ಉಡುಪಿ | ಗಂಭೀರ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು; ಸೂಚನೆ

Date:

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು, ಇಂದ್ರಾಳಿಯ ರೈಲು ನಿಲ್ದಾಣದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು, ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ ಮೃತಪಟ್ಟಿದ್ದಾರೆ. ಶವವನ್ನು‌ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಮೃತ ವ್ಯಕ್ತಿಯ ಬಳಿ, ಯಾವೊಂದೂ ಗುರುತು ಚೀಟಿ ಪತ್ತೆಯಾಗದೆ ಇರುವುದರಿಂದ‌, ಹೆಸರು ವಿಳಾಸ ತಿಳಿದುಬಂದಿಲ್ಲ. ವಾರಸುದಾರರು ತುರ್ತಾಗಿ ಉಡುಪಿ ಜಿಲ್ಲಾಸ್ಪತ್ರೆಯ ನಾಗರೀಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

- Advertisement -

ರೈಲು ಸಂಖ್ಯೆ 02198 ಜಬ್ಲಾಪುರದಿಂದ ಕೊಯಮತ್ತೂರಿಗೆ ತೆರಳುವ ವಿಶೇಷ ರೈಲು ಗಾಡಿಯ ಸಾಮಾನ್ಯ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಉಡುಪಿ ನಿಲ್ದಾಣ ಸಮೀಪಿಸುತ್ತಿದ್ದಂತೇ ಮೂರ್ಛೆ ಬಂದಿದೆ. ತಕ್ಷಣ ಸಹಪ್ರಯಾಣಿಕರು ಪ್ರಯಾಣಚೀಟಿ ತಪಾಸಣಾಧಿಕಾರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಅಧಿಕಾರಿಯವರು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಪ್ರಯಾಣಿಕನನ್ನು ಆಸ್ಪತ್ರೆಗೆ ಸಾಗಿಸಲು ಇಳಿಸಿದ್ದು, ರೈಲ್ವೆ ಇನ್ಸ್ಪೆಕ್ಟರ್ ಮಧುಸೂದನ್ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡುವರ‌ ನೆರವು ಪಡೆದಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ: ದಶಕಗಳ ಹೋರಾಟಕ್ಕೆ ಜಯ

ಕರ್ನಾಟಕ ರಾಜ್ಯ ಸರ್ಕಾರ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ರಾಜ್ಯದ ಬೌದ್ಧ...

ಬಾಗಲಕೋಟೆ | ಆತ್ಮರಕ್ಷಣೆಗೆ ವುಶು, ಕರಾಟೆ ಕ್ರೀಡೆಗಳ ಅಗತ್ಯವಿದೆ: ಡಾ. ವೀರಣ್ಣ ಚರಂತಿಮಠ

ದೈಹಿಕ ಹಾಗೂ ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಕ್ರೀಡೆಗಳು ಅತ್ಯವಶ್ಯವಾಗಿದ್ದು, ವುಶು ಮತ್ತು...

ಯಾದಗಿರಿ | ವೆಂಕಟಪ್ಪ ನಾಯಕನ ನಾಡು ಸುರಪುರದಲ್ಲಿ ಅಸ್ಪೃಶ್ಯತೆ ಇಂದಿಗೂ ಜೀವಂತ!

ಯಾದಗಿರಿಯ ಸೂಗೂರು ಗ್ರಾಮದಲ್ಲಿ ದಲಿತರಿಗೆ ಕ್ಷೌರ, ಬಳೆ ಅಂಗಡಿ, ಹೊಲಿಗೆ ಶಾಪ್‌,...

ಕರಾಮುವಿ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮದ ಆರೋಪ: ಉನ್ನತ ಅಧಿಕಾರಿಗಳ ಶಾಮೀಲು ಶಂಕೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕರಾಮುವಿ) ಪರೀಕ್ಷಾ ಕೇಂದ್ರಗಳಲ್ಲಿ ವ್ಯಾಪಕ ಅಕ್ರಮಗಳು...