ಧಾರವಾಡ | ಚಿಗರಿ ಬಸ್‌ಗಳಲ್ಲಿ ಮಹಿಳೆಯರಿಗಿಲ್ಲ ಉಚಿತ ಪ್ರಯಾಣ

Date:

ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಶೀಘ್ರ ಸಂಪರ್ಕಕ್ಕಾಗಿ ಬಿಆರ್‌ಟಿಎಸ್‌ ನಿಂದ ‘ಚಿಗರಿ’ ಹೆಸರಿನ ಐಷಾರಾಮಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಈ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ.

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗ ‘ಶಕ್ತಿ ಯೋಜನೆ’ ಯಡಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಜೂನ್‌ 11ರಿಂದ ಅನ್ವಯಿಸುವಂತೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿ ಆದೇಶವನ್ನು ಹೊರಡಿಸಿದೆ. ಈ ಆದೇಶದ ಪ್ರಕಾರ ಹವಾನಿಯಂತ್ರಿತ (ಎಸಿ) ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇರುವುದಿಲ್ಲ ಎಂದು ತಿಳಿಸಿದೆ.

ಈ ಹಿನ್ನೆಲೆ ಚಿಗರಿ ಬಸ್‌ಗಳು ಸಹ ಎಸಿ ಬಸ್ ಗಳಾಗಿರುವುದರಿಂದ ಸರ್ಕಾರದ ಈ ಯೋಜನೆ ಚಿಗರಿ ಬಸ್‌ಗಳಿಗೆ ಅನ್ವಯ ಆಗುವುದಿಲ್ಲ. ಹೀಗಾಗಿ ಮಹಿಳೆಯರು ಸಹಕರಿಸಬೇಕು ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಗೂಂಡಾಗಿರಿ: ಆರೋಪ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...

ರಾಯಚೂರು | ಪತ್ನಿ ಹತ್ಯೆಗೈದು ಪತಿ ಆತ್ಮಹತ್ಯೆ

ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದ ದುರುಳ ಪತಿಯೊಬ್ಬ, ತಾನೂ ನೇಣು...