ಬಿಪಿಎಲ್ ಕಾರ್ಡ್​ ರದ್ದು ಮಾಡುವ ವಿಚಾರ ಸರ್ಕಾರದ ಮುಂದಿಲ್ಲ: ಸಚಿವ ಕೆ ಎಚ್‌ ಮುನಿಯಪ್ಪ

Date:

  • ‘ಮೂರು ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್​, ಎಪಿಎಲ್​​ ಕಾರ್ಡ್ ನೀಡಲಾಗುತ್ತದೆ’
  • ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊಸದಾಗಿ 3 ಲಕ್ಷ ಜನರು ಅರ್ಜಿ ಹಾಕಿದ್ದಾರೆ’

ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್​ ರದ್ದು ಮಾಡುವುದಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊಸದಾಗಿ 3 ಲಕ್ಷ ಜನರು ಅರ್ಜಿ ಹಾಕಿದ್ದಾರೆ. ಈ ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ಮಾಡಲು ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಹೆಚ್​ ಮುನಿಯಪ್ಪ ತಿಳಿಸಿದರು.

ನಾಲ್ಕು ಚಕ್ರ ವಾಹನ ಇದ್ದರೆ ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಅವರು, ಈ ನಿಯಮ ಬಿಜೆಪಿ ಸರ್ಕಾರದ ಅವದಿಯದ್ದು. ಸದ್ಯಕ್ಕೆ ಈ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ತೀರ್ಮಾನ ಮಾಡಿಲ್ಲ ಎಂದು ಹೇಳಿದರು.

“1.28 ಕೋಟಿ ಜನರು ಪಡಿತರ ಚೀಟಿ ಹೊಂದಿದ್ದಾರೆ. ಎಲ್ಲವನ್ನು ಪರಿಶೀಲನೆ ಮಾಡಿ ಎಲ್ಲರಿಗೂ ಅಕ್ಕಿ ವಿತರಣೆ ಮಾಡುವ ಬಗ್ಗೆ ಕ್ರಮವಹಿಸುತ್ತೇವೆ. ಯಾರು ಅರ್ಹರಿರುತ್ತಾರೆ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ” ಎಂದು ಸಚಿವರು ಭರವಸೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬ್ಯಾರಿಕೇಡ್ ಬಂಧಿ | ಬಿಜೆಪಿ ನಾಯಕರ ಕಾಲೆಳೆದ ಪ್ರಿಯಾಂಕ್ ಖರ್ಗೆ, ದಿನೇಶ್‌ ಗುಂಡೂರಾವ್

“ಮೂರು ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್​, ಎಪಿಎಲ್​​ ಕಾರ್ಡ್ ನೀಡಲಾಗುತ್ತದೆ. ಬ್ಯಾಂಕ್ ಖಾತೆ ಇಲ್ಲದಿದ್ದಕ್ಕೆ ಕೆಲವರ ಕಾರ್ಡ್ ರದ್ದಾಗಿತ್ತು. ಈ ಬಗ್ಗೆಯೂ ಕೂಡ ಕ್ರಮ ವಹಿಸಲು ಸೂಚನೆ ನೀಡಲಾಗಿದೆ” ಎಂದರು.

ಅರ್ಹತೆ ಇಲ್ಲದಿದ್ದರೂ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ನಾಗರಿಕರನ್ನು ಆಹಾರ ಇಲಾಖೆಯು ಸರ್ವೇ ನಡೆಸಿ 35 ಸಾವಿರಕ್ಕೂ ಹೆಚ್ಚು ಕಾರ್ಡ್​​​ಗಳನ್ನು ರದ್ದುಗೊಳಿಸಿದೆ. ಹಾಗೆಯೇ ಮರಣ ಹೊಂದಿದ 4.55 ಲಕ್ಷ ಜನರ ಹೆಸರನ್ನು ಕಡಿತಗೊಳಿಸುವ ಮೂಲಕ ಸರ್ಕಾರಕ್ಕೆ 6 ರಿಂದ 7 ಕೋಟಿ ರೂ. ಉಳಿತಾಯವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನಟ ದ್ವಾರಕೀಶ್ ನಿಧನಕ್ಕೆ ಶಿವರಾಜ್‌ಕುಮಾರ್ ಸಂತಾಪ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು....

ದಾವಣಗೆರೆ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ಘೋಷಣೆ

ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ...

ವಿಜಯೇಂದ್ರ, ಸಿಟಿ ರವಿ, ಪಿ.ರಾಜೀವ್‌ನಿಂದ ಬಿಜೆಪಿ ಹಾಳಾಗುತ್ತಿದೆ: ಮಾಲೀಕಯ್ಯ ಗುತ್ತೇದಾರ ಕಿಡಿ

ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ...