳ ವಿರುದ್ಧ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಸಂಬಂಧ ತುಂಬಾ ಅತ್ಯುತ್ತಮವಾಗಿದೆ ಎಂದು ತಿಳಿಸಿದ್ದಾರೆ. ನಮ್ಮ ನಾಯಕರು ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಮಂಡ್ಯದ ಘಟನೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ತಾವುಗಳು ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕಾರಣಕ್ಕೂ ಬೇರೆ ಬೇರೆ ರೀತಿಯ ಘಟನೆಗಳಿಗೆ ಅವಕಾಶ ಕೊಡಬಾರದು ಎಂದಿದ್ದಾರೆ. ಕಾರ್ಯಕರ್ತರು ತಾಳ್ಮೆಯಿಂದ ಸಮಾಧಾನಕರವಾಗಿ ವರ್ತನೆ ಮಾಡಬೇಕು ಎಂದು ತಮ್ಮ ಕಾರ್ಯಕರ್ತರಿಗೆ ಒಂದು ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.

ಎರಡೂ ಪಕ್ಷದ ಸಮನ್ವಯ ಸಮಿತಿಯ ಸದಸ್ಯರು ಈ ಘಟನೆಯ ಬಗ್ಗೆ ಒಕ್ಕೂಟಕ್ಕೆ ಮಾಹಿತಿ ಕೊಟ್ಟಿದ್ದಾರೆ. ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡೊಣ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಹೊಸನಗರ | ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಇದೇ ವೇಳೆ, ಕಾಂಗ್ರೆಸ್‌ ಸರ್ಕಾರದ ಹಗರಣಗಳ ಬಗ್ಗೆ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡುತ್ತಿದ್ದೇವೆ. ಮೈಸೂರು ಚಲೋ ಪಾದಯಾತ್ರೆ ಯಶಸ್ವಿಯಾಗಿ ಸಾಗುತ್ತಿದೆ. ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ರೈತರು ನಮ್ಮ ಜೊತೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...

ಸಾಗರ | ಡಾ. ಹೆಚ್. ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ದಿವಂಗತ ಹೆಚ್.ಗಣಪತಿಯಪ್ಪ...