ಉಡುಪಿ | ಹಿರಿಯ ಬಸ್ ಏಜೆಂಟ್ ಆತ್ಮ*ಹತ್ಯೆ, ಪ್ರಕರಣ ದಾಖಲು

Date:

ಮನೆಯ ಬಾವಿಯಲ್ಲಿ ಜಿಗಿದು, ಹಿರಿಯ ನಾಗರಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಸೋಮವಾರ ಬನ್ನಂಜೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು‌ ಮಂಜುನಾಥ್ ಶೆಣೈ (72ವ), ಹಿರಿಯ‌ ಬಸ್ ಏಜೆಂಟ್ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.

- Advertisement -

ಬೊಬ್ಬಿಡುವ ಶಬ್ದ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು, ಅಗ್ನಿಶಾಮಕ ದಳವನ್ನು ಕರೆಸಿಕೊಂಡರು. ಅಗ್ನಿಶಾಮಕ ದಳದವರು ಹಗ್ಗದ ಸಹಾಯದಿಂದ ಬಾವಿಯಲ್ಲಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿದರು. ತಕ್ಷಣ ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ವ್ಯಕ್ತಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿ, ಪರೀಕ್ಷೆಗೆ ಒಳಪಡಿಸಿದಾಗ, ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ದೃಢೀಕರಿಸಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 5 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...