ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ನೂರಾನಿ ಗಂಧೋತ್ಸವ; ಎಲ್ಲೆಡೆ ಸಂಭ್ರಮಾಚರಣೆ

Date:

ಸುಪ್ರಸಿದ್ಧ ಭಕ್ತಿಯ ತಾಣ ಚಿಂತಾಮಣಿ ನಿಮ್ಮಕಾಯಲಹಳ್ಳಿ ಗ್ರಾಮದ ಹಜರತ್ ಸೈಯದ್ ಜಲಾಲ್ ಖಾಕಿ ಷಾ ಮೌಲಾ ಬಾಬಾ ದರ್ಗಾದ ಮೊದಲನೇ ದಿನದ ನೂರಾನಿ ಗಂಧೋತ್ಸವವನ್ನು ಗುರುವಾರ ರಾತ್ರಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

- Advertisement -

ಹಿಂದೂ ಮುಸ್ಲಿಮರ ಭಾವೈಕ್ಯತೆಯ ಸಂಗಮವಾಗಿರುವ ಚಿಂತಾಮಣಿ ತಾಲ್ಲೂಕಿನ ನಿಮ್ಮಕಾಯಲಹಳ್ಳಿಯಲ್ಲಿ ಹಲವು ವರ್ಷಗಳಿಂದ ನೂರಾನಿ ಗಂಧೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಎಂದಿನಂತೆ ದರ್ಗಾ ಮುಜಾವರ್ ಎಸ್ ಮೌಲಾ ಅಲಿ ಅವರೊಂದಿಗೆ ಎಲ್ಲಾ ಮುಜಾವರ್‌ಗಳು ಒಟ್ಟಾಗಿ ಸೇರಿ ಮುಸ್ಲಿಂ ಸಂಪ್ರದಾಯದಂತೆ ಗಂಧೋತ್ಸವನ್ನು ಆಚರಣೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
ಗಂಧೋತ್ಸವ ೧

ಕುರಾನ್‌ ಪಠಣೆ, ತಮಟೆ ವಾದ್ಯದ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಗಂಧೋತ್ಸವ ಮೆರವಣಿಗೆ ಸಾಗಿತು. ಪಕೀರರು ಹಾಗೂ ಗ್ರಾಮದ ಯುವಕರು ಗಂಧದ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ನಂತರ ದರ್ಗಾಗೆ ತೆರಳಿ ಗಂಧವನ್ನು ಅರ್ಪಿಸಿದ ಪ್ರಮುಖರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಗಂಧೋತ್ಸವದಲ್ಲಿ ದರ್ಗಾ ಮುಜಾವರಗಳಾದ ಪ್ಯಾರೆಜಾನ್, ಮಹಬೂಬ್ ಸಾಬ್, ಶಫಿವುಲ್ಲಾ, ರಫೀಕ್, ಜಿಯಾ ಉಲ್ಲಾ, ತಾಜ್ ಪೀರ್, ಜಬೀ, ಮುಬಾರಕ್, ಇಲಿಯಾಸ್, ರಹಮತ್, ದರ್ಗಾ ಅಧ್ಯಕ್ಷ ಅಮೀರ್ ಜಾನ್ ಸೇರಿದಂತೆ ದರ್ಗಾ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಮುಖಂಡರು, ಸ್ಥಳೀಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...