ಶಾಲಾ ಶೈಕ್ಷಣಿಕ ಪ್ರವಾಸ, ಮದುವೆಗಳಿಗಿಲ್ಲ ಸಾರಿಗೆ ಬಸ್‌ಗಳು

Date:

Advertisements

ಪ್ರತಿ ವರ್ಷ ನವೆಂಬರ್, ಡಿಸೆಂಬರ್ ಮತ್ತು ಜನವರಿಯಲ್ಲಿ ಶಾಲಾ ಪ್ರವಾಸಗಳು ಮತ್ತು ಕಾರ್ತಿಕ ಮಾಸದ ವಿವಾಹಗಳು ನಡೆಯುತ್ತವೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಪ್ರವಾಸಕ್ಕಾಗಿ ಸರ್ಕಾರಿ ಬಸ್‌ಗಳನ್ನು ಕ್ಯಾಶುಯಲ್ ಗುತ್ತಿಗೆ (ಸಿಸಿ) ಆಧಾರದ ಮೇಲೆ ಕಾಯ್ದಿರಿಸುತ್ತವೆ. ಆದರೆ, ಈ ವರ್ಷ ಕಿತ್ತೂರು ಕರ್ನಾಟಕ ಭಾಗದಲ್ಲಿ ಸಾರಿಗೆ ಬಸ್‌ಗಳನ್ನು ಕಾಯ್ದಿರಿಸುವುದು ಶಾಲೆಗಳಿಗೆ ಸವಾಲಾಗಿದೆ. ಹಲವು ಶಾಲೆಗಳು ಬಸ್‌ಗಳು ದೊರೆಯದೆ ಪ್ರವಾಸಗಳನ್ನು ರದ್ದುಗೊಳಿಸುವ ಚಿಂತನೆ ನಡೆಸಿವೆ.

ಸಾರಿಗೆ ಬಸ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಕ್ಕೆ ಒದಗಿಸಲು ಸಾರಿಗೆ ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ. ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರಿಗೆ ಬಸ್‌ಗಳ ಕಾರ್ಯಾಚರಣೆ ಹೆಚ್ಚಾಗಿದೆ. ಯೋಜನೆಯಿಂದಾಗಿ ಮರುಪಾವತಿ ಮೂಲಕ ಸರ್ಕಾರದಿಂದ ಉತ್ತಮ ಆದಾಯವನ್ನೂ ಸಾರಿಗೆ ಘಟಕಗಳು ಪಡೆಯುತ್ತಿವೆ. ಅಲ್ಲದೆ, ಬಸ್‌ಗಳ ಸಂಚಾರ ಮಾರ್ಗದಲ್ಲಿ ಪ್ರಯಾಣಿಕರ ಬೇಡಿಕೆಗಳನ್ನು ಪೂರೈಸಲು ಆದ್ಯತೆ ನೀಡುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳುತ್ತಿರುವುದಾಗಿ ವರದಿಯಾಗಿದೆ

ಹೀಗಾಗಿ, ಶಾಲೆಗಳು ಬಸ್‌ಗಳ ಲಭ್ಯತೆಗೆ ಅನುಗುಣವಾಗಿ ತಮ್ಮ ಪ್ರವಾಸಗಳನ್ನು ಯೋಜಿಸಬೇಕು ಮತ್ತು ಬಸ್‌ಗಳ ಲಭ್ಯತೆಗಾಗಿ ಕಾಯುವಂತೆ ಮಾಡಿದೆ. ಪರಿಣಾಮ, ಬಸ್‌ಗಳ ಅಲಭ್ಯತೆಯಿಂದ ಹಲವು ಶಾಲೆಗಳು ಶೈಕ್ಷಣಿಕ ಪ್ರವಾಸಗಳನ್ನು ರದ್ದುಗೊಳಿಸಲು ಮಂದಾಗಿವೆ ಎಂದು ತಿಳಿದುಬಂದಿದೆ.

Advertisements

ವಿಶೇಷವಾಗಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಹಲವು ಘಟಕಗಳಲ್ಲಿ ಬಸ್‌ಗಳ ಕೊರತೆ ಇದೆ. ಪ್ರಸ್ತುತ ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗಗಳಲ್ಲಿ ಟೈರ್‌ಗಳು ಮತ್ತು ಬಿಡಿಭಾಗಗಳ ಕೊರತೆಯಿಂದ ಹಲವು ಬಸ್‌ಗಳು ರಸ್ತೆಗಿಳಿಯುತ್ತಿಲ್ಲ. ಅಲ್ಲದೆ, ಸಾರಿಗೆ ಇಲಾಖೆಯ ನಾಲ್ಕು ಸಾರಿಗೆ ನಿಗಮಗಳು (ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಎನ್‌ಇಕೆಆರ್‌ಟಿಸಿ, ಬಿಎಂಟಿಸಿ) ಸಿಸಿ ಬಸ್‌ಗಳ ಬೇಡಿಕೆಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಕೆಎಸ್‌ಆರ್‌ಟಿಸಿ ಬೆಂಗಳೂರಿನ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಟಿಒಐ ವರದಿ ಮಾಡಿದೆ.

“ಸಾಮಾನ್ಯ ಪ್ರಯಾಣಿಕರ ಹಿತದೃಷ್ಟಿಯಿಂದ ಹೊಸ ಬಸ್‌ಗಳು ಬರುವವರೆಗೆ ಸಿಸಿ ಬುಕಿಂಗ್ ಅನ್ನು ಮುಂದೂಡಲಾಗಿದೆ. ಸ್ಥಳೀಯ ಅಗತ್ಯಗಳನ್ನು ಪೂರೈಸಲು ನಾವು ಅಂತರ-ರಾಜ್ಯ ಸೇವೆಗಳನ್ನು ನಿಲ್ಲಿಸಿದ್ದೇವೆ. ಈಗಿರುವ ಬಸ್‌ಗಳನ್ನು ಸಿಸಿ ಬುಕ್ಕಿಂಗ್‌ಗೆ ಒದಗಿಸಿದರೆ ಬಸ್‌ ನಿಲ್ದಾಣಗಳಲ್ಲಿ ಜನಸಂದಣಿಯನ್ನು ನಿಭಾಯಿಸುವುದು ಕಷ್ಟವಾಗುತ್ತದೆ” ಎಂದು ಬೆಳಗಾವಿ ವಿಭಾಗೀಯ ಸಂಚಾರ ಅಧಿಕಾರಿ ಕೆ.ಕೆ.ಲಮಾಣಿ ತಿಳಿಸಿದ್ದಾರೆ.

“ಸಿಸಿ ಬುಕ್ಕಿಂಗ್‌ಗೆ ಬಸ್ ಒದಗಿಸದಂತೆ ಆದೇಶವಿದೆ ಎಂದು ಸ್ಥಳೀಯ ಡಿಪೋ ಅಧಿಕಾರಿಗಳು ತಿಳಿಸಿದ್ದಾರೆ. ಆದೇಶದ ಪ್ರತಿಯನ್ನು ಒದಗಿಸುವಂತೆ ನಾನು ಅವರನ್ನು ಕೇಳಿದಾಗ, ಅವರು ಅದನ್ನು ನೀಡಲು ನಿರಾಕಿರಿಸದರು” ಎಂದು ಬೆಳಗಾವಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಪ್ರಕಾಶ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X