ಉತ್ತರ ಕನ್ನಡ | ಪ್ರಜಾ ಸೇವಾ ಆಂದೋಲನಕ್ಕೆ ಉತ್ತಮ ಸ್ಪಂದನೆ: ವಿವಿಧ ಇಲಾಖೆಗಳಿಗೆ 1,383 ಅರ್ಜಿಗಳ ಸಲ್ಲಿಕೆ

Date:

ಉತ್ತರ ಕನ್ನಡ ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ಸೆಪ್ಟೆಂಬರ್ 5ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಡೆದ ‘ಪ್ರಜಾಸೇವೆ ಆಂದೋಲನ’ ಸಭೆಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

- Advertisement -

ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಒಟ್ಟು 1,383 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳ ಪರಿಶೀಲನೆ ಹಾಗೂ ವಿಲೇವಾರಿ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದೆ. ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಂಕೋಲಾದಲ್ಲಿ ಮತ್ತು ಶಾಸಕರ ಅಧ್ಯಕ್ಷತೆಯಲ್ಲಿ ಕುಮಟಾ, ಭಟ್ಕಳ, ಶಿರಸಿ, ಯಲ್ಲಾಪುರ ಹಾಗೂ ಹಳಿಯಾಳ ತಾಲ್ಲೂಕಿನ ವಿವಿಧ ಹೋಬಳಿಗಳಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳು ನಡೆದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಕ್ಷೇತ್ರವಾರು ಅಂಕಿ-ಅಂಶಗಳ ಪ್ರಕಾರ ಕಾರವಾರ-ಅಂಕೋಲಾದಿಂದ ಗರಿಷ್ಠ 653 ಅರ್ಜಿಗಳು ಸಲ್ಲಿಕೆಯಾಗಿದ್ದು, ಶಿರಸಿ ಯಿಂದ 279, ಭಟ್ಕಳದಿಂದ 216, ಯಲ್ಲಾಪುರದಿಂದ 151, ಹಳಿಯಾಳದಿಂದ 56 ಹಾಗೂ ಕುಮಟಾ ತಾಲ್ಲೂಕಿನಿಂದ 28 ಅರ್ಜಿಗಳು ಸಲ್ಲಿಕೆಯಾಗಿವೆ.

ಈ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಮೂಲಕ ಅರ್ಜಿಗಳನ್ನು ಸಲ್ಲಿಸಿದರು. ಸಲ್ಲಿಕೆಯಾದ ಅರ್ಜಿಗಳ ಪೈಕಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಗರಿಷ್ಠ 451 ಅರ್ಜಿಗಳು ಬಂದಿವೆ. ನಂತರ ಕಂದಾಯ ಇಲಾಖೆಗೆ 270, ನಗರಾಭಿವೃದ್ಧಿ ಇಲಾಖೆಗೆ 135, ವಸತಿ ಇಲಾಖೆಗೆ 128 ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 102 ಅರ್ಜಿಗಳು ಸಲ್ಲಿಕೆಯಾಗಿವೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸಾಲ-ಠೇವಣಿ ಅನುಪಾತ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಗುರಿ: ಸಿಇಒ ಡಾ. ದಿಲೀಷ್ ಶಶಿ

ಇದೇ ವೇಳೆ ಹೆಸ್ಕಾಂ ಇಲಾಖೆಗೆ 51, ಲೋಕೋಪಯೋಗಿ ಇಲಾಖೆಗೆ 50, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ 46 ಹಾಗೂ ಸಾರಿಗೆ ಇಲಾಖೆಗೆ 30 ಅರ್ಜಿಗಳು ಸಲ್ಲಿಕೆಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 27, ಸಣ್ಣ ನೀರಾವರಿ ಇಲಾಖೆಗೆ 13, ಕಾರ್ಮಿಕ ಇಲಾಖೆಗೆ 12, ಕೌಶಲ್ಯಾಭಿವೃದ್ಧಿ ಇಲಾಖೆಗೆ 12 ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ 10 ಅರ್ಜಿಗಳು ಬಂದಿವೆ.

ಅರಣ್ಯ ಇಲಾಖೆಗೆ 7, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ 6, ಡಿಪಿಎಆರ್ (ಇ-ಆಡಳಿತ) ಹಾಗೂ ಜಲಸಂಪನ್ಮೂಲ ಇಲಾಖೆಗೆ ತಲಾ 5, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 4 ಅರ್ಜಿಗಳು ಸಲ್ಲಿಕೆಯಾಗಿವೆ. ಕೃಷಿ ಇಲಾಖೆ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ತಲಾ 3 ಅರ್ಜಿಗಳು ಬಂದಿವೆ.

ಸಹಕಾರ, ಮೂಲಸೌಕರ್ಯ, ಸಮಾಜ ಕಲ್ಯಾಣ, ಹಣಕಾಸು, ಗೃಹ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ತಲಾ 2 ಅರ್ಜಿಗಳು ಮತ್ತು ಐಟಿ-ಬಿಟಿ ಇಲಾಖೆಗೆ 1 ಅರ್ಜಿ ಸಲ್ಲಿಕೆಯಾಗಿದೆ. ಒಟ್ಟು 1,383 ಅರ್ಜಿಗಳ ಪರಿಶೀಲನೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅರ್ಜಿಗಳನ್ನು ಕಾಲಮಿತಿಯಲ್ಲಿ ಪರಿಶೀಲಿಸಿ, ಅರ್ಹತೆ ಹಾಗೂ ನಿಯಮಾನುಸಾರ ಸೂಕ್ತ ಪರಿಹಾರ ಒದಗಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಜಿಲ್ಲೆಯ ನಾಗರಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಿ, ಅವುಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಡೆದಿರುವ ‘ಪ್ರಜಾಸೇವೆ ಆಂದೋಲನ’ವು ಸಾರ್ವಜನಿಕರು ಹಾಗೂ ಆಡಳಿತ ವ್ಯವಸ್ಥೆಯ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...