ಜೀರೊ ಟ್ರಾಫಿಕ್‌ ಜೊತೆಗೆ ಹಾರ-ತುರಾಯಿ ಸನ್ಮಾನ ಬೇಡ; ಸಿದ್ದರಾಮಯ್ಯ

Date:

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ ಅವರಿಗೆ ಹೋದಲೆಲ್ಲ ಅಭಿಮಾನಿಗಳು, ಹಾರ ತುರಾಯಿಗಳನ್ನು ಹಾಕಿ ಸನ್ಮಾನಿಸುತ್ತಿದ್ದಾರೆ. ಹಾಗಾಗಿ ಸನ್ಮಾನ ರೂಪದಲ್ಲಿ ಬರುವ ಹಾರ ತುರಾಯಿ ಸ್ವೀಕರಿಸದಿರಲು ಮತ್ತು ಜೀರೊ ಟ್ರಾಫಿಕ್‌ ಸೌಲಭ್ಯ ಬೇಡ ಎಂದು ನಿರ್ಧರಿಸಿದ್ದಾರೆ.

ಈ ಕುರಿತು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಸಿದ್ದರಾಮಯ್ಯ ಅವರು, “ನಾಳೆಯಿಂದ ಸಾರ್ವಜನಿಕರಿಂದ ಗೌರವ – ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು – ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ, ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ” ಎಂದು ಹೇಳಿದ್ದಾರೆ.

“ಪ್ರೀತಿ, ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ, ಅಭಿಮಾನ ಸದಾ ನನ್ನ ಮೇಲಿರಲಿ” ಎಂದು ತಿಳಿಸಿದ್ದಾರೆ.

ಜೀರೊ ಟ್ರಾಫಿಕ್ ಸೌಲಭ್ಯ ಹಿಂದಕ್ಕೆ

“ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೊ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾನು – ಸವದಿ ಸಚಿವರಾಗಬೇಕಿತ್ತು ಎನ್ನುವುದು ಜನರ ಅಭಿಲಾಷೆಯಾಗಿತ್ತು : ಜಗದೀಶ ಶೆಟ್ಟರ್

ಸಚಿವ ಸ್ಥಾನಕ್ಕೆ ನಾನೆಂದೂ ಬೇಡಿಕೆ ಇಟ್ಟಿಲ್ಲ, ಇಡುವುದೂ ಇಲ್ಲ ಯಾವುದೇ ಸ್ಥಾನ ಕೊಟ್ಟರೂ...

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ...

ಕರ್ನಾಟಕದ ಜಯವನ್ನು ಮಧ್ಯಪ್ರದೇಶದಲ್ಲಿ ಪುನರಾವರ್ತಿಸಲಿದ್ದೇವೆ: ರಾಹುಲ್ ಗಾಂಧಿ

ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಹಿರಿಯ ನಾಯಕರು...

ನೀತಿ ಆಯೋಗದ ಸಭೆಗೆ ಹಾಜರಾಗದೆ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ : ಬಿಜೆಪಿ

ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ...