ಬಾಗೇಪಲ್ಲಿ | ಸರ್ಕಾರಕ್ಕೆ ಏನೇ ಮೋಸ ಮಾಡಿದರೂ ಸತ್ಯಕ್ಕೆ ಗೆಲುವು: ಬಿಜೆಪಿ ಪರಾಜಿತ ಅಭ್ಯರ್ಥಿ ಸಿ ಮುನಿರಾಜು

Date:

ಶಾಸಕ ಸುಬ್ಬಾರೆಡ್ಡಿಯವರು ಜನರಿಗೆ ತಪ್ಪು ಮಾಹಿತಿ ಕೊಟ್ಟಿದ್ದರು. ಅವರು ಸರ್ಕಾರಕ್ಕೆ ಏನೇ ಮೋಸ ಮಾಡಿದರೂ ಕೂಡ ಸತ್ಯಕ್ಕೇ ಗೆಲುವು. ನಾವು ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದೆವು, ಅದರಂತೆ ನ್ಯಾಯಾಲಯದಲ್ಲಿ ಇವತ್ತು ನಮಗೆ ಜಯ ಸಿಕ್ಕಿದೆ ಎಂದು ಬಾಗೇಪಲ್ಲಿ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಸಿ ಮುನಿರಾಜು ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಎಸ್ ​ಎನ್​​​​ ಸುಬ್ಬಾರೆಡ್ಡಿ ಆಯ್ಕೆಯೇ ಅಸಿಂಧು ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್‌ಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ನಮ್ಮ ವಕೀಲರ ಜತೆ ಚರ್ಚೆ ಮಾಡಿ ಮುಂದಿನ ಹೆಜ್ಜೆ ಇಡುತ್ತೇವೆ. ಅವರು ಸುಪ್ರೀಂ ಕೋರ್ಟಿಗೆ ಹೋದರೂ ಕೂಡ ಅಸಿಂಧಿವೇ ಆಗುತ್ತದೆ. ಯಾಕೆಂದರೆ ತಪ್ಪು ತಪ್ಪೇ ಅಲ್ವಾ, ಅಲ್ಲಿಯೂ ತಪ್ಪನ್ನು ಎತ್ತಿ ಹಿಡಿಯುತ್ತಾರೆ. ಹಾಗಾಗಿ ಈಗ ಸುಬ್ಬಾರೆಡ್ಡಿ ಅಸಿಂಧು ಅಲ್ಲ ಅನರ್ಹರಾಗಿದ್ದಾರೆ” ಎಂದರು.

“ಯಾವುದೇ ರಾಜಕಾರಣಿ ಆದರೂ ಮಾಡಿರುವ ತಪ್ಪುಗಳನ್ನು ಮುಚ್ಚಿಕೊಂಡರೇ ಇದೇ ರೀತಿ ಆಗುತ್ತೆ ಇದನ್ನು ಗಮನಿಸಿ ಎಲ್ಲ ರಾಜಕಾರಣಿಗಳು ಅಫಿಡವಿಟ್‌ನಲ್ಲಿ ಸರಿಯಾದ ಮಾಹಿತಿ ಕೊಡಬೇಕು. ಸುಪ್ರೀಂ ಕೋರ್ಟ್‌ನಲ್ಲಿ ಅಸಿಂಧು ಎಂದು ತೀರ್ಪು ಬರುತ್ತದೆ. ಮುಂದಿನ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್‌ಗೆ ನಾನು ಸಿದ್ಧನಿದ್ದೇನೆ” ಎಂದು ಹೇಳಿದರು.

ಏನಿದು ಪ್ರಕರಣ?

ಕಾಂಗ್ರೆಸ್​ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಚುನಾವಣಾ ಅಯೋಗಕ್ಕೆ ಸಲ್ಲಿಸಿರುವ ನಾಮಪತ್ರ ದೋಷಪೂರಿತವಾಗಿತ್ತೆಂದು ಆರೋಪಿಸಲಾಗಿತ್ತು. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ 2023 ಮೇ 10ರಂದು ನಡೆದ ಚುನಾವಣೆ ವೇಳೆ ಸಲ್ಲಿಸಿದ್ದ ನಾಮಪತ್ರದಲ್ಲಿ ಬಾಗೇಪಲ್ಲಿಯ ಸದರಿ ನಾಮಪತ್ರದಲ್ಲಿ ಆಸ್ತಿ ವಿವರಗಳನ್ನು ಮುಚ್ಚಿಟ್ಟಿದ್ದರು ಮತ್ತು ಆಸ್ತಿಗಳ ತೆರಿಗೆ ಪಾವತಿ ಬಾಕಿ ಕುರಿತು ಮಾಹಿತಿ ನೀಡದೆ ಚುನಾವಣಾ ಅಕ್ರಮ ಎಸಗಿದ್ದಾರೆಂದು ಪರಾಜಿತ ಬಿಜೆಪಿ ಅಭ್ಯರ್ಥಿ ಸಿ ಮುನಿರಾಜು ಆರೋಪ ಮಾಡಿದ್ದರು. ಅವರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ಹೈಕೋರ್ಟ್​ ಇಂದು ತೀರ್ಪು ಪ್ರಕಟಿಸಿದ್ದು, ಕಾಂಗ್ರೆಸ್​​ ಶಾಸಕ ಎಸ್ ​ಎನ್​​​​ ಸುಬ್ಬಾರೆಡ್ಡಿ ಆಯ್ಕೆಯೇ ಅಸಿಂಧು ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಇದನ್ನು ಓದಿದ್ದೀರಾ..? ಚಿಮುಲ್ ಮೊದಲ ಅಧ್ಯಕ್ಷರಾಗಿ ಕಾಂಗ್ರೆಸ್‌ನ ವಿ. ಮಂಜುನಾಥ ರೆಡ್ಡಿ ಆಯ್ಕೆ

ನ್ಯಾ. ಎಂಜಿಎಸ್ ಕಮಲ್ ಅವರಿದ್ದ ಪೀಠದಿಂದ ತೀರ್ಪು ಪ್ರಕಟಿಸಲಾಗಿದೆ ಎಸ್ ​ಎನ್​​​​ ಸುಬ್ಬಾರೆಡ್ಡಿ ಆಯ್ಕೆ ಬಗ್ಗೆ ಬಿಜೆಪಿ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು ಅವರು ಸುಬ್ಬಾರೆಡ್ಡಿ ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು ಈ ಬಗ್ಗೆ ತಕರಾರು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತನ ಭೂಹಕ್ಕಿಗೆ ‘ಪೋಡಿ’ ಅಡ್ಡಿ: ಆನ್‌ಲೈನ್ ಸೇವೆಯಿದ್ದರೂ ಮುಗಿಯದ ಅಲೆದಾಟ!

ರೈತನಿಗೆ ಭೂಮಿಯೇ ಬದುಕು. ಆ ಭೂಮಿಯ ಗಡಿ ಎಲ್ಲಿ? ಎಷ್ಟು ವಿಸ್ತೀರ್ಣ?...

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...