- ‘ಮೂರು ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ನೀಡಲಾಗುತ್ತದೆ’
- ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊಸದಾಗಿ 3 ಲಕ್ಷ ಜನರು ಅರ್ಜಿ ಹಾಕಿದ್ದಾರೆ’
ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊಸದಾಗಿ 3 ಲಕ್ಷ ಜನರು ಅರ್ಜಿ ಹಾಕಿದ್ದಾರೆ. ಈ ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ಮಾಡಲು ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಹೆಚ್ ಮುನಿಯಪ್ಪ ತಿಳಿಸಿದರು.
ನಾಲ್ಕು ಚಕ್ರ ವಾಹನ ಇದ್ದರೆ ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಅವರು, ಈ ನಿಯಮ ಬಿಜೆಪಿ ಸರ್ಕಾರದ ಅವದಿಯದ್ದು. ಸದ್ಯಕ್ಕೆ ಈ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ತೀರ್ಮಾನ ಮಾಡಿಲ್ಲ ಎಂದು ಹೇಳಿದರು.
“1.28 ಕೋಟಿ ಜನರು ಪಡಿತರ ಚೀಟಿ ಹೊಂದಿದ್ದಾರೆ. ಎಲ್ಲವನ್ನು ಪರಿಶೀಲನೆ ಮಾಡಿ ಎಲ್ಲರಿಗೂ ಅಕ್ಕಿ ವಿತರಣೆ ಮಾಡುವ ಬಗ್ಗೆ ಕ್ರಮವಹಿಸುತ್ತೇವೆ. ಯಾರು ಅರ್ಹರಿರುತ್ತಾರೆ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ” ಎಂದು ಸಚಿವರು ಭರವಸೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬ್ಯಾರಿಕೇಡ್ ಬಂಧಿ | ಬಿಜೆಪಿ ನಾಯಕರ ಕಾಲೆಳೆದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್
“ಮೂರು ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ನೀಡಲಾಗುತ್ತದೆ. ಬ್ಯಾಂಕ್ ಖಾತೆ ಇಲ್ಲದಿದ್ದಕ್ಕೆ ಕೆಲವರ ಕಾರ್ಡ್ ರದ್ದಾಗಿತ್ತು. ಈ ಬಗ್ಗೆಯೂ ಕೂಡ ಕ್ರಮ ವಹಿಸಲು ಸೂಚನೆ ನೀಡಲಾಗಿದೆ” ಎಂದರು.
ಅರ್ಹತೆ ಇಲ್ಲದಿದ್ದರೂ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ನಾಗರಿಕರನ್ನು ಆಹಾರ ಇಲಾಖೆಯು ಸರ್ವೇ ನಡೆಸಿ 35 ಸಾವಿರಕ್ಕೂ ಹೆಚ್ಚು ಕಾರ್ಡ್ಗಳನ್ನು ರದ್ದುಗೊಳಿಸಿದೆ. ಹಾಗೆಯೇ ಮರಣ ಹೊಂದಿದ 4.55 ಲಕ್ಷ ಜನರ ಹೆಸರನ್ನು ಕಡಿತಗೊಳಿಸುವ ಮೂಲಕ ಸರ್ಕಾರಕ್ಕೆ 6 ರಿಂದ 7 ಕೋಟಿ ರೂ. ಉಳಿತಾಯವಾಗಿದೆ.