ಮಂಗಳೂರು | ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ನಿಧನ

Date:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ಮೂಲಕ ಹೆಸರು ಗಳಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್ ವಿನಯ್ ಹೆಗ್ಡೆ ಅವರು ಜನವರಿ 1ರಂದು ಬೆಳಗ್ಗೆ ನಿಧನರಾಗಿದ್ದಾರೆ.

- Advertisement -

ವಿನಯ್ ಹೆಗ್ಡೆ ಅವರಿಗೆ 83 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅವರ ಪಾರ್ಥಿವ ಶರೀರವನ್ನು ಜನವರಿ 1ರ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3.00 ರವರೆಗೆ ಮಂಗಳೂರಿನ ಶಿವಭಾಗ್‌ನಲ್ಲಿರುವ ಸದಾನಂದ ನಿವಾಸದಲ್ಲಿ ಮತ್ತು ಸಂಜೆ 4.30 ರಿಂದ ಸಂಜೆ 6.00 ರವರೆಗೆ ನಿಟ್ಟೆ ಕ್ಯಾಂಪಸ್‌ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.

ಶಿಕ್ಷಣ ತಜ್ಞ, ಉದ್ಯಮಿ, ಸಮಾಜ ಸೇವಕರಾಗಿದ್ದ ವಿನಯ್ ಹೆಗ್ಡೆ ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದರು.

Advertisements

ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರು ರಾಜ್ಯೋತ್ಸವ ಪ್ರಶಸ್ತಿ, ಗೌರವ ಡಾಕ್ಟರೇಟ್ ಸಹಿತ ಹಲವು ಗೌರವಗಳಿಗೆ ಪಾತ್ರರಾಗಿದ್ದರು.

ಲೋಕಸಭಾ ಸ್ಪೀಕ‌ರ್ ಆಗಿದ್ದ ದಿವಂಗತ ಜಸ್ಟಿಸ್‌ ಕೆ.ಎಸ್‌. ಹೆಗ್ಡೆ ಅವರ ಪುತ್ರರಾಗಿದ್ದ ವಿನಯ್ ಹೆಗ್ಡೆ ಮಂಗಳೂರಿನ ಸೈಂಟ್ ಅಲೋಶಿಯಸ್‌ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದ್ದರು.

ತಂದೆಯ ಆಶಯದಂತೆ 1979ರಲ್ಲಿ ‘ನಿಟ್ಟೆ ಎಜುಕೇಶನ್‌ ಟ್ರಸ್ಟ್’ ಸ್ಥಾಪಿಸಿದರು. ಬಳಿಕ ಈ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದರಲ್ಲಿ ವೈದ್ಯಕೀಯ, ಇಂಜಿನಿಯರಿಂಗ್‌, ದಂತ ವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು ಸೇರಿವೆ.

ಮಂಗಳೂರಿನ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿಯಾದ ಅವರು ಲೆಮಿನಾ ಸಸ್ಪೆನ್ಸನ್‌ ಪ್ರೈವೇಟ್ ಲಿಮಿಟೆಡ್‌, ಸೇರಿದಂತೆ ಲೆಮಿನಾ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಇದು ಆಟೋಮೊಬೈಲ್ ಭಾಗಗಳ ತಯಾರಿಕೆಯಲ್ಲಿ ಪ್ರಮುಖ ಸಂಸ್ಥೆಯಾಗಿದೆ.

ವಿನಯ್ ಹೆಗ್ಡೆ ಅವರು ಕರ್ನಾಟಕದ ಮಾಜಿ‌‌ ಲೋಕಾಯುಕ್ತ, ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗ್ಡೆ ಅವರ ಸಹೋದರ ಕೂಡ ಆಗಿದ್ದಾರೆ‌.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...