ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Date:

  • ‘ಮಹದಾಯಿಗೆ ಸಂಬಂಧಿಸಿದ ಎಲ್ಲ ವರದಿ ಕೇಂದ್ರಕ್ಕೆ ಕಳುಹಿಸಲಾಗಿದೆ’
  • ‘ಜೆಡಿಎಸ್, ಬಿಜೆಪಿಯ ಬಿ ಟೀಂ ಎಂದಾಗ ನನ್ನ ಮೇಲೆ ಸಿಟ್ಟಾಗಿದ್ದರು’
  • ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ

ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ಜೆಡಿಎಸ್‌ಗೆ ಯಾವುದೇ ಸಿದ್ಧಾಂತವಿಲ್ಲ

ಜೆಡಿಎಸ್, ಬಿಜೆಪಿಯ ಬಿ ಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, “ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು. ಜನತಾ ದಳ ಜಾತ್ಯತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಸೇರಿಕೊಳ್ಳುತ್ತಿರುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಹೇಳಿರುವುದು, ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂದು ತೋರಿಸುತ್ತದೆ. ಅಧಿಕಾರಕ್ಕಾಗಿ ಏನಾದರೂ ಮಾಡಲು ಸಿದ್ಧ ಎಂಬುದನ್ನು ಅವರು ತೋರಿಸಿದ್ದಾರೆ” ಎಂದು ಹೇಳಿದರು.

ರೈತರ ತೊಂದರೆಯನ್ನು ನೀಗಿಸಲು ವಿದ್ಯುತ್ ಸರಬರಾಜಿಗೆ ಕ್ರಮ

ರೈತರು ವಿದ್ಯುತ್ ಸರಬರಾಜಿನ ವ್ಯತ್ಯಯಕ್ಕಾಗಿ ಹೋರಾಟ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆಗಸ್ಟ್ ತಿಂಗಳಲ್ಲಿ ಸರಿಯಾಗಿ ಮಳೆಯಾಗಿಲ್ಲ, ಬೇಸಿಗೆಯಲ್ಲಿ ಪಂಪಸೆಟ್ ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಇದರಿಂದ ವಿದ್ಯುತ್ ನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಿದೆ. ರೈತರ ತೊಂದರೆಯನ್ನು ನೀಗಿಸಲು, ವಿದ್ಯುತ್ ನ್ನು ಹೊರಗಿನಿಂದ ಖರೀದಿಸಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿಶ್ರೇಷ್ಠತೆಯ ವ್ಯಸನ- ‘ಸನಾತನ’ ಮನಸ್ಥಿತಿಯ ವ್ಯಾಧಿ

ಜಿ20 ಸಭೆ; ವಿರೋಧಪಕ್ಷದ ನಾಯಕರನ್ನು ಆಹ್ವಾನಿಸದಿರುವುದು ತಪ್ಪು

ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಸಭೆಗೆ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಮಾತನಾಡಿ, “ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ಲೋಕಸಭೆಯ ವಿರೋಧಪಕ್ಷದ ನಾಯಕರಾಗಿದ್ದು, ಅವರನ್ನು ಜಿ20 ಸಭೆ ಆಹ್ವಾನಿಸದಿರುವುದು ತಪ್ಪು” ಎಂದರು.

ಪರಿಹಾರ ಮಾರ್ಗಸೂಚಿ ಪರಿಷ್ಕರಣೆಗೆ ಮನವಿ

“ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ” ಎಂದರು.

ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿಗಳಾಗಬೇಕೆಂದು ಪಕ್ಷದ ಅಭಿಮಾನಿಗಳು ಆಶಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, “ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರಧಾನಿಗಳಾಗಬಹುದು. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ . ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಿಂದ ನೇರವಾಗಿ ಪ್ರಧಾನಮಂತ್ರಿಗಳಾದರು. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ” ಎಂದು ತಿಳಿಸಿದರು.

ಕಳಪೆ ಸಮವಸ್ತ್ರ ವಿತರಣೆ; ಕ್ರಮ ಕೈಗೊಳ್ಳಲು ತೀರ್ಮಾನ

ಚುನಾವಣೆ ಸಂದರ್ಭದಲ್ಲಿ ಹಿಜಾಬ್, ಹಲಾಲ್ ಪ್ರಕರಣಗಳು, ಹಿಂದುತ್ವ, ಸನಾತನ ಧರ್ಮದ ಕುರಿತು ಚರ್ಚೆ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಹಿಜಾಬ್ ಹಲಾಲ್ ಪ್ರಕರಣಗಳು ನ್ಯಾಯಾಲಯದಲ್ಲಿದೆ. ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಬಿ ಕುಪ್ಪೆ-ಬಾವಲಿ ನಡುವಿನ ಕಳಪೆ ರಸ್ತೆ ಕಾಮಗಾರಿ

₹20 ಕೋಟಿ ವೆಚ್ಚದ ರಸ್ತೆ ವರ್ಷ ತುಂಬುವ ಮುನ್ನವೇ ಕಿತ್ತುಬಂತು; ಕಾಕನಕೋಟೆ...

ಹಾಸನ | ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯಲ್ಲಿ ಕರ್ನಾಟಕ ವಿನಾಯಿತಿ ಪಡೆಯಲು ಕೆ.ಪಿ.ಆರ್.ಎಸ್ ಆಗ್ರಹ

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳು ಹಾಗೂ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ...

ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...