ಉಡುಪಿ | ಸಂವಿಧಾನ ಇಲ್ಲದಿದ್ದರೆ ಸ್ವಾತಂತ್ರ್ಯವೇ ಇಲ್ಲ : ನಿಕೇತ್ ರಾಜ್ ಮೌರ್ಯ

Date:

ಸಂವಿಧಾನ ಉಳಿದರೆ ಮಾತ್ರ ನಾವುಗಳು ಉಳಿಯಲು ಸಾಧ್ಯ. ಸಂವಿಧಾನವೇ ಇಲ್ಲದಿದ್ದರೆ ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ಯಾರಿಗೂ ಸಾಧ್ಯವಾಗುತ್ತಿರಲಿಲ್ಲ ಎಂದು ಕೆಪಿಸಿಸಿ ರಾಜ್ಯ ವಕ್ತಾರರಾದ ನಿಕೇತ್ ರಾಜ್ ಮೌರ್ಯ ಹೇಳಿದರು. ಉಡುಪಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಇಂದು ನಡೆದ ‘ಓಟ್ ಚೋರಿ ಅಭಿಯಾನ’ದ ಸಮಾರೋಪ ಸಮಾರಂಭದ ಅಂಗವಾಗಿ ಆಯೋಜಿಸಲಾದ ಮಾನವ ಸರಪಳಿ ಸಭೆಯಲ್ಲಿ ಮಾತನಾಡಿದರು.

- Advertisement -

ಒಂದು ಕಾಲದಲ್ಲಿ ಉಡುಪಿಯಲ್ಲಿ ಕನಕದಾಸರಿಗೆ ದೇವಾಲಯ ಪ್ರವೇಶವನ್ನು ನಿರಾಕರಿಸಲಾಗಿತ್ತು. ಅವರ ಹುಟ್ಟಿದ ಜಾತಿಯೇ ದೇವರ ದರ್ಶನಕ್ಕೆ ಅಡ್ಡಿಯಾಗಿತ್ತು. ಆದರೆ ಇಂದು ಯಾವುದೇ ಒಬ್ಬ ದಲಿತ, ಶೂದ್ರ ಅಥವಾ ಹಿಂದುಳಿದ ವರ್ಗದ ವ್ಯಕ್ತಿಯೂ ಧೈರ್ಯವಾಗಿ ಉಡುಪಿ ಕೃಷ್ಣನ ದರ್ಶನಕ್ಕೆ ಹೋಗುವಂತಾಗಿದೆ. ಇದಕ್ಕೆ ಕಾರಣ ಯಾರೂ ಅಲ್ಲ—ಭಾರತದ ಸಂವಿಧಾನ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವೇ ಈ ದೇಶದ ತಳ ಸಮುದಾಯಗಳಿಗೆ ದೇವಾಲಯ ಪ್ರವೇಶ, ವಿದ್ಯೆ ಹಾಗೂ ಮಾನವೀಯ ಹಕ್ಕುಗಳನ್ನು ನೀಡಿದೆ. ಸಂವಿಧಾನ ಇರುವುದರಿಂದಲೇ ನಾವು ಇಂದು ಸಮಾನತೆ ಮತ್ತು ಗೌರವದಿಂದ ಬದುಕಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಮಂಜುನಾಥ್ ಭಂಡಾರಿ, ಕಾಂಗ್ರೆಸ್‌ ಮುಖಂಡರು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆˌ ವಿಧಾನ ಪರಿಷತ್‌ ಸದಸ್ಯ ಐವನ್ ಡಿ’ ಸೋಜˌ ಚಿಂತಕ ಫಣಿರಾಜ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

WhatsApp Image 2025 12 20 at 1.18.33 PM 1

ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎ. ಗಪೂರ್, ನಾರಾಯಣ ಗುರು ನಿಗಮದ ಮಂಜುನಾಥ್ ಪೂಜಾರಿ, ಜಯಪ್ರಕಾಶ್ ಹೆಗ್ಡೆ, ಉಡುಪಿ ನಗರಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೆರೂರು, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋನಿಯಾ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಮುಖಂಡರಾದ ರಾಜು ಪೂಜಾರಿ, ಉದಯಕುಮಾರ್ ಶೆಟ್ಟಿ, ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳವಳ್ಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಓಟ್ ಚೋರಿ ಅಭಿಯಾನದ ಸಂಯೋಜಕರಾದ ಹರಿಪ್ರಸಾದ್ ರೈ, ಬ್ಲಾಕ್ ಅಧ್ಯಕ್ಷರಾದ ರಮೇಶ್ ಕಾಂಚನ್, ರಾಘವೇಂದ್ರ ಶೆಟ್ಟಿ ಕರ್ಜೆ, ವೈ. ಸುಕುಮಾರ್, ಗೋಪಿನಾಥ್ ಭಟ್, ಶುಭೋದ್ ರಾವ್, ಸಂತೋಷ್ ಕುಲಾಲು, ಪ್ರದೀಪ್ ಕುಮಾರ್ ಶೆಟ್ಟಿ, ಅರವಿಂದ್ ಪೂಜಾರಿ, ಶಂಕರ್ ಕುಂದರ್, ಹರಿಪ್ರಸಾದ್ ಶೆಟ್ಟಿ, ದಿನೇಶ್ ಪುತ್ರನ್, ಭಾಸ್ಕರ ರಾವ್ ಕಿದಿಯೂರು, ಅಣ್ಣಯ್ಯ ಸೇರಿಗಾರ್, ಕುಶಲ ಶೆಟ್ಟಿ, ಶಿವಾಜಿ ಸುವರ್ಣ, ಕೃಷ್ಣಮೂರ್ತಿ, ಶಬ್ಬಿರ್ ಅಹ್ಮದ್, ಕುಶಲ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಸತೀಶ್ ಕೊಡವೂರು, ವೆರೋನಿಕಾ ಕರ್ನೆಲಿಯೋ, ಡಾ. ಸುನಿತಾ ಶೆಟ್ಟಿ, ರೋಶನ್ ಶೆಟ್ಟಿ, ರೊಶನಿ ಒಲಿವರಾ, ಭುಜಂಗ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಅಮೃತಾ ಕೃಷ್ಣಮೂರ್ತಿ, ಬಾಲಕೃಷ್ಣ ಪೂಜಾರಿ, ಶರ್ಪುದ್ದೀನ್ ಶೇಖ್ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಸ್ವಾಗತಿಸಿದರು, ನಾಗೇಶ್ ಕುಮಾರ್ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 12 20 at 1.17.54 PM

ಉಡುಪಿ ಸಿಟಿ ಬಸ್‌ ನಿಲ್ಡಾಣದಿಂದ ಮಣಿಪಾಲದ ಟೈಗರ್‌ ಸರ್ಕಲ್‌ ವರೆಗೂ ಓಟ್‌ ಚೂರಿ ವಿರುದ್ದ ಸಂಗ್ರಹಿಸಿದ ಸಹಿಯ ಬ್ಯಾನರ್‌ ಪ್ರದರ್ಶನದ ಮೂಲಕ ಮಾನವ ಸರಪಳಿ ಹಮ್ಮಿಕೊಳ್ಳಲಾಗಿತ್ತು.

WhatsApp Image 2025 12 20 at 1.17.54 PM 1
WhatsApp Image 2025 12 20 at 1.17.53 PM
WhatsApp Image 2025 12 20 at 1.17.52 PM
WhatsApp Image 2025 12 20 at 1.17.50 PM
WhatsApp Image 2025 12 20 at 1.18.34 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...