ಎಲ್ಲಿಯವರೆಗೆ ಇಸ್ಲಾಂ ಇರುತ್ತದೋ, ಅಲ್ಲಿಯವರೆಗೆ ಜಗತ್ತಿಗೆ ನೆಮ್ಮದಿ ಇರುವುದಿಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾವಾಗಲೂ ವಿವಾದಾತ್ಮಕ ಮತ್ತು ಪ್ರಚೋದನಾಕಾರಿ ಹೇಳಿಕೆ ಮೂಲಕವೇ ವಿವಾದ ಸೃಷ್ಠಿಸಿ, ಸುದ್ದಿಯಾಗುವ ಅನಂತಕುಮಾರ್ ಹೆಗಡೆ, ಇತ್ತಿಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಏಕವಚನದಲ್ಲಿ ನಿಂದಿಸಿದ್ದರು. ಅಲ್ಲದೆ, ಬಾಬ್ರಿ ಮಸೀದಿಯಂತೆ ಪಳ್ಳಿ ಮಸೀದಿಯೂ ಧ್ವಂಸವಾಗುತ್ತದೆಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು. ಇದೀಗ, ಇಸ್ಲಾಂ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿರುವ ಹೆಗಡೆ, “ಎಲ್ಲಿಯವರೆಗೆ ಇಸ್ಲಾಂ ಇರುತ್ತದೋ, ಅಲ್ಲಿಯವರೆಗೆ ಜಗತ್ತಿಗೆ ನೆಮ್ಮದಿ ಇರುವುದಿಲ್ಲ. ಬಿಜೆಪಿ, ಸಂಘಪರಿವಾರ ಇದ್ದರೆ ಮಾತ್ರ ನೆಮ್ಮದಿ ಇರುತ್ತದೆ” ಎಂದು ಹೇಳಿದ್ದಾರೆ.
“ಹಿಂದು ಧರ್ಮ, ದೇಶ ಉಳಿಯಲು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು. ನಾವಿದ್ದಲ್ಲಿ ಜಗತ್ತಿಗೆ ನೆಮ್ಮದಿ ಇರುತ್ತದೆ. ಬಿಜೆಪಿಯ ಉತ್ಸಾಹದಿಂದ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಶಸ್ತ್ರ ತ್ಯಜಿಸಿದೆ” ಎಂದು ಹೇಳಿದ್ದಾರೆ.
ಇವರು ಇರುವುದರಿಂದಲೇ ದೇಶದಲ್ಲಿ ಅಶಾಂತಿ ಕೋಮುಗಲಭೆ ದಲಿತ ಹಿಂದುಳಿದ ವರ್ಗಗಳ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇರುತ್ತವೆ ಎಂದು ಜನಸಾಮಾನ್ಯರು ಮಾಡಿಕೊಳ್ಳುವುದು ಈ ಮನುವ್ಯಾಧಿಗೆ ಗಮನಕ್ಕೆ ಬಂದಿರಲಿಕ್ಕಿಲ್ಲ
100 💯 yes