ವಿಜಯಪುರ | ನಾಲ್ಕು ತಿಂಗಳಿಂದ ವೇತನ ನೀಡದ ಗುತ್ತಿಗೆದಾರರು; ಪೌರ ಕಾರ್ಮಿಕರ ಧರಣಿ

Date:

ವಿಜಯಪುರ ಮಹಾನಗರ ಪಾಳಿಕೆಯಲ್ಲಿ ಕೆಲಸಮಾಡುತ್ತಿರುವ ಕಾರ್ಮಿಕರಿಗೆ ಕಳೆದ ನಾಲ್ಕು ತಿಂಗಳುಗಳಿಂದ ವೇತನವನ್ನೇ ನೀಡಲಾಗಿಲ್ಲ. ವೇತನ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

- Advertisement -

ವಿಜಯಪುರ ಮಹಾನಗರ ಪಾಲಿಕೆಯ ವಾಹನ ಚಾಲಕರು ಮತ್ತು ನಿರ್ವಾಹಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ಮುನ್ಸಿಪಲ್ ಕಾರ್ಮಿಕರ ಸಂಘ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಪ್ರತಿಭಟನೆ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ಲಕ್ಷ್ಮಣ್ ಹಾಂದ್ರಳಾ, “ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಸುಮಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಚಾಲಕ, ನಿರ್ವಾಹಕ, ಕಸ ಸಂಗ್ರಹಕಾರರು, ಲೋಡರ್ಸ್ ಯುಜಿಡಿ ಕಾರ್ಮಿಕರು ಹಾಗೂ ಸೂಪರ್ವೈಸರ್‌ಗಳು ಹಾಗೂ ನೇರ ಪಾವತಿ ಪೌರ ಕಾರ್ಮಿಕರಾಗಿ, ನೂರಾರು ಜನ ದುಡಿಯುತ್ತಿದ್ದಾರೆ. ಇವರಿಗೆ, ನಾಲ್ಕು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಇಲ್ಲಿಯವರೆಗೆ ಇ.ಎಸ್.ಐ ಮತ್ತು ಪಿಎಫ್ ಹಣವನ್ನು ಭರ್ತಿ ಮಾಡಿಲ್ಲ” ಎಂದು ಕಿಡಿಕಾರಿದರು.

“ನಾವು ಈಗಾಗಲೇ ಸಂಘದ ವತಿಯಿಂದ ಅನೇಕ ಬಾರಿ ಗುತ್ತಿಗೆದಾರರಿಗೆ ಮೌಖಿಕವಾಗಿ ಹೇಳಿದರು, ವೇತನ ಪಾವತಿ ಮಾಡದೆ ಉಡಾಫೆಯಾಗಿ, ನಿಮ್ಮ ಮೇಲಾಧಿಕಾರಿಗಳು ಚೆಕ್ ನೀಡಿರುವುದಿಲ್ಲ ಎಂದು ಜಾರಿಕೆಯ ಉತ್ತರ ನೀಡುತ್ತಿದ್ದಾರೆ. ನಾಲ್ಕು ತಿಂಗಳ ವೇತನ ಇಲ್ಲದೆ ಕಾರ್ಮಿಕರ ಮಕ್ಕಳ ಶಾಲಾ ಶುಲ್ಕ, ಮನೆ ಬಾಡಿಗೆ, ತಿನ್ನಲು ರೇಷನ್ ಇಲ್ಲದೆ ಪರದಾಡುವ ಸ್ಥಿತಿ ಉಂಟಾಗಿದೆ. ಆದ್ದರಿಂದ ಕೆಲಸ ನಿಲ್ಲಿಸಿ, ಅನಿರ್ಧಿಷ್ಟಾವಧಿ ಮುಷ್ಕರ ಮಾಡಲು ನಿರ್ಧರಿಸಿದ್ದಾರೆ” ಎಂದರು.

ಇನ್ನು, ವಾಹನ ಚಾಲಕರು ನಿರ್ವಾಹಕರ ಕ್ಷೇಮ ಅಭಿವೃದ್ಧಿ ಸಂಘದ ಜಿಲ್ಲಾ ಮುಖಂಡ, ಶಂಕರ್ ಚಲವಾದಿ ಮಾತನಾಡಿ, ಗುತ್ತಿಗೆದಾರರ ಹೆಸರು, ಕಲ್ಲಪ್ಪ ಜಂಬಗಿ ಮತ್ತು ಜಸ್ಕೋ ಪ್ರವೇಟ್ ಲಿಮಿಟೆಡ್ ಕಂಪನಿ ಬೆಂಗಳೂರು, ಗುತ್ತಿಗೆದಾರ ಗಣೇಶ್ ಶಂಕರ್ ಹಾಗೂ ಪರಿಸರ ಅಭಿಯಂತರರಾದ ಅಶೋಕ್ ಕುಮಾರ್ ಸಜ್ಜನ್ ಇವರು ಕೂಡಿ ಕಾರ್ಮಿಕರಿಗೆ, ನೀವು ಯಾವುದೇ ಸಂಘಟನೆ ಮಾಡಿ ವೇತನ ಹಾಗೂ ಬೇಡಿಕೆ ಮಾಡಿದರೆ, ನಿಮ್ಮನ್ನು ಕೆಲಸದಿಂದ ತೆಗೆದುಹಾಕುತ್ತೇವೆ ಎಂದು ಬೆದರಿಸುತ್ತಾರೆ. ಈಗಾಗಲೇ ಅನೇಕ ಕಾರ್ಮಿಕರನ್ನು, ಸುಳ್ಳು ಆಪಾದನೆ ಮಾಡಿ ಕೆಲಸದಿಂದ ತೆಗೆದು ಹಾಕಿದ್ದಾರೆ. ಕೆಲಸದಿಂದ ತೆಗೆದು ಹಾಕಿದ ಕಾರ್ಮಿಕರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಿ ಎಂದು ಸಂಘದಿಂದ ಮನವಿ ಮಾಡಿದರು, ಪರಿಸರ ಅಶೋಕ್ ಕುಮಾರ್ ಸಜ್ಜನ್ ರವರು, ಕೆಲಸಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಹೇಳಿ, ಅದೇ ಜಾಗದಲ್ಲಿ ಸುಮಾರು 40ರಿಂದ 50ಸಾವಿರ ತೆಗೆದುಕೊಂಡು, ಬೇರೆ ಕಾರ್ಮಿಕರನ್ನು ಬರ್ತಿ ಮಾಡಿಕೊಂಡಿದ್ದಾರೆ.

ಯಾಕೆ, ಕಾರ್ಮಿಕರು ನ್ಯಾಯಯುತವಾಗಿ ದುಡಿದಿರುವ ವೇತನ ಕೇಳಬಾರದೆ? ಎಷ್ಟು ದಿನ ಈ ಗುತ್ತಿಗೆದಾರರು ಹಾಗೂ ಅಧಿಕಾರಿಯಿಂದ ತೊಂದರೆ ಅನುಭವಿಸಬೇಕು? ನಾವು ಈಗಾಗಲೇ, ಆಯುಕ್ತರಿಗೆ ನಾಲ್ಕು ತಿಂಗಳ ವೇತನ ಆಗದೆ ಇರುವುದರ ಬಗ್ಗೆ ಮನವಿ ಮಾಡಿದ್ದಿವಿ. ಯಾವುದೇ ರೀತಿಯ ಸ್ಪಂದನೆ ಸಿಕ್ಕಿಲ್ಲ. ಅದಕ್ಕೆ, ಸಂಘದ ವತಿಯಿಂದ ಕಾರ್ಮಿಕರು ಕೆಲಸ ಬಂದ್ ಮಾಡಿ, ಅನಿರ್ದಿಷ್ಟವಾದಿ ಮುಷ್ಕರ ಮಾಡಲು ತಯಾರಾಗಬೇಕೆಂದು ಕರೆ ನೀಡಿದ್ದೇವೆ, ಎಂದು ತಮ್ಮ ಅಸಮಾಧಾನ ಹೊರ ಹಾಕಿದರು.

ಪ್ರತಿಭಟನೆಯಲ್ಲಿ, ಸಂಜು ಕಂಬಾಗಿ, ದಯಾನಂದ, ತನ್ವೀರ್ ಗೊಲ್ಸುರೋಸ್, ಮೋಸಿನ್ ಹಾಲ್ಮೆಲ್, ರಮೇಶ್ ರಾಥೋಡ್, ಸತೀಶ್ ಚಲವಾದಿ, ಜಾವೀದ್ ಅತ್ತಾರ್, ಮೋಹಿಸಿನ, ಹುಸೇನ್ ಮುಲ್ಲಾ, ಕಳ್ಳಿಮನಿ, ಸಾಗರ್ ಸೇರಿದಂತೆ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...